ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ 2024ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ: ಮೂವರು ಆಯ್ಕೆ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2024ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಮೂರು ಮಂದಿ ಸಾಧಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ.

- Advertisement -

ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಬೆಂಗಳೂರಿನ ಡಾ. ಮಕ್ಸೂದ್ ಅಹ್ಮದ್ ಮುಲ್ಕಿ (ಬ್ಯಾರಿ ಭಾಷೆ ಮತ್ತು ಸಂಘಟನೆ), ಬ್ಯಾರಿ ಕವಿ ಮತ್ತು ಬರಹಗಾರ ಹೈದರ್ ಅಲಿ ಕಾಟಿಪಳ್ಳ (ಬ್ಯಾರಿ ಸಾಹಿತ್ಯ) ಹಾಗೂ ಹಿರಿಯ ಬ್ಯಾರಿ ಹಾಡುಗಾರ, ಕವಿ ಹಸನಬ್ಬ ಮೂಡಬಿದರೆ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
beary

ಅಕಾಡೆಮಿಯ ಮಾಜಿ ಸದಸ್ಯರಾದ ಟಿ.ಕೆ. ಶರೀಫ್, ಮುಹಮ್ಮದ್ ಶರೀಫ್ ನಿರ್ಮುಂಜೆ, ಹಂಝ ಮಲಾರ್, ಮರಿಯಮ್ ಇಸ್ಮಾಯಿಲ್ ಮತ್ತು ಬಹುಭಾಷಾ ಲೇಖಕಿ ಶಮೀಮಾ ಕುತ್ತಾರ್ ಗೌರವ ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿದ್ದು ಸಹಕರಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ.

ಇದನ್ನು ಓದಿದ್ದೀರಾ? ಈದಿನ ಯೂಟ್ಯೂಬ್‌ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ

ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 10ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್‌ ಯು. ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...