ಕಾರವಾರ | ಪೆಂಡಾಲ್ ಬಿಚ್ಚುವಾಗ ವಿದ್ಯುತ್ ಅವಘಡ; ಕಾರ್ಮಿಕನ ದುರ್ಮರಣ

Date:

ಕಾರವಾರ: ನಗರದ ಕೆಎಚ್‌ಬಿ ಬಡಾವಣೆಯಲ್ಲಿ ಪೆಂಡಾಲ್ ತೆರವುಗೊಳಿಸುವ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮೃತರನ್ನು ಕಾರವಾರದ ಪದ್ಮನಾಭ ನಗರದ ನಿವಾಸಿ ಭರತ್ ಗೌಡ (30) ಎಂದು ಗುರುತಿಸಲಾಗಿದೆ.

- Advertisement -

ಮಾಹಿತಿಯ ಪ್ರಕಾರ, ಕೆಎಚ್‌ಬಿ ಬಡಾವಣೆಯ ನಿವಾಸವೊಂದರಲ್ಲಿ ನಡೆದ ಕಾರ್ಯಕ್ರಮಕ್ಕಾಗಿ ಅಳವಡಿಸಲಾಗಿದ್ದ ಪೆಂಡಾಲ್ ಹಾಗೂ ಮೇಲ್ಛಾವಣಿಯ ತಗಡಿನ ಶೀಟುಗಳನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ಭರತ್ ಗೌಡ ಅವರು ತಗಡಿನ ಶೀಟುಗಳನ್ನು ಕೆಳಗಿಳಿಸುವ ಕಾರ್ಯದಲ್ಲಿ ನಿರತರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜೇನುನೊಣ ದಾಳಿಗಿಂತ ಭಯಾನಕ ಅವ್ಯವಸ್ಥೆ: ಮೊರಾರ್ಜಿ ವಸತಿ ಶಾಲೆ ವಿರುದ್ಧ ಗಂಭೀರ ಆರೋಪ

ಅದೇ ಸಂದರ್ಭದಲ್ಲಿ ತಗಡಿನ ಶೀಟು ಸಮೀಪದಲ್ಲಿದ್ದ ವಿದ್ಯುತ್ ತಂತಿಗೆ ಸ್ಪರ್ಶಗೊಂಡ ಪರಿಣಾಮ ವಿದ್ಯುತ್ ಪ್ರವಹಿಸಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಭರತ್ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...