ಕಾರವಾರ | ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯದ ವೇಳೆ ಎದೆನೋವು; ಕುಸಿದುಬಿದ್ದ ಎಫ್‌ಡಿಎ ಪಂಡರೀನಾಥ ನಾಯ್ಕ ನಿಧನ

Date:

ಕಾರವಾರ: ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದುಬಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಪಂಡರಿನಾಥ್ ವಿ. ನಾಯ್ಕ (51) ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

- Advertisement -

ಮಂಗಳವಾರ ಬೆಳಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದ ಪಂಡರಿನಾಥ್ ನಾಯ್ಕ ಅವರು ಕಚೇರಿ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಸಮಯದಲ್ಲಿ ಕಚೇರಿಯಲ್ಲೇ ಕುಸಿದುಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಂಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಗಣೇಶೋತ್ಸವಕ್ಕೆ ಕಟ್ಟುನಿಟ್ಟಿನ ನಿಯಮ: ಪಿಓಪಿ ಮೂರ್ತಿ, ಡಿಜೆ ಬಳಕೆ ನಿಷೇಧ

ತಕ್ಷಣ ಎಚ್ಚೆತ್ತ ಕಚೇರಿ ಸಿಬ್ಬಂದಿ ಅವರನ್ನು ತಹಶೀಲ್ದಾರ್ ಅವರ ಜೀಪ್ ಮೂಲಕ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ದರು. ಆಸ್ಪತ್ರೆಯಲ್ಲಿ ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿಲ್ಲ. ಬಳಿಕ ವೈದ್ಯರು ಹೃದಯಾಘಾತದಿಂದ ಪಂಡರಿನಾಥ್ ನಾಯ್ಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕಚೇರಿಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಹಠಾತ್ ಮೃತಪಟ್ಟಿರುವ ಸುದ್ದಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳಲ್ಲಿ ದುಃಖ ಮತ್ತು ಆಘಾತಕ್ಕೆ ಕಾರಣವಾಗಿದೆ. ಅವರ ಅಕಾಲಿಕ ನಿಧನಕ್ಕೆ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ...