ಬಹು ನಿರೀಕ್ಷಿತ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಪ್ರಕಟಣೆ ತಿಳಿಸಿದೆ.
ಬೆಳಗ್ಗೆ 10ಕ್ಕೆ ಕೆಎಸ್‌ಇಎಬಿ ಫಲಿತಾಂಶ ಪ್ರಕಟಣೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಲಿದೆ. ಅದಾದ ನಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಮಧ್ಯಾಹ್ನ 11 ಗಂಟೆ ನಂತರ ಇಲಾಖೆಯ ವೆಬ್‌ಸೈಟ್ https://karresults.nic.in/ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಮಾರ್ಚ್ 31ರಿಂದ ಏ.15ರವರೆಗೆ 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.

ರಾಜ್ಯ ವಿದಾನಸಭಾ ಚುನಾವಣೆ ಮೇ 10ಕ್ಕೆ ನಿಗದಿಯಾಗಿದೆ. ಹೀಗಾಗಿ, ಚುನಾವಣೆಗೂ ಮೊದಲೇ ಫಲಿತಾಂಶ ಪ್ರಕಟ ಮಾಡಲಾಗುವುದು ಎನ್ನಲಾಗಿತ್ತು. ಈ ಬಾರಿ ಅನುತ್ತೀರ್ಣರಾಗುವ ಅಂಚಿನಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಉತ್ತೀರ್ಣರನ್ನಾಗಿ ಮಾಡಲು ಕೃಪಾಂಕ ನೀಡುತ್ತಿರುವ ಕಾರಣ ಫಲಿತಾಂಶವು ದ್ವಿತೀಯ ಪಿಯುಸಿ ಫಲಿತಾಂಶಕ್ಕಿಂತ ಹೆಚ್ಚಾಗಬಹುದು ಎಂದು ಕೆಎಸ್‌ಇಎಬಿ ಅಭಿಪ್ರಾಯ ಪಟ್ಟಿದೆ.
SSLC results
Sslc 10 karnataka reselt 2023
Karnataka sslc reselt 2023