ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆಯಲ್ಲಿ ಪ್ರತಿಭಟನೆ ಡನೆಸಿದ್ದಾರೆ.
ಶುಕ್ರವಾರ ಕರ್ನಾಟಕ ಬಂದ್‌ಗೆ ಬೆಂಬಲ ನೀಡಿ ಸಂಘಟನೆಯ ಕಾರ್ಯಕರ್ತರು ದಾವಣಗೆರೆಯ ಜಯದೇವ ವೃತ್ತದಿಂದ ಉಪವಿಭಾಗಾಧಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. “ತಮಿಳುನಾಡಿಗೆ ನೀರನ್ನು ಹರಿಸುವುದನ್ನು ಕೊಡಲೇ ನಿಲ್ಲಿಸಬೇಕು. ಕರ್ನಾಟಕದ ರೈತರ ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಕಾವೇರಿ ನೀರನ್ನು ಹಿಡಿದಿಟ್ಟುಕೊಳ್ಳಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯಮಹಿಳಾ ಅಧ್ಯಕ್ಷ ಸುವರ್ಣಮ್ಮ, “ನಮ್ಮಲ್ಲಿ ಮೂಲಭೂತ ಅಗತ್ಯಕ್ಕೆ ಕುಡಿಯುವ ನೀರಿಗೆ ನೀರು ಇಲ್ಲದಿರುವ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ಮಾಣ ಪ್ರಾಧಿಕಾರ ತಮಿಳುನಾಡಿಗೆ ನೀರನ್ನು ಹರಿಸುತ್ತಿರುವುದು ದುರದೃಷ್ಟ, ಈ ಕೂಡಲೇ ನೀರನ್ನು ನಿಲ್ಲಿಸಿ ಕುಡಿಯುವ ನೀರಿಗಾಗಿ ಮತ್ತು ಕರ್ನಾಟಕ ರಾಜ್ಯದ ರೈತರ ಹಿತವನ್ನು ಕಾಪಾಡಬೇಕೆಂದು ಅಗ್ರಹಿಸಿದರು. ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಲಿದೆ” ಎಂದು ತಿಳಿಸದರು.
ಸಂಘಟನೆಯ ರಾಜ್ಯಾಧ್ಯಕ್ಷ ಅವಿನಾಶ್, “ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಅವೈಜ್ಞಾನಿಕವಾಗಿದೆ. ನಮ್ಮಲ್ಲೇ ನೀರು ಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಡಲು ಆದೇಶಿಸಿರುವುದು ವಿವೇಚನಾರಹಿತವಾಗಿದೆ. ಕೂಡಲೇ ಕೇಂದ್ರ ಸರ್ಕಾರ ವೈಜ್ಞಾನಿಕವಾಗಿ ನಿರ್ವಹಣಾ ಸಮಿತಿಯೊಂದನ್ನು ಮರು ರಚನೆ ಮಾಡಿ ಕಾವೇರಿ ಕೊಳ್ಳದ ಪರಿಸ್ಥಿತಿಯನ್ನು ವಿಶ್ಲೇಷಿಸಿ ರಾಜ್ಯದ ರೈತರ ಮತ್ತು ಕುಡಿಯುವ ನೀರಿನ ಹಿತವನ್ನು ಸಂರಕ್ಷಿಸಬೇಕು. ಕರ್ನಾಟಕದಲ್ಲಿ ರೈತರು ನೀರಿಲ್ಲದೆ ಬೆಳೆಯನ್ನು ಬೆಳೆಯುವುದನ್ನು ನಿಲ್ಲಿಸಿದ್ದಾರೆ. ಆದರೆ, ತಮಿಳುನಾಡಿನ ರೈತ ಬೆಳೆಗೆ ನೀರನ್ನು ಕೇಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತೊಪಡಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಗಳ ಪದಾಧಿಕಾರಿಗಳಾದ ಮಹಿಳಾ ರಾಜ್ಯಾಧ್ಯಕ್ಷರಾದ ಮಾಲ ನಾಗರಾಜ್ ಜಿಲ್ಲಾಧ್ಯಕ್ಷ ಮಂಜುನಾಥ್ ಜಿಲ್ಲಾ ಉಪಾಧ್ಯಕ್ಷ ಆನಂದ್ ಇಟ್ಟಿಗುಡಿ ಉಪಾಧ್ಯಕ್ಷ ವೀರೇಶ್, ಬೋಜರಾಜು ಇತರೆ ಕನ್ನಡ ಕಾರ್ಯಕರ್ತರು ಇದ್ದರು.