ಮಂಗಳೂರು | ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಲೇಖನಿ ಎತ್ತಬೇಕಾದ ತುರ್ತಿದೆ: ಉಮರ್ ಯು.ಹೆಚ್

Date:

ದ್ವೇಷದ ರಾಜಕಾರಣದಿಂದಾಗಿ ಜನರ ನಡುವೆ ಕಂದರಗಳು ಸೃಷ್ಟಿಯಾಗುತ್ತಿರುವ ಇಂದಿನ ದಿನಗಳಲ್ಲಿ ಲೇಖಕರು ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಲೇಖನಿ ಎತ್ತಬೇಕಾದ ತುರ್ತು ಅಗತ್ಯವಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ಹೇಳಿದರು.

- Advertisement -

ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜಕಾರಣಿಗಳು, ಜನ ನಾಯಕರು ಜನರ ನಡುವೆ ಗೊಂದಲ ಮತ್ತು ಅನುಮಾನಗಳಿಗೆ ಎಡೆಮಾಡಿ ಕೊಡುವ ಬಾಲಿಶ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಉಮರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಮಾಡೂರು ಗೋಲ್ಡನ್ ಫ್ರೆಂಡ್ಸ್ ಸಹಯೋಗದಲ್ಲಿ ಬುಧವಾರ ಮಂಗಳೂರು ಸಮೀಪದ ಕೋಟೆಕಾರಿನ ಬೈತುಲ್ ಈಮಾನ್ ನಲ್ಲಿ ಏರ್ಪಡಿಸಿದ್ದ ‘ಮೊದಲ ಮನೆ ಮನೆ ಬ್ಯಾರಿ ಕವಿಗೋಷ್ಠಿ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ವಿ. ಇಬ್ರಾಹಿಂ ನಡುಪದವು, ಫರ್ಹಾನ ಉಳ್ಳಾಲ, ಮನ್ಸೂರ್ ಮೂಲ್ಕಿ (ಹೃದಯ ಕವಿ), ರಮೀಝ ಯಂ.ಬಿ., ಯು.ಕೆ‌. ಖಾಲಿದ್, ಸಿಹಾನ ಬಿ.ಎಂ., ರಹಿಮಾನ್ ಬೋಳಿಯಾರ್ ಹಾಗೂ ಸಾರ ಮಸ್ಕುರುನ್ನೀಸ ಬ್ಯಾರಿ ಕವನ ಮಂಡಿಸಿದರು.

ಕಾರ್ಯಕ್ರಮದ ಸಂಚಾಲಕ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಹಮೀದ್ ಹಸನ್ ಮಾಡೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನಝ್ಮತುನ್ನಿಸ ಲೈಝ್ ಕಿರಾಅತ್ ಪಠಿಸಿದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಯು.ಹೆಚ್. ಖಾಲಿದ್ ಉಜಿರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾಡೂರು ಗೋಲ್ಡನ್ ಫ್ರೆಂಡ್ಸ್ ಅಧ್ಯಕ್ಷ ರಶೀದ್ ಹಂಝ ಮಾಡೂರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದಲಿತರ ಸರಣಿ ಮೂರು ಕೊಲೆಗಳ ಸಿಐಡಿ ತನಿಖೆಗೆ ಆಗ್ರಹ: ಗೃಹ ಸಚಿವರಿಗೆ ಮನವಿ

ಜಿಲ್ಲೆಯಲ್ಲಿ ನಡೆದ ದಲಿತರ ಸರಣಿ ಮೂರು ಕೊಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ...

ರಾಯಚೂರು | ಬಸವರಾಜ ಆತ್ಮಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಕೇಸ್, ಮೂವರ ಬಂಧನ

ಮಸ್ಕಿ ತಾಲ್ಲೂಕಿನ ಮೆದಕಿನಾಳ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿ...

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ...