ಕಾರವಾರ | ನಿಂತಿದ್ದ ಬಸ್‌ಗೆ ಬೈಕ್‌ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Date:

ಕಾರವಾರ ನಗರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಬೆಳಿಗ್ಗೆ ನಿಂತಿದ್ದ ಬಸ್ಸಿಗೆ ಬೈಕ್‌ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.

- Advertisement -

ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ(42) ಮೃತಪಟ್ಟವರು. ಇವರು ಸದಾಶಿವಗಡದಿಂದ ಕಾರವಾರಕ್ಕೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ದಿವೇಕರ ವಾಣಿಜ್ಯ ಕಾಲೇಜಿನ ಬಳಿ ನಿಂತಿದ್ದ ಸಾರಿಗೆ ಬಸ್ಸಿನ ಹಿಂಭಾಗಕ್ಕೆ ಇವರ ಬೈಕ್ ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಪಿಕಪ್ ವಾಹನ ಕೂಡ ಬೈಕಿಗೆ ಡಿಕ್ಕಿ ಹೊಡೆದಿದ್ದು, ಮೈಕಲ್ ನರೋನಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಆ.16ರ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲೇಬೇಕು: ಉಡಚಪ್ಪ ಮಾಳಗಿ

ಅಪಘಾತದಲ್ಲಿ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಪಿಕಪ್ ವಾಹನಕ್ಕೂ ಹಾನಿಯಾಗಿದೆ. ಬೈಕಿನ ಹಿಂಬದಿ ಸವಾರ ಅರುಣ ಸುಬ್ರಾಯ ನಾಯ್ಕ ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ಅವರನ್ನು ತಕ್ಷಣವೇ ಉತ್ತರ ಕನ್ನಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...