ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

Date:

ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಹಲವು ಅನುಮಾನಗಳು ಮೂಡಿವೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೊಲಗಿಸಿ, ಚುನಾವಣಾ ಆಯೋಗದಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ (KPRS) ಉತ್ತರ ಕನ್ನಡ ಜಿಲ್ಲಾ ಸಮಿತಿ ಆಗ್ರಹಿಸಿದೆ.

- Advertisement -

ಈ ಕುರಿತು ಜಿಲ್ಲಾ ಸಮಿತಿ ಅಧ್ಯಕ್ಷ ಶಾಂತಾರಾಮ ನಾಯಕ ಅವರು ಶನಿವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಇತ್ತೀಚೆಗೆ ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿರುವ ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳ ವಿಚಾರವು ಆಯೋಗದ ಸಾಂಸ್ಥಿಕ ಸಮಗ್ರತೆ ಹಾಗೂ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆ ಅವರೊಂದಿಗಿದ್ದಾರೆ- ಹಳೆಯ...

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ ಷಡ್ಯಂತ್ರ ಮಾಡಿದ್ದಾರೆ ಎಂಬುದು ಗೊತ್ತಿದೆ. ಅವರಿಗೆ ಸರಿಯಾದ ಪಾಠ ಕಲಿಸುತ್ತೇವೆ"...

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

SIR ಪ್ರಕ್ರಿಯೆ ಆರಂಭವಾದಾಗಿನಿಂದ ಎಡಪಕ್ಷಗಳು, ಇತರೆ ವಿರೋಧ ಪಕ್ಷಗಳು ಹಾಗೂ ನಾಗರಿಕ ಸಮಾಜ ಸಂಸ್ಥೆಗಳು ವ್ಯಕ್ತಪಡಿಸುತ್ತಿರುವ ಅನುಮಾನಗಳು ಮತ್ತು ಕಳವಳಗಳಿಗೆ ಈ ಬೆಳವಣಿಗೆಗಳು ಮತ್ತಷ್ಟು ಬಲ ನೀಡಿವೆ ಎಂದು ಅವರು ಹೇಳಿದ್ದಾರೆ. ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ SIR ಪ್ರಕ್ರಿಯೆಗೆ ಸಂಬಂಧಿಸಿದ ಹಲವು ನಿರ್ಧಾರಗಳ ಕುರಿತು ಆಕ್ಷೇಪಣೆಗಳನ್ನು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ ? ಸಿದ್ದಾಪುರ | ಜನರ ಸಮಸ್ಯೆಗಳಿಗೆ ಸ್ಪಂದಿಸಲು ‘ಅನಂತ ಜನ ಸ್ಪಂದನ ಕೇಂದ್ರ’ ಆರಂಭ

ಚುನಾವಣಾ ಆಯುಕ್ತರು ಸಮಾನ ಸ್ಥಾನಮಾನ ಹೊಂದಿರುವ ಹಿನ್ನೆಲೆಯಲ್ಲಿ ಇಂತಹ ಭಿನ್ನಾಭಿಪ್ರಾಯಗಳನ್ನು ನಿಯಮಾನುಸಾರ ಬಹುಮತ ಅಥವಾ ಸರ್ವಾನುಮತದ ಮೂಲಕ ಇತ್ಯರ್ಥಪಡಿಸಬೇಕಾಗುತ್ತದೆ. ಆದರೆ, ಇತರ ಆಯುಕ್ತರು ವ್ಯಕ್ತಪಡಿಸಿರುವ ಆಕ್ಷೇಪಣೆಗಳನ್ನು ಕಡೆಗಣಿಸಿ ಮುಖ್ಯ ಚುನಾವಣಾ ಆಯುಕ್ತರು ತಮ್ಮ ಅಭಿಪ್ರಾಯವನ್ನು ಮುಂದುವರಿಸಿದ್ದಾರೆ ಎಂಬುದು ಖಂಡನೀಯ ಎಂದು ಶಾಂತಾರಾಮ ನಾಯಕ ತಿಳಿಸಿದ್ದಾರೆ.

ಮತದಾರರ ಪಟ್ಟಿಗೆ ಮತದಾರರನ್ನು ಸೇರ್ಪಡೆಗೊಳಿಸುವುದು ಅಥವಾ ತೆಗೆದುಹಾಕುವುದು ಹಾಗೂ SIR ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ವಿಧಾನಕ್ಕೆ ಸಂಬಂಧಿಸಿದ ಪ್ರಶ್ನೆಗಳಾಗಿರುವುದರಿಂದ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಅವರು ಹೇಳಿದ್ದಾರೆ.

ಚುನಾವಣಾ ಪ್ರಕ್ರಿಯೆ ಪಾರದರ್ಶಕ ಮತ್ತು ವಿಕೇಂದ್ರೀಕೃತವಾಗಿದೆ ಎಂದು ಚುನಾವಣಾ ಆಯೋಗ ಹೇಳುತ್ತಿದ್ದರೂ, ವಾಸ್ತವದಲ್ಲಿ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆ ಹೆಚ್ಚು ಕೇಂದ್ರೀಕೃತವಾಗಿರುವ ಕುರಿತು ಪ್ರಶ್ನೆಗಳು ಉದ್ಭವಿಸಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ತಂತ್ರಜ್ಞಾನದ ಮೇಲಿನ ಅತಿಯಾದ ಅವಲಂಬನೆ ಹಾಗೂ ‘ಯಾಂತ್ರಿಕ’ ರೀತಿಯಲ್ಲಿ ನೋಟಿಸ್ ಜಾರಿ ಮಾಡಿರುವ ಕುರಿತು ಸುಪ್ರೀಂ ಕೋರ್ಟ್ ಗಮನಿಸಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ.

ಚುನಾವಣಾ ಆಯೋಗದ ಸಾಂಸ್ಥಿಕ ಸಮಗ್ರತೆ, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ, ಅತಿಯಾದ ಕೇಂದ್ರೀಕರಣ ಹಾಗೂ ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕಿನ ರಕ್ಷಣೆಯಂತಹ ಪ್ರಮುಖ ವಿಚಾರಗಳ ಕುರಿತು ಸ್ಪಷ್ಟತೆ ಅಗತ್ಯವಿದೆ ಎಂದು ಶಾಂತಾರಾಮ ನಾಯಕ ಹೇಳಿದ್ದಾರೆ. ಚುನಾವಣಾ ಆಯೋಗದ ಮೇಲಿನ ಜನರ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಲ್ಲಿ ಮುಂದುವರಿಸಬಾರದು ಹಾಗೂ SIR ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು KPRS ಆಗ್ರಹಿಸಿದೆ.

ಅಲ್ಲದೆ, ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಪ್ರಧಾನಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಒಳಗೊಂಡ ಆಯ್ಕೆ ಸಮಿತಿ ರಚಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ಅಗತ್ಯ ಕಾನೂನು ರೂಪಿಸಿ ಚುನಾವಣಾ ಆಯೋಗದ ಸ್ವಾಯತ್ತತೆ ಹಾಗೂ ವಿಶ್ವಾಸಾರ್ಹತೆಯನ್ನು ಬಲಪಡಿಸಬೇಕು ಎಂದು ಶಾಂತಾರಾಮ ನಾಯಕ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪರವಾನಗಿ ಇಲ್ಲದೇ ಮದ್ಯ ಮಾರಾಟ; ಆರೋಪಿತನ ವಿರುದ್ಧ ಪ್ರಕರಣ ದಾಖಲು

ನಗರದ ಹೀರಾಪುರ ಬಡಾವಣೆಯಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ...

ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಲೆಮಾರಿ ಜಾಗೃತ ಸಂಘ ಒತ್ತಾಯ

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಸಮೀಪ...

ಹಾಸನ | ಸಹಕಾರ ಸಂಘದ ಏಳಿಗೆಗೆ ಎಲ್ಲರೂ ಕೈಜೋಡಿಸಿ: ಜಗದೀಶ್

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ, ರೈತರ ಅಭಿವದ್ಧಿ ಸಾಧ್ಯ...

ರಾಯಚೂರು | ಸಿಡಿಲು ಬಡಿದು ಆಡುಗಳ ಸಾವಿಗೆ ಶಾಸಕರಿಂದ ₹40 ಸಾವಿರ ನೆರವು

ಮಸ್ಕಿ ಪಟ್ಟಣದ ಸಮೀಪ 2 ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ...