ಕರ್ನಾಟಕ ಬಂದ್‌ | ಮೈಸೂರು ಸ್ತಬ್ಧ; ಕಬಿನಿ ಡ್ಯಾಂ ಬಳಿ ನಿಷೇಧಾಜ್ಞೆ ಜಾರಿ

Date:

Advertisements

ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆಕೊಡಲಾಗಿದೆ. ಬಂದ್‌ಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೈಸೂರು ನಗರ ಅಕ್ಷರಶಃ ಸ್ತಬ್ಧವಾಗಿದೆ.

ಮೈಸೂರಿನಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌, ಖಾಸಗಿ ಬಸ್‌, ಆಟೋಗಳು ಸೇರಿದಂತೆ ವಾಹನಗಳು ರಸ್ತೆಗಿಳಿದಿಲ್ಲ.

ಮೈಸೂರಿನ ರಸ್ತೆಗಳು ಖಾಲಿ-ಖಾಲಿ ಹೊಡೆಯುತ್ತಿವೆ. ಕನ್ನಡಪರ-ರೈತಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳು ಮತ್ತು ಸ್ಥಳಗಳಲ್ಲಿ ಪೊಲೀಸರು ಮತ್ತು ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

Advertisements

ಬಸ್‌ ಸಂಚಾರ ಸ್ಥಗಿತಗೊಂಡಿರುವ ಮಾಹಿತಿ ದೊರೆಯದೆ ಹಲವರು ಪ್ರಯಾಣಿಕರು ಬಸ್‌ ನಿಲ್ಧಾಣಗಳಿಗೆ ಬಂದಿದ್ದು, ಬಸ್‌ಗಳಿಲ್ಲದೆ ಪರದಾಡಿದ್ದಾರೆ.

ಬಸ್‌ ನಿಲ್ಧಾಣಕ್ಕೆ ಬಂದಿದ್ದ ಮೈಸೂರು ನಿವಾಸಿ ಗಾಯತ್ರಿ ಈದಿನ.ಕಾಮ್ ಜೊತೆ ಮಾತನಾಡಿ, “ಬಂದ್‌ಗೆ ಸಾರಿಗೆ ಸಂಸ್ಥೆ ಬೆಂಬಲ ನೀಡಿಲ್ಲ. ಬಸ್‌ಗಳು ಕಾರ್ಯಾಚರಣೆ ನಡೆಸುತ್ತವೆ ಎಂಬ ಮಾಹಿತಿ ಇತ್ತು. ಹೀಗಾಗಿ, ಚನ್ನರಾಯಪಟ್ಟಣಕ್ಕೆ ತೆರಳಲು ಬಸ್‌ ನಿಲ್ದಾಣಕ್ಕೆ ಬಂದೆ. ಇಲ್ಲಿ ನೋಡಿದರೆ ಬಸ್‌ಗಳೇ ಇಲ್ಲ. ಸಾರಿಗೆ ಸಂಸ್ಥೆ ಸರಿಯಾಗಿ ಮಾಹಿತಿ ನೀಡಿಲ್ಲ. ಇಂತಹ ಸಂದರ್ಭಗಳಲ್ಲಿ ಸಂಸ್ಥೆಯು ಜವಬ್ದಾರಿಯಿಂದ ನಡೆದುಕೊಳ್ಳಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಬಂದ್ – ಪ್ರತಿಭಟನೆಯ ತೀವ್ರತೆ ಕಡಿಮೆಯಾದ ನಂತರ ಬಸ್‌ ಸಂಚಾರ ಆರಂಭಿಸುತ್ತೇವೆ. ಈದ ಎಲ್ಲ ಬಸ್‌ಗಳನ್ನು ಡಿಪೊಗೆ ಕಳುಹಿಸಲಾಗಿದೆ” ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹೇಳಿದ್ದಾರೆ.

ಈ ಮಧ್ಯೆ, ಜಿಲ್ಲಯಲ್ಲಿರುವ ಕಬಿನಿ ಜಲಾಶಯಕ್ಕೆ ಮುತ್ತಿಗೆ ಹಾಕಲು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಸದಸ್ಯರು ಸಿದ್ದತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜಲಾಶಯದ ಸುತ್ತಮುತ್ತ ಶುಕ್ರವಾರ ಸಂಜೆ 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X