ತುಮಕೂರು | ಜಮೀನು ಹಿಂದಿರುಗಿಸಲು ಕರ್ನಾಟಕ ಬ್ಯಾಂಕ್ ಒಪ್ಪಿಗೆ : ಪ್ರತಿಭಟನೆ ಹಿಂಪಡೆದ ರೈತ ಸಂಘ

Date:

Advertisements

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ತಾಳೆಕೆರೆ ಗ್ರಾಮದ ಕೃಷ್ಣಪ್ಪ ಎಂಬುವವರ ಭೂಮಿಯನ್ನು ಕರ್ನಾಟಕ ಬ್ಯಾಂಕ್‌ನವರು ಸರ್ಫೇಸಿ ಕಾಯ್ದೆಯ ಅನ್ವಯ ಇ-ಟೆಂಡರ್ ಮೂಲಕ ಹರಾಜು ಹಾಕಿದ್ದ, ಭೂಮಿಯ ಟೆಂಡರ್ ರದ್ದು ಪಡಿಸಿ, ರೈತರಿಗೆ ಜಮೀನು ನೀಡಲು ಒಪ್ಪಿರುವ ಹಿನ್ನೆಲೆಯಲ್ಲಿ ಆಗಸ್ಟ್ 12 ರಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗು ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ತುಮಕೂರು ನಗರದ ವಿಜ್ಞಾನ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ತುಮಕೂರು ನಗರದ ಕರ್ನಾಟಕ ಬ್ಯಾಂಕಿನ ವಲಯ ಕಚೇರಿಯಲ್ಲಿ ಶುಕ್ರವಾರ ರಾತ್ರಿ ನಡೆದ ಬ್ಯಾಂಕಿನ ಜಿ.ಎಂ.ಕೆ. ಸುಬ್ರಾಮ್ ಮತ್ತು ಎಜಿಎಂ ಮಲ್ಲನಗೌಡ ಅವರುಗಳು, ಲೀಡ್ ಬ್ಯಾಂಕ್ ಸಮ್ಮುಖದಲ್ಲಿ ರೈತ ಮುಖಂಡರೊಂದಿಗೆ ನಡೆದ ಸಭೆಯಲ್ಲಿ, ರೈತರ ಭೂಮಿಯನ್ನ ಹರಾಜು ಹಾಕಿರುವುದು ತಪ್ಪಾಗಿದೆ. ಹಾಗಾಗಿ ಮುಂದಿನ ಎರಡು ತಿಂಗಳ ಒಳಗೆ ರೈತರ ಜಮೀನು ಹರಾಜನ್ನು ರದ್ದುಪಡಿಸಿ, ರೈತರಿಗೆ ವಾಪಸ್ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದು ರೈತ ಸಂಘದ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ. ಹಾಗಾಗಿ ಆಗಸ್ಟ್ 12 ರಂದು ತುರುವೇಕೆರೆಯ ಬ್ಯಾಂಕ್ ಕಚೇರಿ ಮುಂದೆ ಕರೆದಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ” ಎಂದರು.

ಕರ್ನಾಟಕ ಬ್ಯಾಂಕಿನ ಜಿ.ಎಂ ಮತ್ತು ಎಜಿಎಂ ಅವರುಗಳು ರೈತರೊಂದಿಗೆ ನಡೆದ ಸಭೆಯಲ್ಲಿ,ರೈತ ಮುಖಂಡರು ಬ್ಯಾಂಕಿನ ಕ್ರಮವನ್ನು ತೀವ್ರವಾಗಿ ವಿರೋಧಿಸಿದ್ದು, ಬ್ಯಾಂಕ್ ಅಧಿಕಾರಿಗಳು ಒಟಿಎಸ್‌ಗೆ ಅವಕಾಶ ನೀಡದೆ. ಸುಮಾರು 3.59 ಕೋಟಿ ಬೆಲೆ ಬಾಳುವ ಭೂಮಿಯನ್ನು ಕೇವಲ 35.80 ಲಕ್ಷ ರೂಗಳಿಗೆ ಇ ಟೆಂಡರ್ ಮೂಲಕ ಹರಾಜು ನಡೆಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು,ಇನ್ನೂ ಮುಂದೆ ಈಗಾಗದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೆ, ಒಟಿಎಸ್‌ಗೆ ಅವಕಾಶ ಕಲ್ಪಿಸಬೇಕು ಎಂಬ ಒತ್ತಾಯವನ್ನು ಮಾಡಿದ್ದು, ಇದಕ್ಕೆ ಬ್ಯಾಂಕ್ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರೈತ ಕೃಷ್ಣಪ್ಪ ಅವರಿಗೆ ಭೂಮಿ ಹಿಂದಿರುಗಿಸಿದ ನಂತರ, ರೈತರು ತೆಗೆದುಕೊಂಡಿರುವ ಸಾಲದ ಅಸಲನ್ನು ಕಟ್ಟಿಸಿಕೊಂಡು, ಬಡ್ಡಿ ಮನ್ನಾ ಮಾಡುವಂತೆ ಸಹ ಬ್ಯಾಂಕಿನ ಅಧಿಕಾರಿಗಳ ಮುಂದೆ ಬೇಡಿಕೆ ಇಡಲಾಗಿದೆ ಎಂದು ಎ.ಗೋವಿಂದರಾಜು ತಿಳಿಸಿದರು.

Advertisements

ಕೇಂದ್ರ ಸರಕಾರ ಜಾರಿಗೆ ತಂದಿರುವ ಸರ್ಫೇಸಿ ಕಾಯ್ದೆ ರೈತರಿಗೆ ಮಾರಕವಾಗಿದ್ದು, ಈ ಕಾಯ್ದೆಯಿಂದ ರೈತರ ಕೃಷಿ ಭೂಮಿಯನ್ನು ಹೊರಗಿಡುವಂತೆ ಈಗಾಗಲೇ ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದರೂ ಸಹ ಕೇಂದ್ರ ಸರಕಾರ ಸ್ಪಂದಿಸಿಲ್ಲ. ಈಗಲೂ ನಾವು ಸರಕಾರಕ್ಕೆ ಒತ್ತಾಯಿಸುತ್ತಿದ್ದು, ರೈತರಿಗೆ ಜೀವನಾಧಾರವಾಗಿರುವ ಕೃಷಿ ಭೂಮಿಯನ್ನು ಈ ಕಾಯ್ದೆಯಿಂದ ಹೊರಗಿಡಬೇಕು. ಇಲ್ಲದಿದ್ದಲ್ಲಿ ರೈತರು ತೀವ್ರ ಸಂಕಷ್ಟ ಅನುಭವಿಸುವುದರ ಜೊತೆಗೆ, ರೈತರು ಮತ್ತು ಬ್ಯಾಂಕಿನ ಸಿಬ್ಬಂದಿ ನಡುವೆ ನಿರಂತರ ಸಂಘರ್ಷಕ್ಕೆ ಕಾರಣವಾಗಲಿದೆ ಎಂದರು.

ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ‘ನಮ್ಮ ಭೂಮಿ ಕೊಡಲು ನಾವು ಸಿದ್ಧ’ ಎಂದ ಗ್ರಾಮಸ್ಥರು; ಭೂ ಮಾಲೀಕರಿಂದ ಅಡ್ಡಿ?

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಮುಖಂಡರಾದ ತುರುವೇಕೆರೆ ಶ್ರೀನಿವಾಸಗೌಡ, ಕೆ.ಎನ್.ವೆಂಕಟೇಗೌಡ, ಅಸ್ಲಂ ಪಾಷ, ತಿಮ್ಮೇಗೌಡ, ರಹ್ಮತುಲ್ಲಾ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಶ್, ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ, ಶೇಖರ್, ಪುರುಷೋತ್ತಮ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Act is very clear and Agricultural lands exempted from Sarfaesi act. Either your news is wrong or it’s not agricultural property. Varify properly and publish news. Don’t blame central government.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X