ಉಡುಪಿ | ಪಹಲ್ಗಾಮ್ ಭಯೋತ್ಪಾದಕ ದಾಳಿ : ಮುಸ್ಲಿಮ್ ಜಮಾಅತ್ ಖಂಡನೆ

Date:

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 28 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಘಟನೆಯು ಅಮಾನವೀಯವಾಗಿದ್ದು ಇದನ್ನು ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್ ತೀವ್ರವಾಗಿ ಖಂಡಿಸುತ್ತದೆ.

- Advertisement -

ಧರ್ಮದ ಹೆಸರಲ್ಲಿ ಕೊಲ್ಲುವ, ಹಿಂಸೆಯನ್ನು ಪ್ರಚೋದಿಸುವ ಕೃತ್ಯ ಖಂಡನಾರ್ಹವಾಗಿದ್ದು ಅದನ್ನು ರಾಜಕೀಯಗೊಳಿಸದೆ,
ಧರ್ಮದ ಆಧಾರದಲ್ಲಿ ನೋಡದೆ ದೇಶದ ಮೇಲೆ ಆದಂತಹ ದಾಳಿ ಎಂದು ಪರಿಗಣಿಸಿ ಸರ್ವರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಜಾಗ್ರತೆ ವಹಿಸಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಜಮಾತ್ ಆಗ್ರಹಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಅದೇ ರೀತಿ ಇಲ್ಲಿನ ಕೆಲವು ಪೀತ ಪತ್ರಿಕೆಗಳು ಹಾಗೂ ಕೋಮುವಾದಿ ಶಕ್ತಿಗಳು ಇಂತಹ ಗಂಭೀರ ಘಟನೆಯನ್ನು ಸಹ ಹಿಂದು ಮುಸ್ಲಿಂ ಮಾಡಿ ಇಲ್ಲಿನ ಸ್ವಸ್ಥ ಸಮಾಜದಲ್ಲಿ ಒಡಕನ್ನುಂಟು ಮಾಡುವ ಪ್ರಯತ್ನ ಮಾಢುತ್ತಿರುವುದು ಸಹ ಖಂಡನೀಯ ಇದನ್ನು ಸಹ ಇಲ್ಲಿನ ಸ್ವಸ್ಥ ಸಮಾಜ ಖಂಡಿಸಬೇಕಾಗಿದೆ.

ಅದೇ ರೀತಿ ಮೃತರ ಕುಟುಂಬದ ಜೊತೆ ಸರಕಾರ ಹಾಗೂ ದೇಶದ ಜನರು ನಿಲ್ಲಬೇಕಾಗಿದೆ. ಸರಕಾರ ಮೃತರ ಕುಟುಂಬಗಳಿಗೆ ಗರಿಷ್ಠ ಪರಿಹಾರ ಒದಗಿಸಬೇಕಾಗಿದೆ. ಹಾಗೂ ಜಮ್ಮು ಕಾಶ್ಮೀರಕ್ಕೆ ಆಗಮಿಸುವ ಪ್ರವಾಸಿಗರಿಗೆ ಗರಿಷ್ಠ ಪ್ರಮಾಣದ ಭದ್ರತೆ ಒದಗಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್ ನ ಜಿಲ್ಲಾಧ್ಯಕ್ಷ ಬಿಎಸ್ಎಫ್ ಮೊಹಮ್ಮದ್ ರಫೀಕ್ ಹಾಗೂ ಪ್ರದಾನ ಕಾರ್ಯದರ್ಶಿ H. ಸುಭಾನ್ ಅಹಮದ್ ಹೊನ್ನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...