ರಾಜ್ಯದಲ್ಲಿ ಮೆಕ್ಕೆಜೋಳ ಬೆಲೆ ಕುಸಿತ; ಬೆಂಬಲ ಬೆಲೆಗೆ ರೈತರ ಆಗ್ರಹ

Date:

ಒಮ್ಮೊಮ್ಮೆ ಬರದಿಂದ ತತ್ತರಿಸುವ ಅನ್ನದಾತರು, ಮಗದೊಮ್ಮೆ ನೆರೆಯಿಂದ ಸಂಕಷ್ಟ ಅನುಭವಿಸುತ್ತಾರೆ. ಇದರ ನಡುವೆ ಎಲ್ಲ ಸರಿಯಾಗಿ ಉತ್ತಮ ಇಳುವರಿ ಬಂತು ಎನ್ನುತ್ತಿರುವಾಗಲೇ ಸಮರ್ಪಕ ಬೆಲೆ ಸಿಗದೆ ಕಂಗಾಲಾಗುವ ಪರಿಸ್ಥಿತಿ ಎದುರಾಗಿದೆ.

- Advertisement -

ಬೆಳಗಾವಿ ಜಿಲ್ಲೆಯಲ್ಲಿ ರೈತರು ಗೋವಿನಜೋಳ ಬೆಳೆದಿದ್ದು, ಉತ್ತಮ ಬೆಳೆ ಬಂದಿದೆ. ಆದರೆ ಬೆಲೆ ಕುಸಿದಿರುವುದರಿಂದ ರೈತರಲ್ಲಿ ಆತಂಕ ಮೂಡಿಸಿದೆ. ಆರಂಭದಲ್ಲಿ ₹3000ದಿಂದ ₹2800ದವರೆಗೆ ಇದ್ದ ಬೆಲೆ ಸದ್ಯ ₹2300ಕ್ಕೆ ಇಳಿದಿದ್ದು, ರೈತರು ಸರ್ಕಾರದ ಬೆಂಬಲ ಬೆಲೆಯ ನಿರೀಕ್ಷೆಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಈ ಕುರಿತು ಈ ದಿನ.ಕಾಮ್ ಜೊತೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ರೈತ ರಮೇಶ್ ಚಾಕಲಬ್ಬಿ ಮಾತನಾಡಿ, “ನಾವು ಸುಮಾರು 16 ಎಕರೆ ಭೂಮಿಯಲ್ಲಿ ಗೋವಿನಜೋಳ ಬೆಳೆದಿದ್ದೇವೆ. ಪ್ರತಿ ಎಕರೆಗೆ 20,000ದಿಂದ ₹25,000 ರೂಪಾಯಿಗಳವರೆಗೆ ಖರ್ಚಾಗುತ್ತದೆ. ಗೋವಿನಜೋಳ ತೆನೆ ಮುರಿಯಲು ಮತ್ತು ರಾಶಿ ಮಾಡಲು ಕೂಲಿ ಆಳುಗಳೂ ಕೂಡಾ ಸರಿಯಾಗಿ ಸಿಗುವುದಿಲ್ಲ. ಇದರಿಂದಾಗಿ ತೆನೆ ಮುರಿದು ರಾಶಿ ಮಾಡಲು ಯಂತ್ರದ ಮೊರೆ ಹೋಗಬೇಕಾದ ಅನಿವಾರ್ಯತೆ ಇದೆ” ಎಂದು ಹೇಳಿದರು.

“ಒಂದು ಎಕರೆಯ ಜೋಳ ರಾಶಿ ಮಾಡಲು ಕಟ್ರಾ ಮೆಶಿನ್‌ಗೆ ₹3,200 ಕೊಡಬೇಕು. ಇದೀಗ ಮಳೆ ಹೆಚ್ಚಾಗಿದ್ದು, ರಾಶಿ ಮಾಡಿದ ಕಾಳುಗಳನ್ನು ರಕ್ಷಣೆ ಮಾಡಿಕೊಳ್ಳಲು ಒದ್ದಾಡುತ್ತಿದ್ದೇವೆ. ಸರ್ಕಾರವು ಬೆಂಬಲ ಬೆಲೆ ನೀಡುವುದಾಗಿ ತಿಳಿಸಿತ್ತು. ಆದರೆ ಈವರೆಗೂ ಯಾವುದೇ ಬೆಂಬಲ ಬೆಲೆ ಸಿಗದೆ ರೈತರು ಆತಂಕಪಡುವ ಪರಿಸ್ಥಿತಿ ಇದೆ” ಎಂದು ತಿಳಿಸಿದ್ದಾರೆ.

ಜೋಳ 1 1

ರಾಮದುರ್ಗ ಎಪಿಎಂಸಿ ಮಾರುಕಟ್ಟೆಯಲ್ಲಿ ಗೋವಿನ ಜೋಳದ ಬೆಲೆ ಒಂದು ಕ್ವಿಂಟಾಲ್‌ಗೆ ₹2,350ರವರೆಗೆ ಬೆಲೆಯಿದ್ದು, ಮಾರುಕಟ್ಟೆಗೆ ಗೋವಿನಜೋಳ ಬರುವ ಪ್ರಮಾಣದ ಮೇಲೆ ಬೆಲೆಯ ಏರಿಳಿತವಾಗುವ ಸಾಧ್ಯತೆ ಇದೆ

ಕರ್ನಾಟಕ ರಾಜ್ಯ ರೈತ ಸಂಘಟನೆಯ ಬಾಳಪ್ಪ ಪಾಟೀಲ ಮಾತನಾಡಿ, “ಮಾರುಕಟ್ಟೆಯಲ್ಲಿ ರೈತರು ಬೆಳೆದ ಗೋವಿನಜೋಳದ ಬೆಳೆಗೆ ಸರಿಯಾದ ಬೆಲೆ ನೀಡುತ್ತಿಲ್ಲ. ರೈತರಿಗೆ ಅನ್ಯಾಯವಾಗುತ್ತಿದೆ. ಮಾರುಕಟ್ಟೆಯಲ್ಲಿ ₹2,800 ರಿಂದ ₹3000ದವರೆಗೆ ಬೆಲೆ ಇರಬೇಕಿತ್ತು. ಆದರೆ ಬೆಲೆ ಕಡಿಮೆ ಮಾಡಿದ್ದಾರೆ. ಸರ್ಕಾರವು ಮಧ್ಯೆ ಪ್ರವೇಶಿಸಿ ವೈಜ್ಞಾನಿಕ ಬೆಲೆ ನಿಗದಿ ಮಾಡಿ ರೈತರ ನೆರವಿಗೆ ಬರಬೇಕು” ಎಂದು ತಿಳಿಸಿದರು.

ಜೋಳ 2

ಹಾಸನ, ಚಿತ್ರದುರ್ಗ, ಮಂಡ್ಯ ಜಿಲ್ಲೆ ಸೇರಿದಂತೆ ಇತರೆ ಭಾಗಗಳಲ್ಲಿ ಸಾಂಪ್ರದಾಯಿಕ ಬೆಳೆಗಳಿಗೆ ಅನುಗುಣವಾಗಿ ರೈತರು ಮೆಕ್ಕೆಜೋಳ ಬೆಳೆಯಲು ಆರಂಭಿಸಿದ್ದಾರೆ. ಪ್ರಸ್ತುತ ದಿನಗಳಲ್ಲಿ ಕೃಷಿ ಮಾಡುವುದು ದುಬಾರಿಯಾಗಿದ್ದು, ಕೊನೆಯಲ್ಲಿ ಸರಿಯಾದ ಬೆಲೆ ಸಿಗದ ಕಾರಣ ರೈತರು ಮೆಕ್ಕೆಜೋಳ ಬೆಳೆಯಲು ಮುಂದಾಗಿದ್ದಾರೆ.

ಜೋಳ 3

ಕೃಷಿ ಪರಿಕರಗಳು, ಕೂಲಿ, ಬೀಜ ಗೊಬ್ಬರಗಳ ಬೆಲೆ ದುಬಾರಿಯಾಗಿದ್ದು, ಅತಿವೃಷ್ಠಿ, ಅನಾವೃಷ್ಠಿಗಳು ತಲೆದೋರುತ್ತವೆ. ಈ ನಡುವೆ, ಜೋಳ ಬೆಳೆಯಲು ಕಡಿಮೆ ವೆಚ್ಚ ಮತ್ತು ಸುಲಭವಾಗಿರುವುದರಿಂದ ಬಹುತೇಕ ರೈತರು ಜೋಳ ಬೆಳೆಯುತ್ತಿದ್ದಾರೆ. ಈ ಬಾರಿ ರಾಜ್ಯಾದ್ಯಂತ 15,40,000 ಎಕರೆ ಪ್ರದೇಶದಲ್ಲಿ ಜೋಳ ಬಿತ್ತನೆ ಮಾಡುವುದಾಗಿ ನಿರೀಕ್ಷಿಸಲಾಗಿದ್ದು, 8,98,900 ಎಕರೆ ಪ್ರದೇಶದಲ್ಲಿ ಜೋಳ ಬೆಳೆಯಲಾಗಿದೆ. ಕಳೆದ ವರ್ಷ ರಾಜ್ಯಾದ್ಯಂತ 1,25,400 ಎಕರೆ ಪ್ರದೇಶದಲ್ಲಿ ಜೋಳ ಬೆಳೆಯಲಾಗಿತ್ತು.

ಜೋಳ ಬೆಳೆ ಪ್ರಮಾಣ

ಮಂಡ್ಯ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಬೆಳೆಯಾದ ಕಬ್ಬು ಬೆಳೆಯನ್ನು ಅತಿಯಾಗಿ ಬೆಳೆಯುತ್ತಾರೆ. ಆದರೆ, ಪ್ರಸ್ತುತ ದಿನಗಳಲ್ಲಿ ಸಕ್ಕರೆ ನಾಡಿನಲ್ಲಿಯೂ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಕಳೆದ ವರ್ಷ 800 ಎಕರೆ ಪ್ರದೇಶದಲ್ಲಿ ಜೋಳ ಬೆಳೆಯಲು ನಿರೀಕ್ಷಿಸಲಾಗಿದ್ದು, 68 ಎಕರೆ ಪ್ರದೇಶದಲ್ಲಿ ಜೋಳ ಬೆಳೆಯಲಾಗಿತ್ತು. ಪ್ರಸ್ತುತ ವರ್ಷದಲ್ಲಿ 1000 ಎಕರೆ ಪ್ರದೇಶದಲ್ಲಿ ಜೋಳ ಬೆಳೆಯುವ ಗುರಿ ಹೊಂದಿದ್ದು, 594 ಎಕರೆಯಲ್ಲಿ ಜೋಳ ಬೆಳೆದಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಸಾಂಪ್ರದಾಯಿಕವಾಗಿ ಈರುಳ್ಳಿ ಬೆಳೆ ಬೆಳೆಯಲಾಗುತ್ತಿತ್ತು. ಪ್ರಸ್ತುತ ದಿನಗಳಲ್ಲಿ ಅಲ್ಲಿಯ ರೈತರೂ ಕೂಡ ಜೋಳದ ಬೆಳೆಯ ಮೊರೆ ಹೋಗಿದ್ದಾರೆ. ಜಿಲ್ಲಾದ್ಯಂತ 90,385 ಎಕರೆ ಪ್ರದೇಶದಲ್ಲಿ ಗುರಿ ಹೊಂದಲಾಗಿತ್ತು. ಆದರೆ, ಗುರಿಗಿಂತಲೂ ಅಧಿಕವಾಗಿ ಜೋಳ ಬೆಳೆದಿದ್ದು, 1,02,397 ಎಕರೆ ಪ್ರದೇಶದಲ್ಲಿ ನಿರೀಕ್ಷೆಗಿಂತ ಅಧಿಕವಾಗಿ ಜೋಳ ಬೆಳೆದಿದ್ದಾರೆ.

ಚಿತ್ರದುರ್ಗ ಜೋಳದ ಬೆಳೆ

ಸಾಲ ಮಾಡಿ ಬೀಜ, ಗೊಬ್ಬರ ಹಾಕಿ ಹಗಲಿರುಳು ಬೆವರು ಸುರಿಸಿ ರೈತರು ಶ್ರಮದಿಂದ ಮೆಕ್ಕೆಜೋಳ ಬೆಳೆದಿದ್ದಾರೆ. ಫಸಲೂ ಕೂಡ ಉತ್ತಮವಾಗಿ ಬಂದಿದೆ. ಆದರೆ, ಜೋಳ ಬೆಳೆಯುವ ಪ್ರಮಾಣ ಅಧಿಕವಾಗಿವುದರಿಂದ ಹಾಗೂ ಮೆಕ್ಕೆಜೋಳ ರಫ್ತು ವಹಿವಾಟಿನಲ್ಲೂ ಬೇಡಿಕೆ ಕಡಿಮೆಯಾಗಿರುವುದು ಬೆಲೆ ಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...