ಕರ್ನಾಟಕ ಬಂದ್ | ಬೆಂಗಳೂರು: ಬುರ್ಖಾ ಧರಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

Date:

Advertisements

ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು ಭಾಗಶಃ ಸ್ತಬ್ದವಾಗಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌ ಬುರ್ಖಾ ಧರಿಸಿ, ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಡಾಲರ್ಸ್‌ ಕಾಲೋನಿಯ ತಮ್ಮ ನಿವಾಸದ ಬಳಿ ಬುರ್ಖಾ ಧರಿಸಿ ಮೆರವಣಿಗೆ ನಡೆಸಿದ್ದಾರೆ.

ಟೌನ್‌ಹಾಲ್‌ ಬಳಿ ಮೆರವಣಿಗೆ ನಡೆಸಲು ಮುಂದಾದ ಕನ್ನಡ ಪರ ಹೋರಾಟಗಾರರನ್ನು ಮೆರವಣಿಗೆಗೆ ಅವಕಾಶವಿಲ್ಲವೆಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಾಟಾಳ್ ನಾಗರಾಜ್, “ಸರ್ಕಾರವು ಪೊಲೀಸರನ್ನು ನಿಯೋಜಿಸಿ ಕರ್ನಾಟಕ ಬಂದ್​ ಅನ್ನು​​ ಹತ್ತಿಕ್ಕುವ ಕೆಲಸ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಂದ್​​ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಪೊಲೀಸರು ನಮ್ಮ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ. ಮೆರವಣಿಗೆ ಮಾಡಿದರೆ ತಪ್ಪೇನು? ಪೊಲೀಸ್ ಗೂಂಡಾಗಿರಿ, ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.

Advertisements

“ನ್ಯಾಯದೇವತೆ ಧರಿಸುವ ಬಟ್ಟೆ ಎಂದಾದರೂ ಕರೆಯಲಿ ಅಥವಾ ಬುರ್ಖಾ ಎಂದಾದರೂ ಕರೆಯಲಿ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ. ಮಹಿಳೆಯರ ಗೌರವದ ಸಂಕೇತ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಬಂದ್‌ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಬಸ್ ನಿಲ್ದಾಣಗಳಲ್ಲಿ ಬಸ್‌ ನಿಂತಿವೆಯಾದರೂ, ಸಂಚಾರ ನಡೆಸುತ್ತಿಲ್ಲ. ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯಲ್ಲಿ ಕನ್ನಡ ಚಿತ್ರರಂಗದ ಹಲವಾರು ಕಲಾವಿದರು ಭಾಗವಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

Download Eedina App Android / iOS

X