ಕಾರವಾರ | ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್: ಕಲಾಪ ಮುಂದೂಡಿಕೆ, ತಪಾಸಣೆಯ ಬಳಿಕ ನಿಟ್ಟುಸಿರು

Date:

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪ್ರಧಾನ ನ್ಯಾಯಾಲಯಕ್ಕೆ ಅಪರಿಚಿತರಿಂದ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಇಡೀ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

- Advertisement -

ನ್ಯಾಯಾಲಯದ ಅಧಿಕೃತ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿರುವ ಕಿಡಿಗೇಡಿಗಳು, “ನ್ಯಾಯಾಧೀಶರ ಕೊಠಡಿಯಲ್ಲಿ RDX ಮತ್ತು IED ಸ್ಫೋಟಕಗಳನ್ನು ಇರಿಸಲಾಗಿದೆ” ಎಂದು ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲದೆ, ಮಧ್ಯಾಹ್ನದೊಳಗೆ ನ್ಯಾಯಾಲಯದ ಆವರಣವನ್ನು ಸಂಪೂರ್ಣವಾಗಿ ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದರಿಂದ ಎಚ್ಚೆತ್ತ ಅಧಿಕಾರಿಗಳು ತಕ್ಷಣವೇ ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ಮುಂದೂಡಿ, ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸ್ ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದರು. ನ್ಯಾಯಾಲಯದ ಒಳಾಂಗಣ, ಹೊರಾಂಗಣ ಹಾಗೂ ಪಾರ್ಕಿಂಗ್ ಪ್ರದೇಶ ಸೇರಿದಂತೆ ಪ್ರತಿಯೊಂದು ಮೂಲೆಯನ್ನೂ ತೀವ್ರವಾಗಿ ತಪಾಸಣೆ ನಡೆಸಲಾಯಿತು.

ಸುದೀರ್ಘ ಪರಿಶೀಲನೆಯ ನಂತರ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದ ಕಾರಣ ಸಿಬ್ಬಂದಿ ಮತ್ತು ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಬೆದರಿಕೆ ಇಮೇಲ್‌ನಲ್ಲಿ ಕೆಲವು ವಿಚಿತ್ರ ಅಂಶಗಳು ಕಂಡುಬಂದಿದ್ದು, ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಮತ್ತಿಘಟ್ಟ ಜಲಪಾತದಲ್ಲಿ ದುರಂತ; ಪ್ರವಾಸಕ್ಕೆ ಬಂದ ಮಣಿಪಾಲ್ ಬಿ.ಟೆಕ್ ವಿದ್ಯಾರ್ಥಿ ನೀರುಪಾಲು

ಡಿಎಂಕೆ ನಾಯಕರು ಮತ್ತು ಪ್ರಮುಖ ರಾಜಕೀಯ ತಂತ್ರಗಾರರ ಹೆಸರುಗಳನ್ನು ಬಳಸಲಾಗಿದ್ದು, ‘ಪಾಕ್ ಐಎಸ್‌ಐ ಸೆಲ್ – ಕೊಯಮತ್ತೂರು ಎಲ್‌ಟಿಟಿಇ’ ಎಂಬ ಪದಗಳನ್ನು ಬಳಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸಲು ಈ ರೀತಿ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಹಿಂದೆಯೂ ಇದೇ ಮಾದರಿಯಲ್ಲಿ ಕಾರವಾರ ಮತ್ತು ಭಟ್ಕಳ ತಹಶೀಲ್ದಾರ್ ಕಚೇರಿಗಳಿಗೂ ಇಮೇಲ್ ಬೆದರಿಕೆಗಳು ಬಂದಿದ್ದವು. ಈ ಬಾರಿಯೂ ಕಿಡಿಗೇಡಿಗಳು ತಮ್ಮ ಗುರುತು ಮರೆಮಾಚಲು VPN (Virtual Private Network) ಬಳಸಿ ಇಮೇಲ್ ಕಳುಹಿಸಿರುವ ಸಾಧ್ಯತೆಯಿದೆ ಎಂದು ಸೈಬರ್ ಕ್ರೈಂ ವಿಭಾಗ ಶಂಕಿಸಿದೆ.

ಸದ್ಯ ಸೈಬರ್ ಪೊಲೀಸರು ಇಮೇಲ್ ಮೂಲದ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...