ಕಾರವಾರ | ಬೈತಕೂಲ ಬಂದರಿನಲ್ಲಿ ನೀರಿಗೆ ಬಿದ್ದು ಒಡಿಶಾ ಮೂಲದ ಮೀನುಗಾರ ಸಾವು

Date:

ಮೀನುಗಳನ್ನು ಖಾಲಿ ಮಾಡಿ ಬೋಟಿಗೆ ಐಸ್ ತುಂಬುತ್ತಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದ ಒಡಿಶಾ ಮೂಲದ ಮೀನುಗಾರನೊಬ್ಬ ಮೃತಪಟ್ಟ ಘಟನೆ ಕಾರವಾರದ ಬೈತಕೂಲ ಬಂದರಿನಲ್ಲಿ ನಡೆದಿದೆ. ಸಂತೋಷ (ತಂದೆ ಬಿರು ಟಂಟಿ) ಮೃತಪಟ್ಟ ಮೀನುಗಾರ.

- Advertisement -

ಈತ ತನ್ನ ಸಂಬಂಧಿಕರೊಂದಿಗೆ ಕಳೆದ ಸೆಪ್ಟೆಂಬರ್‌ನಲ್ಲಿ ಮೀನುಗಾರಿಕೆ ಕೆಲಸಕ್ಕಾಗಿ ಒಡಿಶಾದಿಂದ ಕಾರವಾರದ ತದಡಿಗೆ ಬಂದಿದ್ದ. ಹೊಸ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಅವರು, ಅ.26ರಂದು ಬೆಳಗಿನ ಜಾವ ಸುಮಾರು 2 ಗಂಟೆಗೆ ಮೀನುಗಳನ್ನು ಖಾಲಿ ಮಾಡಲು ಬೈತಕೂಲ ಬಂದರಿಗೆ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಈ ಸುದ್ದಿ ಓದಿದ್ದೀರಾ? ಕುಮಟಾ | ಅಂತ್ರವಳ್ಳಿಯಲ್ಲಿ ಸಿಡಿಲು ಬಡಿದು 7 ಜಾನುವಾರು ಸಾವು

ಮೀನುಗಳನ್ನು ಖಾಲಿ ಮಾಡಿದ ಬಳಿಕ ಬೋಟಿಗೆ ಐಸ್ ತುಂಬುತ್ತಿದ್ದಾಗ ಸಂತೋಷ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ತಕ್ಷಣ ಆತನನ್ನು ರಕ್ಷಿಸಲು ಧಕ್ಕೆಯಲ್ಲಿದ್ದವರು ನೀರಿಗೆ ಹಾರಿದರೂ, ಆತ ನೀರಿನಿಂದ ಮೇಲೆ ಬರದೆ ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಂತರ ಮಧ್ಯಾಹ್ನ ಸುಮಾರು 2 ಗಂಟೆಗೆ ಬಂದರಿನಲ್ಲಿ ಮೃತದೇಹ ಪತ್ತೆಯಾಗಿದ್ದು, ದೂರುದಾರರು ಗುರುತಿಸಿದ್ದಾರೆ. ಸಂತೋಷ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದು, ಆತನ ಸಾವಿನಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಂಬಂಧಿಕರು ದೂರಿನಲ್ಲಿ ತಿಳಿಸಿದ್ದಾರೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಈ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾನೂನುಬಾಹಿರವಾಗಿ ವಾಹನ ತಡೆದರೆ 10 ವರ್ಷ ಜೈಲು ಶಿಕ್ಷೆ: ಪೊಲೀಸ್ ಆಯುಕ್ತ ಎಚ್ಚರಿಕೆ

ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟವನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ...

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...