ಕರ್ನಾಟಕ ರಾಜ್ಯ ಸರ್ಕಾರದಿಂದ ಪರಿಸರ ಸಂರಕ್ಷಣೆ ಮತ್ತು ವ್ಯವಸ್ಥಾಪನಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುವ ‘ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ’ ಯನ್ನು ಉತ್ತರ ವಲಯದ ವ್ಯಕ್ತಿ ವಿಭಾಗದಿಂದ ರಾಯಚೂರಿನ ನೇತಾಜಿ ನಗರದ ನಿವಾಸಿ ಈರಣ್ಣ ಕೋಸಗಿ ಅವರಿಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿ ಸನ್ಮಾನಿಸಿದರು.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಡೆದ ‘ವಿಶ್ವ ಪರಿಸರ ದಿನಾಚರಣೆ ಹಾಗೂ ವನ ಮಹೋತ್ಸವ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು.
ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಇಲಾಖೆಯ ಅಧಿಕಾರಿಗಳು ಇದ್ದರು.
