ಕಾರವಾರ | ಭಾರೀ ಮಳೆ-ಗಾಳಿಗೆ ಕಡವಾಡದ 60 ವರ್ಷಗಳ ಹಳೆಯ ಸೇತುವೆ ನೆಲಸಮ

Date:

ಕಾರವಾರ: ತಾಲೂಕಿನ ಕಡವಾಡ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆಯೊಂದು ಸೋಮವಾರ ರಾತ್ರಿ ಭಾರೀ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಕುಸಿದು ಬಿದ್ದಿದೆ. ಸುಮಾರು ಆರು ದಶಕಗಳ ಇತಿಹಾಸ ಹೊಂದಿದ್ದ ಈ ಸೇತುವೆಯ ಮಧ್ಯಭಾಗ ಸಂಪೂರ್ಣವಾಗಿ ಹಾನಿಗೊಳಗಾಗಿ ಹಲವು ತುಂಡುಗಳಾಗಿ ನದಿಗೆ ಬಿದ್ದಿರುವುದಾಗಿ ತಿಳಿದುಬಂದಿದೆ.

- Advertisement -

ಘಟನೆ ನಡೆದ ವೇಳೆ ಸೇತುವೆ ಮೇಲೆ ಯಾರೂ ಇರದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಳೆದ ಕೆಲವು ವರ್ಷಗಳಿಂದ ಸೇತುವೆಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕ ಹಾಗೂ ವಾಹನ ಸಂಚಾರವನ್ನು ಈಗಾಗಲೇ ನಿಷೇಧಿಸಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಅವಧಿಯಲ್ಲಿ ಉದ್ಘಾಟನೆಗೊಂಡಿದ್ದ ಈ ಸೇತುವೆ ಹಲವು ವರ್ಷಗಳ ಕಾಲ ಕಡವಾಡ ಭಾಗದ ಜನರ ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು. ಬಳಿಕ ಹೊಸ ಸೇತುವೆ ನಿರ್ಮಾಣವಾದ ನಂತರ ಹಳೆಯ ಸೇತುವೆಯ ಬಳಕೆ ಕಡಿಮೆಯಾಗಿದ್ದರೂ, ಸ್ಥಳೀಯ ಮೀನುಗಾರರು ಮೀನುಗಾರಿಕೆ ಚಟುವಟಿಕೆಗಳಿಗೆ ಇದನ್ನು ಬಳಸುತ್ತಿದ್ದರು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಮಾರಿಕಾಂಬಾ ದೇವಸ್ಥಾನ: ನೂತನ ಧರ್ಮದರ್ಶಿಗಳ ಆಯ್ಕೆ ಪೂರ್ಣ; ಐವರ ನೇಮಕ

ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಅನೇಕ ಮೀನುಗಾರರು ಸೇತುವೆ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುವುದು ಸಾಮಾನ್ಯವಾಗಿತ್ತು. ಹೀಗಾಗಿ ಸೇತುವೆಯ ಕುಸಿತವು ಆ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದ್ದು, ಸ್ಥಳೀಯರಲ್ಲಿ ಬೇಸರ ಮೂಡಿಸಿದೆ.

ಹಳೆಯ ಸೇತುವೆಯ ಪಕ್ಕದಲ್ಲೇ ನಿರ್ಮಿಸಲಾಗಿರುವ ಹೊಸ ಸೇತುವೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಸಿದ ಸೇತುವೆಯ ಸುತ್ತಮುತ್ತ ಅಪಾಯದ ಪರಿಸ್ಥಿತಿ ಇರುವುದರಿಂದ ಸಾರ್ವಜನಿಕರು ಮತ್ತು ಮೀನುಗಾರರು ಆ ಪ್ರದೇಶಕ್ಕೆ ತೆರಳದಂತೆ ಮುನ್ನೆಚ್ಚರಿಕೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿ ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಆರೋಪಿ ಸೆರೆ

ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿಕೊಂಡು ಜಿಲ್ಲೆಯ ಉದ್ಯಮಿ ಹಾಗೂ...

ಉಡುಪಿ | ಮಲಬಾರ್ ಗೋಲ್ಡ್‌ನಲ್ಲಿ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನಕ್ಕೆ ಚಾಲನೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿರುವ ‘ಆರ್ಟಿಸ್ಟ್ರಿ’ ಕಲಾತ್ಮಕ...

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...