2022, 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ: 6 ಮಂದಿ ಆಯ್ಕೆ

Date:

Advertisements

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್‌ ಯು. ಹೆಚ್ ತಿಳಿಸಿದ್ದಾರೆ.

2022ನೇ ಸಾಲಿನಲ್ಲಿ ಹಂಝತುಲ್ಲಾಹ್‌ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್‌ ಇಸ್ಮಾಈಲ್‌ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್‌ ಹಮೀದ್‌ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಅಶ್ರಫ್‌ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಮತ್ತು ಮುಹಮ್ಮದ್‌ ಶರೀಫ್‌ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅಕಾಡೆಮಿಯ ಮಾಜಿ ಅಧ್ಯಕ್ಷ ಮುಹಮ್ಮದ್‌ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ. ಮತ್ತು ಹುಸೈನ್‌ ಕಾಟಿಪಳ್ಳ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಸಹಕರಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ.

Advertisements

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ: ನಾಲ್ವರು ಮಕ್ಕಳಿಗೆ ಗಾಯ

ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆ. 6ರಂದು ಸಂಜೆ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್‌ ಯು. ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2024 08 27 at 6.06.13 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X