ಕಾರವಾರ | ಕಡವಾಡದಲ್ಲಿ ನಿರಂತರ ವಿದ್ಯುತ್ ಕಡಿತ – ಹೆಸ್ಕಾಂ ವಿರುದ್ಧ ಗ್ರಾಮಸ್ಥರ ಆಕ್ರೋಶ

Date:

ಕಾರವಾರ: ತಾಲ್ಲೂಕಿನ ಕಡವಾಡ ಗ್ರಾಮದಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವಂತೆ ಗ್ರಾಮಸ್ಥರು ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

- Advertisement -

ಹಗಲು-ರಾತ್ರಿ ಎನ್ನದೆ ವಿದ್ಯುತ್ ಕಡಿತವಾಗುತ್ತಿರುವುದರಿಂದ ಮನೆಗಳು ಹಾಗೂ ವ್ಯಾಪಾರಸ್ಥರು ಸಮಸ್ಯೆ ಎದುರಿಸುವಂತಾಗಿದೆ. ಗೌರಿ-ಗಣೇಶ ಹಬ್ಬದ ದಿನಗಳಲ್ಲಿಯೂ ವಿದ್ಯುತ್ ವ್ಯತ್ಯಯ ಮುಂದುವರಿದಿದ್ದು, ಫ್ರೀಜ್‌ಗಳಲ್ಲಿ ಇಡಲಾಗಿದ್ದ ಹಾಲು, ತರಕಾರಿ ಸೇರಿದಂತೆ ಹಲವು ವಸ್ತುಗಳು ಹಾಳಾಗುತ್ತಿವೆ ಎಂದು ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ ಗುನಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಹಿಂದೂ ಕೋಡ್ ಬಿಲ್ ಹೋರಾಟಕ್ಕೆ 75 ವರ್ಷ: ಸಮಾನತೆಯ...

ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಹಿಂದೂ ಕೋಡ್ ಬಿಲ್ ಕೇವಲ ಮಹಿಳಾ ಹಕ್ಕುಗಳ ಮಸೂದೆಯಾಗಿರಲಿಲ್ಲ; ಅದು ಶತಮಾನಗಳಿಂದ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಬಲ ಅಸ್ತ್ರವೂ ಆಗಿತ್ತು. ಜಾತಿ ವ್ಯವಸ್ಥೆಯು ಜೀವಂತವಾಗಿರುವುದೇ 'ಸಜಾತೀಯ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್...

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ ಅದು ಕೋಟ್ಯಂತರ ಜನರ ಬದುಕು. ಆ ಬದುಕಿನ ಮೇಲೆ ಯಾವುದೇ ಹೆಚ್ಚುವರಿ ಹೊರೆ ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ನಿಜವಾದ ಜವಾಬ್ದಾರಿ. ಒಂದು...

ಈ ಸುದ್ದಿ ಓದಿದ್ದೀರಾ? ಕುಮಟಾ | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು: ಮತ್ತೊಬ್ಬರಿಗೆ ಗಾಯ

ಕಡವಾಡದ ಭೋವಿವಾಡ, ಗೌಡಕೇರಿ, ಶಾಂಬಾವಾಡಾ, ಹಳೇಕೋಟ, ಕುಂಬಾರವಾಡಾ ಹಾಗೂ ಗುನಗಿವಾಡಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ತಂತಿಗಳು ಕೆಳಮಟ್ಟಕ್ಕೆ ಇಳಿದಿವೆ. ರಸ್ತೆ ಬದಿ ಹಾಗೂ ಶಾಲೆಯ ಸಮೀಪವೂ ತಂತಿಗಳು ಅಪಾಯಕಾರಿ ರೀತಿಯಲ್ಲಿ ವಾಲಿಕೊಂಡಿದ್ದು, ಅವುಗಳನ್ನು ಕೂಡಲೇ ಸರಿಪಡಿಸಿ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕಿಶೋರ ಕಡವಾಡಕರ ಒತ್ತಾಯಿಸಿದರು.

ಗ್ರಾಮದಲ್ಲಿರುವ ವಿವಿಧ ವಿದ್ಯುತ್ ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆನಂದು ಆರ್. ನಾಯ್ಕ ಅವರು ಹೆಸ್ಕಾಂ ಅಧಿಕಾರಿಗಳ ಗಮನ ಸೆಳೆದು, ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹುತಾತ್ಮ ವೀರಯೋಧ ವಿನೋದ ನಾಯ್ಕ ಅವರ ತಂದೆ ಮಹಾದೇವ ಡಿ. ನಾಯ್ಕ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ ಗುನಗಿ, ಗ್ರಾಮ ಪಂಚಾಯಿತಿ ಸದಸ್ಯ ಕಿಶೋರ ಕಡವಾಡಕರ, ಮಾಜಿ ಅಧ್ಯಕ್ಷ ಆನಂದು ಆರ್. ನಾಯ್ಕ ಹಾಗೂ ಪ್ರದೀಪ ಕಡವಾಡಕರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಪೊಲೀಸ್ ಸೂಚನೆ ಸುತ್ತ ವಿವಾದ: ಶಾಂತಿ ಕಾಪಾಡುವ ಕರ್ತವ್ಯಕ್ಕೆ ರಾಜಕೀಯ ಬಣ್ಣ ಬೇಡವೆಂದ ಸ್ಥಳೀಯರು

ಗೌರಿ-ಗಣೇಶ ಹಬ್ಬದ ಅಂಗವಾಗಿ ನಡೆಯುವ ಮೆರವಣಿಗೆ ಹಾಗೂ ಶೋಭಾಯಾತ್ರೆಗಳ ಸಂದರ್ಭದಲ್ಲಿ ಕಾನೂನು...

ಬೆಂಗಳೂರು | ʼನಿನ್ನನ್ನು ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ: ಮಹಿಳೆಗೆ ಕಿರುಕುಳ, ಎಫ್‌ಐಆರ್

ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು: ರೈತರ ಸಮಸ್ಯೆಗಳಿಗೆ ಧ್ವನಿ ಯಾರು?

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ...

ತೆರಿಗೆ ವಂಚನೆ ಪ್ರಕರಣ ಮುಚ್ಚಿಹಾಕಲು ಲಂಚ: ಜಿಎಸ್‌ಟಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಕೋರಮಂಗಲದಲ್ಲಿ ಕೇಂದ್ರ ಜಿಎಸ್‌ಟಿ ಇಲಾಖೆಯ ಸೂಪರಿಂಟೆಂಡೆಂಟ್ ಮತ್ತು...