ಬಂಟ್ವಾಳ | ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಗೋಳ್ತಮಜಲು ಎಂಬಲ್ಲಿ ವಿದ್ಯಾರ್ಥಿನಿಯರಿಗಾಗಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 70ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

- Advertisement -

ಈ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದ ಕುಮಾರಿ ಫಾತಿಮತ್ ಅಝ್ಮಿಯ ತಮ್ಮ ಭಾಷಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಇತಿಹಾಸದ ಬಗ್ಗೆ ಹೇಳುತ್ತ, “ಕನ್ನಡ ನಾಡು ನುಡಿಗಳನ್ನು ಬೆಳೆಸಿ ಉಳಿಸುವುದು ವಿದ್ಯಾರ್ಥಿನಿಯರಾದ ನಮ್ಮೆಲ್ಲರ ಕರ್ತವ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಬಳಿಕ ವೇದಿಕೆಗೆ ಬಂದ, ದ್ವಿತೀಯ ಬಿಎ ವಿಭಾಗದ ಫಾತಿಮತ್ ಶಮಿಯಾ ಅವರು ತಮ್ಮ ಭಾಷಣದಲ್ಲಿ
ಕರ್ನಾಟಕದ ವೈಶಿಷ್ಟ್ಯದ ಬಗ್ಗೆ ವಿವರಿಸಿದರು.

ಕರ್ನಾಟಕ ರಾಜ್ಯೋತ್ಸವ 1 1

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ, ಕಾಲೇಜಿನ ಪ್ರಾಂಶುಪಾಲರಾದ ಡಾ. ಹೇಮಲತ ಬಿ ಡಿಯವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕರ್ನಾಟಕ ರಾಜ್ಯ ರಚನೆಯ ಕುರಿತು ಮಾಹಿತಿ ನೀಡುತ್ತ, “ನಮ್ಮ ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಇದೆ. ಅದರಿಂದಲೇ, ನಮ್ಮ ದೇಶವು ಧರ್ಮ, ಜಾತಿ, ಮತಗಳ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡಿಲ್ಲ, ಬದಲಾಗಿ ಭಾಷೆಗಳ ಆಧಾರದ ಮೇಲೆ ವಿವಿಧ ಪ್ರಾಂತ್ಯಗಳನ್ನಾಗಿ ಬೇರ್ಪಡಿಸಲಾಗಿದೆ. ಹಾಗೆಯೇ ನಾವೆಲ್ಲರೂ ನಮ್ಮ ನೆಲದ ಮೇಲಿನ ಅಭಿಮಾನವನ್ನು ಬೆಳೆಸಿಕೊಂಡು ಇಲ್ಲಿನ ಕನ್ನಡವನ್ನು ಉಳಿಸಬೇಕು ಹಾಗೂ ಬೆಳೆಸಬೇಕು. ಅಲ್ಲದೆ ಅದರೊಂದಿಗೆ ʼನಾವು ಭಾರತೀಯರುʼ ಎಂಬ ಏಕತೆಯನ್ನು ಕಾಪಾಡಿಕೊಂಡು ಐಕ್ಯತೆಯಿಂದ ಬದುಕಬೇಕು” ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.

ಕರ್ನಾಟಕ ರಾಜ್ಯೋತ್ಸವ 2 1

ಈ ಕಾರ್ಯಕ್ರಮದ ಅಂಗವಾಗಿ ದ್ವಿತೀಯ ಬಿ ಎ ವಿದ್ಯಾರ್ಥಿನಿಯರು ನಾಡಗೀತೆಯನ್ನು ಹಾಡುವ ಮೂಲಕ ರಂಜಿಸಿದರು. ವೇದಿಕೆಯಲ್ಲಿ ಅನುಗ್ರಹ ಸಲಹಾ ಸಮಿತಿಯ ಕಾರ್ಯದರ್ಶಿ ತಾರಾಕ್ಷಿ, ಪದವಿ ಪೂರ್ವ ವಿಭಾಗದ ಸಂಯೋಜಕಿ ಮಮಿತಾ ಎಸ್ ರೈ, ಪದವಿ ವಿಭಾಗದ ಸಂಯೋಜಕಿ ಆಬಿದ ಬಿ, ಸಲಹಾ ಸಮಿತಿ ಸದಸ್ಯೆ ಸಲೀಮಾ, ನವ್ಯ ಇದ್ದರು.

ಈ ಸುದ್ದಿ ಓದಿದ್ದೀರಾ? ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಮರುದಿನವೇ ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನ

ದ್ವಿತೀಯ ವರ್ಷದ ಬಿಕಾಂ ವಿಭಾಗದ ಕುಮಾರಿ ಆಯಿಷತ್ತುಲ್ ಸೆಮೀನಾ ಆರಂಭದಲ್ಲಿ ಕಿರಾಅತ್ ಪಠಿಸಿದರು ಹಾಗೂ ಕಾರ್ಯಕ್ರಮವನ್ನು ನಿರೂಪಿಸಿದ ತೃತೀಯ ವರ್ಷದ ಬಿಕಾಂ ವಿಭಾಗದ ವಿದ್ಯಾರ್ಥಿನಿ ಕುಮಾರಿ ಖತೀಜತುಲ್ ಅನಿಷ ಆರಂಭದಲ್ಲಿ ಸ್ವಾಗತಿಸಿ, ಕೊನೆಯಲ್ಲಿ ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...