ಕಾರವಾರ | ಸದಾಶಿವಗಡದಲ್ಲಿ 41.3 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲು; ರಾಜ್ಯದಲ್ಲೇ ಇದು ಗರಿಷ್ಠ!

Date:

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಸಾವಂತವಾಡಾ ಹೋಬಳಿ ವ್ಯಾಪ್ತಿಯಲ್ಲಿರುವ ಸದಾಶಿವಗಡದಲ್ಲಿ ಮಂಗಳವಾರ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಇದು ರಾಜ್ಯದಲ್ಲೇ ಗರಿಷ್ಠ ತಾಪಮಾನ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (ಕೆಎಸ್‌ಎನ್ಎಂಡಿಸಿ) ಮಾಹಿತಿ ನೀಡಿದೆ.

- Advertisement -

ಕರಾವಳಿಯ ಮೂರು ಜಿಲ್ಲೆಗಳ ಏಳು ಸ್ಥಳಗಳಲ್ಲಿ ಸರಾಸರಿ ಉಷ್ಣಾಂಶ ಪ್ರಮಾಣ 40 ಡಿಗ್ರಿ ಸೆಲ್ಸಿಯಸ್ ಮೀರಿದೆ. ಉತ್ತರ ಕನ್ನಡ ಜಿಲ್ಲೆಯ 6, ದಕ್ಷಿಣ ಕನ್ನಡದ 4, ಉಡುಪಿಯ 2 ಹಾಗೂ ರಾಯಚೂರು ಜಿಲ್ಲೆಯ 1 ಕಡೆಯಲ್ಲಿ ಸರಾಸರಿ ಉಷ್ಣಾಂಶ ಸರಾಸರಿ 39 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿತ್ತು ಎಂದು ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಚಳಿ ಕಡಿಮೆಯಾಗಿ, ಏಕಾಏಕಿ ಸೆಕೆಯ ವಾತಾವರಣ ಆವರಿಸುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಕರಾವಳಿ ಭಾಗದಲ್ಲಿ ಉಷ್ಣಾಂಶ ಕಡಿಮೆ ಇದ್ದರೂ ಆರ್ದ್ರತೆ ಅಧಿಕ ಇರುವ ಕಾರಣ ಸೆಕೆ ಹೆಚ್ಚಿತ್ತು. ಈಗ ಉಷ್ಣಾಂಶ ಅಧಿಕ ಆಗಿರುವುದಿಂದ ಸೆಕೆ ಹೆಚ್ಚಾಗಬಹುದು ಎಂಬ ಆತಂಕವಿದೆ.

ಮೂರು ಜಿಲ್ಲೆಗಳಿಗೆ ಬಿಸಿಗಾಳಿ ಎಚ್ಚರಿಕೆ

ರಾಜ್ಯದ ಬಹುತೇಕ ಕಡೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚುತ್ತಿರುವ ಬೆನ್ನಲ್ಲೇ ಕರಾವಳಿಯ 3 ಜಿಲ್ಲೆಗಳಿಗೆ ಬುಧವಾರದಿಂದ ಮೂರು ದಿನಗಳ ಕಾಲ ಬಿಸಿಗಾಳಿಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಖಾ ಅಲೆ ಕಾಣಿಸಿಕೊಳ್ಳುವ ಸಂಭವವಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಉಷ್ಣಾಂಶವು ಸಾಮಾನ್ಯಕ್ಕಿಂತ ಐದು ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗುವ ಬಗ್ಗೆ ಅಂದಾಜಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...