ರಾಯಚೂರು | ಬಾಲಕಿಯರ ವಸತಿ ನಿಲಯದಲ್ಲಿ ಮೊಬೈಲ್ ಇಟ್ಟ ಆರೋಪಿಯನ್ನು ಕೂಡಲೇ ಬಂಧಿಸಿ: ಕರವೇ ಆಗ್ರಹ

Date:

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಾಜಲಬಂಡಾ ಮೊರಾರ್ಜಿ ವಸತಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ಮೊಬೈಲ್ ಇಟ್ಟಿರುವ ಆರೋಪಿಯನ್ನು ಕೂಡಲೇ ಬಂಧಿಸಬೇಕು ಹಾಗೂ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅಶೋಕ ಕುಮಾರ ಜೈನ್ ಹೇಳಿದರು.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ವಿಷಪೂರಿತ ಆಹಾರ ಸೇವನೆ ಮಾಡಿದ 50ಕ್ಕೂ ಹೆಚ್ಚು ಜನ ಅಸ್ವಸ್ಥವಾಗಿದ್ದ ಘಟನೆ ನಡೆದಿತ್ತು. ಈಗ ಬಾಲಕಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿರುವ ಘಟನೆ ನಡೆದಿದೆ. ಶಾಲೆ ಮೇಲುಸ್ತುವಾರಿ ವೈಫಲ್ಯದಿಂದ ಮೇಲಿಂದ ಮೇಲೆ ಘಟನೆ ನಡೆಯುತ್ತಿವೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಘಟನೆ ನಡೆದರೂ ಶಾಲೆ ಪ್ರಿನ್ಸಿಪಾಲ್‌, ಮೇಲ್ವಿಚಾರಕರು ದೂರು ನೀಡದೇ ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಸಂಘಟನೆ ನಡೆಸಿದ ನಂತರ ಅಪರಿಚಿತ ವ್ಯಕ್ತಿ ಹೆಸರಿನಲ್ಲಿ ಕೇಸ್ ದಾಖಲಾಗಿದೆ. ಆರೋಪಿ ಯಾರೆಂಬುದು ಶಾಲೆಯ ಮುಖ್ಯಸ್ಥರಿಗೆ ಗೊತ್ತಿದೆ. ಈ ಹಿಂದೆಯೂ ಇದೇ ರೀತಿ ಪ್ರಕರಣ ನಡೆದಿತ್ತು. ಆದರೂ ಕ್ರಮಕ್ಕೆ ಮುಂದಾಗದೇ ಇರುವುದರಿಂದ ಮತ್ತೊಂದು ಘಟನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕರ್ತವ್ಯ ಲೋಪ ಎಸಗಿ ಅಧಿಕಾರಿಗಳನ್ನು ಅಮಾನತುಗೊಳಿಸಿ ವಸತಿ ನಿಲಯದಲ್ಲಿ ಸುರಕ್ಷತೆ, ಸೌಲಭ್ಯ ಒದಗಿಸಬೇಕು ಎಂದರು.

ತಾಲೂಕು ಅಧ್ಯಕ್ಷ ಆನಂದ ಸ್ವಾಮಿ ಮಾತನಾಡಿ, 6 ರಿಂದ 10ನೇ ತರಗತಿ ಮಕ್ಕಳು ಅಭ್ಯಾಸ ಮಾಡುತ್ತಿರುವ ಮೊರಾರ್ಜಿ ವಸತಿ ಶಾಲೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಪಟ್ಟಣಕ್ಕೆ ಹೊಂದಿಕೊಂಡಿರುವ ವಸತಿ ಶಾಲೆಯಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಘಟನೆಯಿಂದ ಪಾಲಕರು ಆತಂಕ ಪಡುವಂತಾಗಿದೆ. ಅಪರಿಚಿತ ವ್ಯಕ್ತಿ ಯಾರೆಂಬುದು ಶಾಲೆ ಮುಖ್ಯಸ್ಥರಿಗೆ ತಿಳಿದಿದೆ. ಈ ಹಿಂದೆ ಘಟನೆ ನಡೆದಾಗ ತಿಳುವಳಿಕೆ ನೀಡಿ ಕಳುಹಿಸಲಾಗಿತ್ತು. ಈಗ ಅದೇ ರೀತಿ ಘಟನೆ ಮರುಕಳಿಸಿದೆ. ಕೂಡಲೇ ಬೇಜವಾಬ್ದಾರಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಬೇಕು. ವಸತಿ ಶಾಲೆ ಕಾಂಪೌಂಡ್ ಎತ್ತರವಾಗಿ ನಿರ್ಮಿಸಬೇಕು. ಅಗತ್ಯ ಅಡುಗೆ ಸಿಬ್ಬಂದಿ, ಭದ್ರತೆ ಒದಗಿಸಬೇಕು ಹಾಗೂ ವಸತಿ ನಿಲಯವನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದರು.

ಇದನ್ನು ಓದಿದ್ದೀರಾ? ಮಂಗಳೂರು | ಎನ್‌ಐಟಿಕೆಯಲ್ಲಿ 1999 ಬ್ಯಾಚ್ ಹಳೆಯ ವಿದ್ಯಾರ್ಥಿಗಳ ಪುನರ್‌ ಮಿಲನ

ಸಂಗಮೇಶ ಮಂಗಾನವರ ಮಾತನಾಡಿ, ಮೊರಾರ್ಜಿ ವಸತಿ ಶಾಲೆ ಖಾಯಂ ಪ್ರಿನ್ಸಿಪಾಲ ರಜೆಯ ಮೇಲೆ ತೆರಳಿದ್ದಾರೆ. ದೈಹಿಕ ಶಿಕ್ಷಕರಿಗೆ ಪ್ರಭಾರ ಹುದ್ದೆ ನೀಡಿ ವಸತಿ ನಿಲಯ ನಿರ್ವಹಿಸಲಾಗುತ್ತಿದೆ. ಆಡಳಿತ ವ್ಯವಸ್ಥೆ ವೈಫಲ್ಯದಿಂದ ಬಾಲಕಿಯರು ಆತಂಕದಲ್ಲಿ ಅಭ್ಯಾಸ ಮಾಡುವಂತಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ಪರಿಶಿಷ್ಟ ಪಂಗಡದ ಇಲಾಖೆ ಅಧಿಕಾರಿಗಳ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಭೀಮಣ್ಣ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...