ಕಾರವಾರ | ಸುಸ್ಥಿತಿಯ ಕಾಂಕ್ರೀಟ್ ರಸ್ತೆಗೆ ಡಾಂಬರ್ ಲೇಪನ; ಕೆಶಿಪ್ ವಿರುದ್ಧ ಜನರ ಆಕ್ರೋಶ, ಶಾಸಕರಿಂದ ಕಾಮಗಾರಿ ಸ್ಥಗಿತ

Date:

ಕಾರವಾರ: ನಗರದ ಹಬ್ಬುವಾಡ ಭಾಗದಲ್ಲಿ ಕೆಶಿಪ್ (KSHIP) ಇಲಾಖೆಯು ನಡೆಸಿದ ಅವೈಜ್ಞಾನಿಕ ಕಾಮಗಾರಿ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗೀತಾಂಜಲಿ ಚಿತ್ರಮಂದಿರದಿಂದ ಇಸ್ಕಾನ್ ದೇವಸ್ಥಾನದವರೆಗೆ ಉತ್ತಮ ಸ್ಥಿತಿಯಲ್ಲಿದ್ದ ಕಾಂಕ್ರೀಟ್ ರಸ್ತೆಯ ಮೇಲೆ ಏಕಾಏಕಿ ಡಾಂಬರು ಹಾಕುವ ಮೂಲಕ ಗುತ್ತಿಗೆದಾರರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

- Advertisement -

ಯಾವುದೇ ಮುನ್ಸೂಚನೆ ಅಥವಾ ಪೂರ್ವಾನುಮತಿ ಇಲ್ಲದೆ ನಡೆಯುತ್ತಿದ್ದ ಈ ಕಾಮಗಾರಿಯನ್ನು ಕಂಡ ಸ್ಥಳೀಯರು ಕೆಲಸ ಸ್ಥಗಿತಗೊಳಿಸುವಂತೆ ಪಟ್ಟು ಹಿಡಿದರು. ಈ ವೇಳೆ ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ಕಾಮಗಾರಿ ನಿಲ್ಲಿಸಲು ಸೂಚಿಸಿದರೂ ಗುತ್ತಿಗೆದಾರರು ಸ್ಪಂದಿಸಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಅಂತಿಮವಾಗಿ ಪರಿಸ್ಥಿತಿ ವಿಕೋಪಕ್ಕೆ ಹೋದಾಗ, ನಗರಸಭೆ ಅಧಿಕಾರಿಗಳು ತಮ್ಮ ವಾಹನವನ್ನೇ ಡಾಂಬರು ಸುರಿಯುವ ಯಂತ್ರಕ್ಕೆ ಅಡ್ಡಲಾಗಿ ನಿಲ್ಲಿಸಿ ಕೆಲಸವನ್ನು ಬಲವಂತವಾಗಿ ನಿಲ್ಲಿಸಿದರು. ಈ ವಿಚಿತ್ರ ಕಾಮಗಾರಿಯ ಹಿಂದೆ ಸರ್ಕಾರಿ ಇಲಾಖೆಗಳ ನಡುವಿನ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದೆ.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ ಜೆರಟಗಿ ಅವರು ಮಾತನಾಡಿ, “ಈ ಕಾಮಗಾರಿಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಮತ್ತು ನಮ್ಮಿಂದ ಯಾವುದೇ ಎನ್‌ಓಸಿ (NOC) ಪಡೆದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಹೊನ್ನಾವರ | ಅಂಪೈರ್ ತೀರ್ಪಿಗೆ ಆಕ್ಷೇಪ: ಜಗಳ ಬಿಡಿಸಲು ಹೋದ ವೃದ್ಧ ರೈತನ ಮೇಲೆ ಬ್ಯಾಟ್‌ನಿಂದ ಹಲ್ಲೆ

ಆದರೆ ಕೆಶಿಪ್ ಇಲಾಖೆಯು, ಇದು ಅಪಘಾತ ವಲಯವಾಗಿರುವುದರಿಂದ ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದೆ.

ಶಾಸಕ ಸತೀಶ ಸೈಲ್ ಮಧ್ಯಸ್ಥಿಕೆ; ವಿಷಯ ತಿಳಿಯುತ್ತಿದ್ದಂತೆ ಕಾರವಾರದ ಶಾಸಕ ಸತೀಶ ಸೈಲ್ ಅವರು ತಕ್ಷಣವೇ ಕಾಮಗಾರಿ ನಿಲ್ಲಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಅಲ್ಲದೆ, ಈಗಾಗಲೇ ಕಾಂಕ್ರೀಟ್ ರಸ್ತೆಯ ಮೇಲೆ ಹಾಕಲಾಗಿರುವ ಡಾಂಬರನ್ನು ಕೂಡಲೇ ತೆರವುಗೊಳಿಸುವಂತೆ ಆದೇಶಿಸಿದ್ದಾರೆ.

ಸಾರ್ವಜನಿಕರ ಹಣವನ್ನು ಪೋಲು ಮಾಡಿ, ಸುಸ್ಥಿತಿಯಲ್ಲಿದ್ದ ರಸ್ತೆಯನ್ನು ಹಾಳುಗೆಡವಿದ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸಾರ್ವಜನಿಕರ ತೀವ್ರ ಒತ್ತಡ ಹಾಗೂ ಶಾಸಕರ ಮಧ್ಯಸ್ಥಿಕೆಯಿಂದಾಗಿ, ಅವೈಜ್ಞಾನಿಕವಾಗಿ ಹಾಕಲಾಗಿದ್ದ ಡಾಂಬರನ್ನು ಇದೀಗ ತೆರವುಗೊಳಿಸುವ ಕಾರ್ಯ ನಡೆದಿದೆ.

ಅಧಿಕಾರಿಗಳ ಇಂತಹ ಎಡವಟ್ಟುಗಳಿಂದ ಜನಸಾಮಾನ್ಯರ ತೆರಿಗೆ ಹಣ ವ್ಯರ್ಥವಾಗುತ್ತಿರುವುದಕ್ಕೆ ಜಿಲ್ಲೆಯಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...