ಕನ್ನಡಪರ ಹೋರಾಟಗಾರರ ವಿರುದ್ಧ ಹಲವೆಡೆ ದಾಖಲಾಗಿರುವ ಎಲ್ಲ ಪ್ರಕರಣಗಳ ಎಫ್‌ಐಆರ್ ಹಿಂಪಡೆಯಲಾಗುವುದೆಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಶಿವಮೊಗ್ಗ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ ಎಸ್ ಹರ್ಷ ವ್ಯಕ್ತಪಡಿಸಿದ್ದಾರೆ.
ಕನ್ನಡಪರ ಸಂಘಟನೆಗಳಲ್ಲಿ ಹಲವರು ಬಡ, ಕೂಲಿ ಕಾರ್ಮಿಕರು, ಆಟೋ ಚಾಲಕರು, ರೈತರು, ಸಾಹಿತಿಗಳು, ಯುವ ಬರಹಗಾರರಿದ್ದು, ನಾಡು, ನುಡಿ, ನೆಲ ಭಾಷೆಗಳ ಹೋರಾಟದಲ್ಲಿ ಭಾಗಿಯಾಗಿದ್ದರೆಂದು ಕನ್ನಡಪರ ಹೋರಾಟಗಾರರ ಮೇಲೆ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗುಂಡು ಹಾರಿಸಿ ವಿದ್ಯಾರ್ಥಿನಿಯನ್ನು ಕೊಂದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ
ಹೋರಾಟಗಾರರ ಎಲ್ಲ ಕೇಸ್‌ಗಳನ್ನೂ ಹಿಂಪಡೆದುಕೊಂಡು, ಹೋರಾಟಗಾರರ ಹಿತ ಕಾಪಾಡಿದ್ದಕ್ಕೆ ಹಾಗೂ ಈ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಕನ್ನಡಪರ ಹೋರಾಟಗಾರರ ಪರವಾಗಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ