ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

Date:

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಧಾರವಾಡದಿಂದ ಪ್ರವಾಸಕ್ಕೆ ಬಂದಿದ್ದವರ ನಡುವೆ ಗಲಾಟೆ ನಡೆದಿದ್ದು, ಎರಡೂ ಕಡೆಯವರು ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

- Advertisement -

ಅಕ್ಟೋಬರ್ 2ರಂದು ಸಂಜೆ ಘಟನೆ ನಡೆದಿದೆ. ಭಾರತೀಯ ನೌಕಾಪಡೆಯಲ್ಲಿ ಮುಂಬೈನಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ವ್ಯಕ್ತಿಯೊಬ್ಬರು ರಜೆಯ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದು, ಸಂಜೆ 5 ಗಂಟೆ ಸುಮಾರಿಗೆ ತಮ್ಮ ಪರಿಚಯದ ಸರ್ವೇಶ ಸೀತಾರಾಮ ಚಿಂಚಣಕರ ಅವರೊಂದಿಗೆ ಸ್ಕೂಟರ್‌ನಲ್ಲಿ ನಾಗರಮಡಿ ಫಾಲ್ಸ್‌ಗೆ ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವೇಳೆ ಬೇರೆ ಊರಿನಿಂದ ಬಂದಿದ್ದ ಸುಮಾರು 14–15 ಮಂದಿ ಫಾಲ್ಸ್‌ನ ನೀರಿನಲ್ಲಿ ಬಾಟಲಿಗಳನ್ನು ಎಸೆಯುತ್ತಿದ್ದುದನ್ನು ಗಮನಿಸಿ, ತಾವು ಸ್ಥಳೀಯರು ಎಂದು ಹೇಳಿ ಬಾಟಲಿಗಳನ್ನು ಎಸೆಯದಂತೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಇಬ್ಬರು ವ್ಯಕ್ತಿಗಳು ತಮ್ಮನ್ನು ದೂಡಿದ್ದು, ಬಳಿಕ ಎಲ್ಲರೂ ಸೇರಿಕೊಂಡು ನೆಲಕ್ಕೆ ಬೀಳಿಸಿ ಕೈ ಹಾಗೂ ಕಾಲಿನಿಂದ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಹೊಡೆದಿದ್ದಾರೆ ಎಂದು ಮೊದಲ ದೂರಿನಲ್ಲಿ ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಬಳಿಕ ಸುಮಾರು ಒಂದು ಕಿಲೋಮೀಟರ್ ಕೆಳಭಾಗಕ್ಕೆ ಬಂದಾಗ, ವಿಷಯ ತಿಳಿದು ಅವರ ಅಣ್ಣ ಸ್ಥಳಕ್ಕೆ ಬಂದಿದ್ದಾರೆ. ಸಂಜೆ ಸುಮಾರು 5.30ರ ವೇಳೆಗೆ ಮತ್ತೆ ಸ್ಥಳಕ್ಕೆ ತೆರಳಿದಾಗ, ಆರೋಪಿಗಳ ಪೈಕಿ ಒಬ್ಬರು ಕ್ರಿಕೆಟ್ ಬ್ಯಾಟ್‌ನಿಂದ ತಲೆಯ ಬಲಭಾಗಕ್ಕೆ ಹೊಡೆದಿದ್ದು, ಮತ್ತೊಬ್ಬರು ಕೈಮುಷ್ಠಿಯಿಂದ ಮೂಗಿಗೆ ಹೊಡೆದು ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜಗಳ ಬಿಡಿಸಲು ಬಂದ ಅಣ್ಣನನ್ನು ದೂಡಿ ಅವರ ಟೀ-ಶರ್ಟ್ ಹರಿದು ಹಾಕಲಾಗಿದೆ ಎಂದೂ ಆರೋಪಿಸಲಾಗಿದೆ.

ಇನ್ನೊಂದೆಡೆ, ಧಾರವಾಡದ ಓಲ್ಡ್ ಗ್ರಾಸ್ ಮಾರ್ಕೆಟ್‌ನ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ನೀಡಿರುವ ಪ್ರತಿದೂರಿನಲ್ಲಿ, ಅಂಗಡಿಗೆ ರಜೆ ಇದ್ದ ಕಾರಣ 17 ಮಂದಿ ಅಶೋಕ ಲೇಲ್ಯಾಂಡ್ ವಾಹನದಲ್ಲಿ ಬೆಳಿಗ್ಗೆ 11 ಗಂಟೆಗೆ ಧಾರವಾಡದಿಂದ ಹೊರಟು ಮಧ್ಯಾಹ್ನ ಸುಮಾರು 3.30ಕ್ಕೆ ನಾಗರಮಡಿ ಫಾಲ್ಸ್‌ಗೆ ತೆರಳಿದ್ದಾಗಿ ತಿಳಿಸಿದ್ದಾರೆ.

ಫಾಲ್ಸ್ ಬಳಿ ಊಟ ಮುಗಿಸಿ ಹಿಂದಿರುಗುವ ಸಂದರ್ಭದಲ್ಲಿ ಅಲ್ಲಿದ್ದ ಇಬ್ಬರು ಸ್ಥಳೀಯರು ಬಾಟಲಿಗಳನ್ನು ಎಸೆಯದಂತೆ ಹೇಳಿ ಬೈದರು ಹಾಗೂ ಹೊಡೆಯಲು ಬಂದರು ಎಂದು ಪ್ರತಿದೂರಿನಲ್ಲಿ ಆರೋಪಿಸಲಾಗಿದೆ. ನಂತರ ವಾಹನದ ಬಳಿ ಬಂದಾಗ ಆ ಇಬ್ಬರು ಸ್ಥಳೀಯರೊಂದಿಗೆ ಮತ್ತಿಬ್ಬರು ಸೇರಿಕೊಂಡು ವಾಹನವನ್ನು ಅಡ್ಡಗಟ್ಟಿ, ಬೇರೆ ಊರಿನಿಂದ ಇಲ್ಲಿಗೆ ಯಾಕೆ ಬಂದಿದ್ದೀರಿ ಎಂದು ಅವಾಚ್ಯವಾಗಿ ನಿಂದಿಸಿ, ತಮ್ಮನ್ನು ಹಾಗೂ ಮುಸ್ತಫಾ ಶಿರಕೊಳ ಎಂಬುವವರನ್ನು ಕೈಯಿಂದ ಹೊಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅವರ ಪೈಕಿ ಒಬ್ಬರು ಬೈಕ್‌ನ ಚಾವಿಯಿಂದ ಬೆನ್ನು ಹಾಗೂ ಕೈಗೆ ಗೀರಿಸಿ ಹೊಡೆದಿದ್ದಾರೆ ಎಂದೂ ಆರೋಪಿಸಲಾಗಿದೆ. ಎರಡೂ ದೂರುಗಳಲ್ಲಿ ಪರಸ್ಪರರ ವಿರುದ್ಧ ಹಲ್ಲೆ ನಡೆಸಿದ ಆರೋಪ ಮಾಡಲಾಗಿದ್ದು, ಕೆಲವರ ಹೆಸರು ತಿಳಿದಿದ್ದು, ಉಳಿದವರನ್ನು ನೋಡಿದರೆ ಗುರುತಿಸುವುದಾಗಿ ದೂರುದಾರರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯ ದೂರುಗಳ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...