ಕಾರವಾರ | ಕಡಲ ಒಡಲು ಸೇರಿದ 66 ಅತಿಥಿಗಳು: ಭಾವಳ ತೀರದಲ್ಲಿ ಅರಣ್ಯ ಇಲಾಖೆಯಿಂದ ಕಡಲಾಮೆ ಮರಿಗಳ ಬಿಡುಗಡೆ

Date:

ಕಾರವಾರ: ಅರಣ್ಯ ಇಲಾಖೆ ಮಾರ್ಗದರ್ಶನದಲ್ಲಿ ಭಾವಳ ಕಡಲತೀರದಲ್ಲಿ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಬಿಡುವ ವಿಶೇಷ ಕಾರ್ಯಕ್ರಮ ನಡೆಯಿತು.

- Advertisement -

ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕಾರವಾರ ವಿಭಾಗ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಕಾರವಾರ ಉಪವಿಭಾಗದ ಮಾರ್ಗದರ್ಶನದಂತೆ, ಕೋಸ್ಟಲ್ & ಮರೈನ್ ಇಕೋ ಸಿಸ್ಟಮ್ ಸೆಲ್ ಕಾರವಾರದ ಸಲಹೆ ಸೂಚನೆ ಮೇರೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಈ ಕಾರ್ಯಕ್ರಮದಲ್ಲಿ ಗೂಡಿನಿಂದ ಹೊರಬಂದ ಒಟ್ಟು 66 ಕಡಲಾಮೆ ಮರಿಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಪುನಃ ಬಿಡಲಾಯಿತು. ಕಡಲಾಮೆಗಳ ಸಂರಕ್ಷಣೆ ಮತ್ತು ಸಮುದ್ರ ಪರಿಸರದ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸ್ಥಳೀಯರು ಹಾಗೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ವೈಟ್ ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸಿದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿಗಳ ಖಡಕ್ ಸೂಚನೆ

ಮರೈನ್ ಬಯಾಲಜಿ ವಿಭಾಗದ ವಿದ್ಯಾರ್ಥಿಗಳು, ಜೆಎಲ್‌ಆರ್ ಪ್ರವಾಸಿಗರು, ಪ್ರಾಣಿಪ್ರಿಯರು, ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೋಸ್ಟಲ್ & ಮರೈನ್ ಇಕೋ ಸಿಸ್ಟಮ್ ಸೆಲ್ ಹಾಗೂ ಗೋಪಿಶಿಟ್ಟಾ ವಲಯದ ಉಪ ವಲಯ ಅರಣ್ಯಾಧಿಕಾರಿಗಳು, ಗಸ್ತು ಅರಣ್ಯ ಪಾಲಕರು ಮತ್ತು ಸಿಬ್ಬಂದಿಗಳು ಸಹಕರಿಸಿದರು.

ಈ ಸಂದರ್ಭದಲ್ಲಿ ಕಾರವಾರ ವಿಭಾಗದ ಮಾನ್ಯ ಶ್ರೀ ರವಿಶಂಕರ್ ಸಿ (ಐಎಫ್‌ಎಸ್), ಕಾರವಾರ ಉಪವಿಭಾಗದ ಶ್ರೀ ಕೆ.ಡಿ. ನಾಯ್ಕ್, ಗೋಪಿಶಿಟ್ಟಾ ವಲಯ ಅರಣ್ಯಾಧಿಕಾರಿ ಶ್ರೀ ವಿ.ಪಿ. ನಾಯ್ಕ್, ನೌಕಾಪಡೆ ಕಾರವಾರದ ಹೆಚ್ಚುವರಿ ಹಣಕಾಸು ಸಲಹೆಗಾರರಾದ ಶ್ರೀಮತಿ ಕೆ.ಜಿ. ಅಮೂಲ್ಯ (ಐಡಿಎಎಸ್) ಹಾಗೂ ಉಪ ಹಣಕಾಸು ಸಲಹೆಗಾರರಾದ ಎಸ್. ಕೃಷ್ಣಮೂರ್ತಿ (ಐಡಿಎಎಸ್) ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...