ಉಡುಪಿ | ನಿರಾಧಾರ ಆರೋಪಗಳನ್ನು ಮಾಡುವುದು ಬಿಟ್ಟು ಸತ್ಯವನ್ನು ಒಪ್ಪಿಕೊಳ್ಳಿ

Date:

ಉಡುಪಿ ಜಿಲ್ಲಾ ಬ್ರಹ್ಮಾವರ ತಾಲೂಕು ಕುಂಜಾಲು ಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ದನದ ರುಂಡ ರಸ್ತೆಯಲ್ಲಿ ಸಿಕ್ಕಿದ್ದು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಈ ವಿಷಯವನ್ನು ಮುಂದಿಟ್ಟುಕೊಂಡು ನಿನ್ನೆ ದಿನ ವಿಶ್ವ ಹಿಂದೂ ಪರಿಷತ್ ನ ನಾಯಕ ಶರಣ್ ಪಂಪ್ವೆಲ್ ರವರು ಇದರ ಹಿಂದೆ ಮುಸ್ಲಿಮರ ಕೈವಾಡವಿದೆ ಎಂದು ಹೇಳಿಕೆ ನೀಡಿದ್ದು ಮುಸ್ಲಿಮರನ್ನು ಜಿಹಾದಿಗಳೆಂದು ನಿಂದಿಸಿದ್ದಾರೆ. ಇದನ್ನು ಕರ್ನಾಟಕ ಮುಸ್ಲಿಂ ಜಮಾತ್ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಅವರ ಹೇಳಿಕೆಗೆ ಏನಾದರೂ ಪುರಾವೆಗಳಿದ್ದಲ್ಲಿ ಅದನ್ನು ಪೊಲೀಸರಿಗೆ ನೀಡಿ ತನಿಕೆಗೆ ಸಹಕರಿಸುವುದು ಬಿಟ್ಟು ಸಾರ್ವಜನಿಕವಾಗಿ ಅಸಂಬದ್ಧ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಕೋಮು ವಿಷವನ್ನು ಹರಡುವುದನ್ನು ಬಿಡಬೇಕು.

- Advertisement -

ಅದಲ್ಲದೆ ಇದ್ದರೆ ಶರಣ್ ಪಂಪುವೆಲ್ ರನ್ನು ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸುವುದರ ಮೂಲಕ ಬಂದಿಸಿ ಹೆಚ್ಚಿನ ತನಿಖೆ ನಡೆಸಬೇಕಾಗಿ ಕೇಳಿಕೊಳ್ಳುತ್ತಾ ಇದೆ. ಅದೇ ರೀತಿ ಕುಂಜಾಲ್ ಮತ್ತು ಪುತ್ತೂರಿನ ಘಟನೆಗಳಿಂದ ಹಿಂದೂ ರಕ್ಷಕರೆನಿಸಿಕೊಂಡಿರುವವರ ನೈಜ ಬಣ್ಣ ಸಮಾಜದ ಮುಂದೆ ಬಯಲಾಗಿದ್ದು ಅದನ್ನು ಮುಚ್ಚಿಕೊಳ್ಳಲು ಶರಣ್ ರವರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಾ ಇದ್ದಾರೆ ಅವರು ಸತ್ಯವನ್ನು ಒಪ್ಪಿಕೊಳ್ಳಬೇಕು ಹಾಗೂ ಮುಸ್ಲಿಮರ ವಿರುದ್ಧ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಅದಲ್ಲದೆ ಇದ್ದರೆ ಇಲ್ಲಿನ ಮುಸ್ಲಿಂರು ಸೌಹಾರ್ದ ಪ್ರೇಮಿ ಜನರೊಂದಿಗೆ ಮತ್ತು ಸಂಘಟನೆಗಳೊಂದಿಗೆ ಸೇರಿಕೊಂಡು ಅದಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಕರ್ನಾಟಕ ಮುಸ್ಲಿಂ ಜಮಾತ್ ಉಡುಪಿ ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...