ಮತ್ತೆ ಘರ್ಜಿಸಲಿದೆ ಕರ್ನಾಟಕ | ಹೊಸ ಕ್ಯಾಂಪೇನ್ ಲೋಗೋ ಬಿಡುಗಡೆ ಮಾಡಿದ ಕಾಂಗ್ರೆಸ್

Date:

  • “ಮತ್ತೆ ಘರ್ಜಿಸಲಿದೆ ಕರ್ನಾಟಕ” ಲೋಗೋ ಹಂಚಿಕೊಂಡ ಎಂ ಬಿ ಪಾಟೀಲ್
  • ರಾಜ್ಯದ ಘನತೆಯನ್ನು ಈ ಅಭಿಯಾನ ಮತ್ತೆ ಮುನ್ನೆಲೆಗೆ ತರಲಿದೆ ಎಂದ ಕಾಂಗ್ರೆಸ್

ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ, “ಮತ್ತೆ ಘರ್ಜಿಸಲಿದೆ ಕರ್ನಾಟಕ” ಎಂಬ ಹೊಸ ಕ್ಯಾಂಪೇನ್ ಆರಂಭಿಸಿದೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಸೇರಿದಂತೆ ಇಂಡಿಯನ್ ಯೂಥ್ ಕಾಂಗ್ರೆಸ್ ಕರ್ನಾಟಕ ಟ್ವೀಟರ್‌ನಲ್ಲಿ ಈ ಅಭಿಯಾನದ ಲೋಗೋ ಹಂಚಿಕೊಂಡಿದ್ದಾರೆ.

ಈ ಅಭಿಯಾನವು ಕರ್ನಾಟಕದ ಜನರಿಗೆ ಪಕ್ಷದ ಬದ್ಧತೆಯನ್ನು ಪ್ರದರ್ಶಿಸುವ ಗುರಿ ಹೊಂದಿದೆ ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ಸೃಷ್ಟಿಸುವ ದೂರದೃಷ್ಟಿಯನ್ನು ಹೊಂದಿದೆ ಎಂದು ಕಾಂಗ್ರೆಸ್ ಹೇಳಿದೆ.

“ಡಬ್ಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಜನರು ನಿರಾಸೆಗೊಂಡಿದ್ದಾರೆ. ಅವರು ಕೋವಿಡ್-19, ಆರ್ಥಿಕ ಕುಸಿತ ಮತ್ತು ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಸೇರಿದಂತೆ ಅನೇಕ ಕಠಿಣ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬಿಜೆಪಿಯಿಂದ ಕರ್ನಾಟಕಕ್ಕಾದ ಅನ್ಯಾಯವನ್ನು ಕನ್ನಡಿಗರು ಇನ್ನೂ ಮರೆತಿಲ್ಲ. ಹೀಗಾಗಿ ಕನ್ನಡಿಗರ ಈ ಸವಾಲುಗಳನ್ನು ಎದುರಿಸಲು ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ಸೃಷ್ಟಿಸಲು ನಾವು ಬದ್ಧರಾಗಿದ್ದೇವೆ” ಎಂದು ಕಾಂಗ್ರೆಸ್ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ರಾಜಕೀಯ ಸತ್ ಪರಂಪರೆಯ ರಾಜ್ಯದಲ್ಲಿ ನಡೆಯಬೇಕಿದೆ ಮುಕ್ತ, ನ್ಯಾಯಸಮ್ಮತ ಚುನಾವಣೆ

ಈ ಹೊಸ ಅಭಿಯಾನವು ಕರ್ನಾಟಕದ ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ರಾಜ್ಯದ ಭವಿಷ್ಯಕ್ಕಾಗಿ ಪಕ್ಷದ ದೃಷ್ಟಿಕೋನವನ್ನು ಹಂಚಿಕೊಳ್ಳಲು ಗಮನ ನೀಡುತ್ತದೆ. ಈ ಅಭಿಯಾನವು ರ್ಯಾಲಿಗಳು, ಮನೆ-ಮನೆ ಪ್ರಚಾರ, ಸಾಮಾಜಿಕ ಮಾಧ್ಯಮಗಳ ಪ್ರಚಾರ ಮತ್ತು ಕನ್ನಡಿಗರ ನಾಡಿ ಮಿಡಿತ ಹಾಗೂ ಅವರಿಗಾದ ಅನ್ಯಾಯವನ್ನು ಸರಿಪಡಿಸುವ ಮೂಲಕ ಕರ್ನಾಟಕವು ಮತ್ತೆ ಘರ್ಜಿಸುವಂತೆ ಮಾಡುವ ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಇದು ಒಳಗೊಂಡಿರುತ್ತದೆ” ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

“ಕರ್ನಾಟಕದ ಜನರು ಉತ್ತಮ ಭವಿಷ್ಯಕ್ಕಾಗಿ ನಮ್ಮ ದೃಷ್ಟಿಕೋನವನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಸಮೃದ್ಧ, ಎಲ್ಲರನ್ನೂ ಒಳಗೊಳ್ಳುವ ಮತ್ತು ಎಲ್ಲರಿಗೂ ಅವಕಾಶಗಳನ್ನು ಒದಗಿಸುವ ರಾಜ್ಯವನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ. ಕಾಂಗ್ರೆಸ್ ನಾಯಕತ್ವದಲ್ಲಿ ಕರ್ನಾಟಕ ಮತ್ತೆ ಘರ್ಜಿಸಲಿದೆ ಎಂದು ನಾವು ನಂಬುತ್ತೇವೆ” ಎಂದು ಕಾಂಗ್ರೆಸ್ ತಿಳಿಸಿದೆ.

“ಕರ್ನಾಟಕ ಮತ್ತೊಮ್ಮೆ ಘರ್ಜಿಸಲಿದೆ” ಅಭಿಯಾನವು ಕನ್ನಡದ ಹೆಮ್ಮೆ ಹಾಗೂ ಕರ್ನಾಟಕದ ಘನತೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತರಲಿದೆ. ಈ ಮೂಲಕ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ...

ಈಗಲಾದರೂ ಚರ್ಚೆಗೆ ಬರುತ್ತದೆಯೇ ಪ್ರಾದೇಶಿಕ ಅಸಮಾನತೆ ಕೂಗು

ಕರ್ನಾಟಕ ಏಕೀಕರಣವಾಗಿ ಅರ್ಧ ಶತಮಾನ ಕಳೆದರೂ ಇಡೀ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಯ...

ಉತ್ತರ ಕನ್ನಡ | ಬೇಸಿಗೆಗೂ ಮುನ್ನವೇ ನೀರಿನ ಬವಣೆ; ಸಂಕಷ್ಟದಲ್ಲಿ ಗ್ರಾಮಗಳು

ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ....

ಚಾಮರಾಜನಗರ | ಸರ್ವರ್‌ ಸಮಸ್ಯೆಯಿಂದ ವಸತಿ ಯೋಜನೆ ದಾಖಲೆ ಸಲ್ಲಿಕೆ ವಿಳಂಬ; ಕಾಲಾವಧಿ ಮುಂದೂಡುವಂತೆ ಒತ್ತಾಯ

ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್‌ 30...