2025-2026ನೇ ಸಾಲಿನ ಕರ್ನಾಟಕ ರಾಜ್ಯ ನೋಟರಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಕುಂದಾಪುರದ ಹಿರಿಯ ನ್ಯಾಯವಾದಿ ಮತ್ತು ನೋಟರಿ ಕು| ಶ್ಯಾಮಲಾ ಭಂಡಾರಿಯವರು ಆಯ್ಕೆಯಾಗಿದ್ದಾರೆ.
ಇವರು ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ, ರಾಜ್ಯ ಮಹಿಳಾ ಆಯೋಗದ ಸದಸ್ಯೆಯಾಗಿ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆಯ ಸಲಹಾ ಸಮಿತಿಯ ಸದಸ್ಯೆಯಾಗಿ, ಕೇಂದ್ರ ಸಿನಿಮಾ ಸೆನ್ಸಾರ್ ಮಂಡಳಿಯ ಬೆಂಗಳೂರು ವಿಭಾಗದ ಸಲಹಾ ಸಮಿತಿಯ ಸದಸ್ಯೆಯಾಗಿ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಸಹಕಾರಿ ಬ್ಯಾಂಕ್ನ ನಿರ್ದೇಶಕರಾಗಿ, ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯೆಯಾಗಿ ಯಡ್ತರೆ ಮಂಜಯ್ಯ ಶೆಟ್ಟಿ ಕಾನೂನು ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕಿಯಾಗಿ, ಮಹಿಳಾ ಸಂಘ ಸಂಸ್ಥೆಗಳ ಕಾನೂನು ಸಲಹೆಗಾರರಾಗಿ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ, ಕುಂದಾಪುರ ಮುನ್ಸಿಫ್ ಕೋರ್ಟ್ ಶತಮಾನೋತ್ಸವ ಸಮಾರಂಭದಲ್ಲಿ ಶತಮಾನೋತ್ಸವ ವ್ಯಕ್ತಿ ಪುರಸ್ಕಾರ ಪಡೆದಿರುವ ಇವರು ವಿಶೇಷವಾಗಿ ಮಹಿಳೆ ಮತ್ತು ಮಕ್ಕಳ ಹಕ್ಕು, ರಕ್ಷಣೆ ಜಾಗೃತಿಗಾಗಿ ಕಳೆದ 35 ವರ್ಷಗಳಿಂದ 600 ಕ್ಕೂ ಮಿಕ್ಕಿ ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ಜಾಗೃತಿ ಮೂಡಿಸಿರುವ ಇವರು ಸಾಮಾಜಿಕ ಹೋರಾಟಗಳ ಮೂಲಕ ಗಮನ ಸೆಳೆದಿದ್ದು, ಪ್ರಸ್ತುತ ಕರ್ನಾಟಕ ರಾಜ್ಯ ನೋಟರಿಗಳ ಸಂಘ (ರಿ) ಇದರ ಪ್ರಥಮ ಮಹಿಳಾ ರಾಜ್ಯಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.