ಕಾರವಾರ | ಗಡಿಭಾಗದ ಕನ್ನಡ ಶಾಲೆಯಲ್ಲಿ ಪುಂಡರ ಅಟ್ಟಹಾಸ: ನೀರಿನ ತೊಟ್ಟಿಗೆ ಮೂತ್ರ ವಿಸರ್ಜಿಸಿ ವಿಕೃತಿ!

Date:

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋವಾ ಗಡಿಭಾಗದ ಸದಾಶಿವಗಡದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಂಡರ ಗುಂಪೊಂದು ಅಮಾನವೀಯವಾಗಿ ವರ್ತಿಸಿದೆ. ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿರುವುದಲ್ಲದೆ, ವಿದ್ಯಾರ್ಥಿಗಳು ಬಳಸುವ ಕುಡಿಯುವ ನೀರಿನ ಟ್ಯಾಂಕ್‌ಗೆ ಮೂತ್ರ ವಿಸರ್ಜಿಸುವ ಮೂಲಕ ವಿಕೃತಿ ಮೆರೆದಿದ್ದಾರೆ.

- Advertisement -

ಘಟನೆಯ ಹಿನ್ನೆಲೆ: ಚಿತ್ತಾಕುಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಈ ಶಾಲಾ ಮೈದಾನದಲ್ಲಿ ಇತ್ತೀಚೆಗೆ ಮಾಜಿ ಉಪಾಧ್ಯಕ್ಷ ಸೂರಜ್ ದೇಸಾಯಿ ಹಾಗೂ ಮಾಜಿ ಅಧ್ಯಕ್ಷ ನಿತಿನ್ ಬಾಂದೇಕರ್ ನೇತೃತ್ವದಲ್ಲಿ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕ್ರೀಡಾಕೂಟಕ್ಕೆ ಆಗಮಿಸಿದ್ದ ಕೆಲವು ಕಿಡಿಗೇಡಿಗಳು ಶಾಲಾ ಕೊಠಡಿಗಳ ಬಳಿ ನುಗ್ಗಿ ಮದ್ಯ, ಸಿಗರೇಟ್ ಹಾಗೂ ಗುಟ್ಕಾ ಸೇವಿಸಿ ಎಲ್ಲೆಂದರಲ್ಲಿ ಗಲೀಜು ಮಾಡಿದ್ದಾರೆ. ಅಷ್ಟೇ ಅಲ್ಲದೆ, ಅಕ್ಷರ ದಾಸೋಹ ಹಾಗೂ ಕುಡಿಯಲು ಬಳಸುವ ನೀರಿನ ತೊಟ್ಟಿಗೆ ಮೂತ್ರ ವಿಸರ್ಜನೆ ಮಾಡಿರುವುದು ಪೋಷಕರು ಹಾಗೂ ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮರುದಿನ ಶಾಲೆಗೆ ಬಂದ ವಿದ್ಯಾರ್ಥಿಗಳೇ ಈ ಅಶುಚಿಯನ್ನು ಕಂಡು ಸ್ವಚ್ಛಗೊಳಿಸಿದ್ದಾರೆ. ಈ ಕುರಿತು ಗ್ರಾಮ ಪಂಚಾಯ್ತಿಗೆ ದೂರು ನೀಡಲು ಹೋದ ಶಿಕ್ಷಕರು ಹಾಗೂ ಮಕ್ಕಳಿಗೆ ಸ್ಥಳೀಯ ಮಾಜಿ ಪಂಚಾಯ್ತಿ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಶಾಲಾ ಮಂಡಳಿಯ ಅನುಮತಿ ಪಡೆಯದೆಯೇ ಪದೇ ಪದೇ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸಿ, ಶಾಲೆಯ ಶೈಕ್ಷಣಿಕ ವಾತಾವರಣವನ್ನು ಹಾಳುಮಾಡಲಾಗುತ್ತಿದೆ ಎಂದು ಎಸ್‌ಡಿಎಂಸಿ ಸದಸ್ಯರು ದೂರುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | 112 ಸಿಬ್ಬಂದಿಯ ಸಮಯಪ್ರಜ್ಞೆ; ತಪ್ಪಿದ ಭಾರಿ ಅನಾಹುತ

ಗಡಿಭಾಗದಲ್ಲಿ ಕನ್ನಡ ಭಾಷೆಯನ್ನು ಉಳಿಸಿಕೊಂಡು ಬಂದಿರುವ ಏಕೈಕ ಶಾಲೆಯ ಮೇಲೆ ಉದ್ದೇಶಪೂರ್ವಕವಾಗಿ ಈ ತರ ಕೃತ್ಯಗಳು ನಡೆಯುತ್ತಿವಿಯಾ ಎಂದು ಸ್ಥಳೀಯರು ಶಂಕಿಸಿದ್ದಾರೆ. ಸ್ಥಳೀಯ ಕನ್ನಡ ವಿರೋಧಿ ಶಕ್ತಿಗಳು ಈ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುತ್ತಿವೆ ಎಂಬ ಗಂಭೀರ ಮಾತುಗಳು ಕೇಳಿಬರುತ್ತಿವೆ.

ಈ ಘಟನೆಯನ್ನು ಕನ್ನಡ ಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ “ಕನ್ನಡ ಶಾಲೆಯ ಮೇಲೆ ನಡೆಯುತ್ತಿರುವ ಈ ದೌರ್ಜನ್ಯ ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಸಂಘಟನೆಗಳು ಎಚ್ಚರಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...