ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲವಿದ್ದರೂ ಹೋಟೆಲ್ ಬಂದ್ ಇಲ್ಲ: ಬಿ ಚಂದ್ರಶೇಖರ್ ಹೆಬ್ಬಾರ್

Date:

ಮಾರ್ಚ್‌ 22ರಂದು ಕರ್ನಾಟಕ ಬಂದ್‌ ನಡೆಯುವ ದಿನದಂದು ಹೋಟೆಲ್ ಉದ್ಯಮಕ್ಕೆ ರಕ್ಷಣೆ ನೀಡಬೇಕೆಂದು ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘದ ಅಧ್ಯಕ್ಷ ಬಿ ಚಂದ್ರಶೇಖರ ಹೆಬ್ಬಾರ್ ಸರ್ಕಾರಕ್ಕೆ ಒತ್ತಾಯಿಸಿದ್ದು, ಬೆಂಗಳೂರಿನಲ್ಲಿ ಗೃಹ ಸಚಿವರಿಗೆ ಮನವಿ ನೀಡಿದ್ದಾರೆ.

- Advertisement -

ಬೆಳಗಾವಿಯ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕರಿಗೆ ಮಸಿ ಬಳಿದು ಹಲ್ಲೆ ಮಾಡಿರುವುದನ್ನು ಖಂಡಿಸಿ ವಾಟಾಳ್‌ ನಾಗರಾಜ್‌ ನೇತೃತ್ವದ ಗುಂಪು ಮಾರ್ಚ್‌ 22ರಂದು ನಡೆಸಲು ಕರೆಕೊಟ್ಟಿರುವ ಕರ್ನಾಟಕ ಬಂದ್‌ ವೇಳೆ ಹೋಟೆಲ್ ಉದ್ಯಮಕ್ಕೆ ರಕ್ಷಣೆ ನೀಡಬೇಕೆಂದು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘವು ಎಂದಿನಿಂದಲೂ ಕನ್ನಡ ಪರವಾದ ಕಾರ್ಯಕ್ರಮಗಳನ್ನು ಮತ್ತು ಹೋರಾಟಗಳನ್ನು ಸದಾ ಬೆಂಬಲಿಸುತ್ತದೆ. ಆದರೆ ಶನಿವಾರ ನಡೆಯಲಿರುವ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲವಿದೆ. ಆದರೆ ಹೋಟಲ್ ಬಂದ್ ಇಲ್ಲ” ಎಂದು ತಿಳಿಸಿದ್ದಾರೆ.

“ದೈನಂದಿನ ಸಾರ್ವಜನಿಕ ಚಟುವಟಿಕೆಯಲ್ಲಿ ಆಹಾರ ಪೂರೈಕೆ ಅತ್ಯವಶ್ಯಕವಾಗಿರುವುದರಿಂದ ಹಾಗೂ ಶೇ.50ರಿಂದ ಶೇ.60ರಷ್ಟು ಕೂಲಿಕಾರ್ಮಿಕರು, ಕಾರ್ಪೊರೇಟ್ ಮತ್ತು ಉದ್ಯಮದವರು, ಪ್ರವಾಸಿಗರು ಹೋಟೆಲ್ ಉದ್ಯಮಗಳನ್ನೇ ನಂಬಿಕೊಂಡಿರುವುದರಿಂದ ಕರ್ನಾಟಕ ರಾಜ್ಯ ಹೋಟೆಲ್ ಸಂಘವು ಎಲ್ಲ ಜಿಲ್ಲಾ ಸಂಘಗಳ ಜತೆ ಎರಡ್ಮೂರು ಸುತ್ತಿನ ಚರ್ಚೆಗಳನ್ನು ನಡೆಸಿದೆ. ಎಲ್ಲರ ಅಭಿಪ್ರಾಯದಂತೆ ಸಾರ್ವಜನಿಕ ಹಿತಾಸಕ್ತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾರ್ಚ್‌ 22ರಂದು ಕನ್ನಡ ಸಂಘ ಸಂಸ್ಥೆಗಳು ಕರೆ ನೀಡಿರುವ ಬಂದ್‌ಗೆ ನಮ್ಮ ಹೋಟೆಲ್ ಉದ್ಯಮದವರು ನೈತಿಕ ಬೆಂಬಲವನ್ನು ಘೋಷಿಸುತ್ತೇವೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಲ್ಡೋಟಾ ವಿರೋಧಿ ಪ್ರತಿಭಟನೆ ಅಂಗವಾಗಿ ಪರಿಸರ ಜಾಗೃತಿ

“ನಮ್ಮ ಆತಿಥ್ಯದ ಹೋಟೆಲ್ ಉದ್ಯಮವು ಅಗತ್ಯ ಸೇವೆಗಳಡಿಯಲ್ಲಿ ಬರುತ್ತದೆ. ವಿವಿಧ ರಾಜ್ಯಗಳಿಂದ, ಹೊರಗಿನಿಂದ ಆಗಮಿಸುವ ಪ್ರವಾಸಿಗರಿಗೆ, ಆಸ್ಪತ್ರೆಯ ರೋಗಿಗಳಿಗೆ ಊಟೋಪಚಾರ, ವಸತಿ, ಕುಡಿಯುವ ನೀರಿನ ವ್ಯವಸ್ಥೆ ಅತ್ಯಂತ ಅಗತ್ಯವಾಗಿರುತ್ತದೆ. ಸೇವೆ/ಸರ್ವಿಸ್‌ ನೀಡುವವರಿಗೆ ಸರ್ಕಾರ ಬೆಂಬಲವಾಗಿ ನಿಲ್ಲಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...