ವರದಿ-ಹೋರಾಟಕ್ಕೂ ಬಗ್ಗದ ಅಧಿಕಾರಿಗಳು; 6.90 ಕೋಟಿ ರೂ. ಅನುದಾನದ ಖರ್ಚಿಗೆ ಕುತಂತ್ರ!

Date:

Advertisements

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ದಿನಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಇದೆ. ಸಂಸ್ಥೆಗೆ ಸರ್ಕಾರದಿಂದ ಬಂದಿರುವ 6.90 ಕೋಟಿ ರೂ.ಗಳ ಬಗ್ಗೆಯೂ ಸುದ್ದಿಗಳು ಹೆಚ್ಚು ಗಮನ ಸೆಳೆಯುತ್ತಿವೆ. ಈ ಅನುದಾನದ ಚರ್ಚೆಗೆ ಕಾರಣ ಸಂಸ್ಥೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು ಎಂಬ ಆರೋಪಗಳಿವೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಕರ್ನಾಟಕ ರಾಜ್ಯದಲ್ಲಿರುವ 50ಕ್ಕೂ ಹೆಚ್ಚು ಆದಿವಾಸಿ, ಬುಡಕಟ್ಟು ಸಮುದಾಯಗಳಿಗೆ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಮೂಲಕ ಪರಿಶಿಷ್ಟ ಸರ್ಕಾರದ ಯೋಜನೆ/ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸಲು ಮುಂದಾಗಿದೆ. ಅದಕ್ಕಾಗಿ, ಕಾರ್ಯಾಗಾರ, ಉದ್ಯೋಗ ಖಾತ್ರಿ ಶಿಕ್ಷಣದ ಮಹತ್ವ ಕುರಿತು ಕಾರ್ಯಗಾರ, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅರಣ್ಯ ಹಕ್ಕು ಕಾಯ್ದೆಯನ್ನು ಪರಿಣಾಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಬುಡಕಟ್ಟು ಸಮುದಾಯದ ಜನಪ್ರತಿನಿಧಿಗಳಿಗೆ ಹಾಗೂ ಅರಣ್ಯ, ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ತರಬೇತಿ ನೀಡಲು, ಕೇಂದ್ರ ಸರ್ಕಾರದ ಪೋಷನ್ ಮಾಹೆ ಅಭಿಯಾನ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳನ್ನು ಪಡೆದುಕೊಳ್ಳುವ ಕುರಿತು ಶಿಬಿರಗಳನ್ನು ನಡೆಸಲು ಸಂಸ್ಥೆಗೆ 2021-22ನೇ ಸಾಲಿನಲ್ಲಿ 6.90 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಈ ಹಣವನ್ನು ಹಾಲಿ ನಿರ್ದೇಶಕರುಗಳು KMCAಗೆ ಕೊಟ್ಟು ವೆಚ್ಚ ಮಾಡಲು ಮುಂದಾಗಿದ್ದರು. ಆಗ ರಾಜ್ಯದ್ಯಂತ ಎಲ್ಲ ಆದಿವಾಸಿಗಳು ವಿರೋಧಿಸಿ, ಪ್ರತಿಭಟನೆ ನಡೆಸಿದ್ದರಿಂದ ಅವರ ಉದ್ದೇಶ ಈಡೇರಲಿಲ್ಲ. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಕೂಡ 6.90 ಕೋಟಿ ಅನುದಾನದ ಬಗ್ಗೆ ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳನ್ನು ಸಭೆ ಕರೆದು ಅವರ ಅಗತ್ಯತೆಗಳಿಗೆ ಅನುಗುಣವಾಗಿ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿಕೊಂಡು ಸಂಸ್ಥೆಯಿಂದಲೇ ಕಾರ್ಯಕ್ರಮಗಳನ್ನು ರೂಪಿಸಬೇಕು. ಆ ಹಣವನ್ನು ಖರ್ಚು ಮಾಡುವಂತೆ ಸೂಚನೆಯನ್ನು ನೀಡಿತ್ತು.

Advertisements

ಆದರೆ, ಯಾವ ಆದೇಶಕ್ಕೂ ಕಿವಿಕೊಡದ ಅಧಿಕಾರಿಗಳು, ಈ ಸಂಬಂಧ ಯಾವುದೇ ಸಭೆ ಕರೆಯದೆ ತಮ್ಮ ವಿವೇಚನೆಗೆ ತಕ್ಕಂತೆ ಹಾಗೂ ತಮಗೆ ಬೇಕಾದಂತೆ ಕ್ರಿಯಾಯೋಜನೆ ರೂಪಿಸಿ, ಹಣ ಬಳಕೆಯ ರಸೀದಿಗಳನ್ನು ಸಿದ್ದಪಡಿಸಿಕೊಂಡು 6.90 ಕೋಟಿ ಅನುದಾನವನ್ನು ಖರ್ಚು ಮಾಡುವ ಮೂಲಕ ಆದಿವಾಸಿ ಮತ್ತು ಬುಡಕಟ್ಟುಗಳಿಗೆ ಅಗತ್ಯವಿಲ್ಲದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಹೊರಟಿದ್ದಾರೆ. ಇದು ನಿಜಕ್ಕೂ ವಿಷಾಧನೀಯ ಸಂಗತಿ.

WhatsApp Image 2024 10 09 at 3.08.32 PM

ಈ ಸಂಸ್ಥೆಯ ಅಧಿಕಾರಿಗಳಿಗೆ ಆದಿವಾಸಿ ಬುಡಕಟ್ಟು ಸಮುದಾಯಗಳ ಶ್ರೇಯೋಭಿವೃದ್ಧಿ ಬೇಕಾಗಿಲ್ಲ. ಜೊತೆಗೆ ಈ ಜನರು ಇಂದಿಗೂ ಕಾಡುಮೇಡುಗಳಲ್ಲಿ ಶಿಕ್ಷಣವಿಲ್ಲದೆ ಬದುಕುತ್ತಿದ್ದಾರೆ. ಇವರಿಗೆ ಸಂಘಟನೆಗಳಿಲ್ಲದೆ ಅಸಂಗಡಿತರಾಗಿ ರಾಜಕೀಯ ಜ್ಞಾನಗಳಿಲ್ಲದೆ ಇರುವುದು ಅಧಿಕಾರಿಗಳಿಗೆ ವರವಾಗಿ ಪರಿಣಮಿಸಿದೆ.

ಆದ್ದರಿಂದ, ಸರ್ಕಾರವು ಮೂಲ ಆದಿವಾಸಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಿಗದಿ ಮಾಡಿರುವ 6.90 ಕೋಟಿ ಅನುದಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಕೂಡಲೇ ಸ್ಪಷ್ಟ ನಿರ್ದೇಶನ ನೀಡಬೇಕಾಗಿದೆ. ಈ ಸಂಬಂಧ ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಮುಖಂಡರಗಳ ಸಭೆ ಕರೆದು ಅವರ ಶ್ರೇಯೋಭಿವೃದ್ಧಿಗೆ ಅಗತ್ಯವಾದ ಕ್ರಿಯಾಯೋಜನೆಗಳನ್ನು ಸಿದ್ದಪಡಿಸಬೇಕಿದೆ. ಆ ಮೂಲಕವೇ ಅನುದಾನದ ಸದ್ಬಳಕೆ ಮಾಡಬೇಕಾಗಿದೆ. ಇಲ್ಲವಾದರೆ, ಕೇವಲ ಅನುದಾನ ಮಾತ್ರ ಬಳಕೆಯಾಗುತ್ತದೆ. ಆದರೆ, ಅದು ಯಾರಿಗೆ, ಯಾವ ಉದ್ದೇಶಕ್ಕೆ ಬಳಕೆಯಾಗಬೇಕೋ ಆ ಉದ್ದೇಶ ಈಡೇರುವುದಿಲ್ಲ.

ಸಂಸ್ಥೆಯ ಹಾಲಿ ನಿರ್ದೇಶಕರು ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಲಭ್ಯವಿಲ್ಲ. ಅವರಿಗೆ ಕರೆ ಮಾಡಿದರೂ ಫೋನ್ ಸ್ವೀಕರಿಸುವುದಿಲ್ಲ. ಹಾಗಾಗಿ, ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಮೈಸೂರಿನಲ್ಲಿ ಲಭ್ಯವಿರುವ ಯಾವುದಾದರೂ ಅಧಿಕಾರಿಗಳಿಗೆ ಸಂಸ್ಥೆಯ ನಿರ್ದೇಶಕ ಸ್ಥಾನ ನೀಡಬೇಕು. ಇಲ್ಲವಾದರೆ, ಕೂಡಲೇ ಸಂಸ್ಥೆಗೆ ಒಬ್ಬ ಕಾಯಂ ನಿರ್ದೇಶಕರನ್ನು ನೇಮಕ ಮಾಡಬೇಕು. ಜೊತೆಗೆ, ನವಡಿಜಿಟಲ್ ಯುಗದ ಅರಿವೇ ಇಲ್ಲದೆ ಕಾಡಿನಲ್ಲಿ ಬದುಕುತ್ತಿರುವ ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರಲು ಮಂಜೂರಾಗಿರುವ 6.90 ಕೋಟಿ ಹಣವನ್ನು ನೈಜ ಫಲಾನುಭವಿಗಳ ಶ್ರೇಯೋಭಿವೃದ್ಧಿಗೆ ಬಳಸಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X