ಕಾರವಾರ | ಅಂಜದೀವ್ ದ್ವೀಪದ ಬಳಿ ಮೀನುಗಾರಿಕಾ ಬೋಟ್‌ ಮುಳುಗಡೆ: 25 ಮೀನುಗಾರರು ಪಾರು; ₹70 ಲಕ್ಷ ನಷ್ಟ

Date:

ಕಾರವಾರ: ಅರಬ್ಬೀ ಸಮುದ್ರದ ಅಂಜದೀವ್ ದ್ವೀಪದ ಸಮೀಪ ಭಾನುವಾರ ಮುಂಜಾನೆ ಮೀನುಗಾರಿಕಾ ಬೋಟ್‌ವೊಂದು ಸಮುದ್ರದಲ್ಲಿ ಮುಳುಗಡೆಯಾದ ಘಟನೆ ನಡೆದಿದೆ. ಬೋಟ್‌ನಲ್ಲಿದ್ದ 25 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರ ಬೋಟ್‌ಗಳ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ರಕ್ಷಿಸಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

- Advertisement -

ಬೆಳಂಬಾರ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಹೆಸರಿನ ಬೋಟ್‌ ಮೀನುಗಾರಿಕೆಯಲ್ಲಿ ತೊಡಗಿದ್ದ ವೇಳೆ ಏಕಾಏಕಿ ನೀರು ತುಂಬಿಕೊಂಡು ಮುಳುಗುವ ಸ್ಥಿತಿ ಎದುರಾಗಿದೆ. ಪರಿಸ್ಥಿತಿಯನ್ನು ಅರಿತ ಮೀನುಗಾರರು ತಕ್ಷಣ ನೆರವಿಗಾಗಿ ಕೂಗಿದ್ದು, ಸಮೀಪದಲ್ಲಿದ್ದ ಐದು ಮೀನುಗಾರಿಕಾ ಬೋಟ್‌ಗಳ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು; ಪತ್ನಿ ಹತ್ಯೆ ಆರೋಪದಲ್ಲಿ ಪತಿ ಬಂಧನ

ತ್ವರಿತ ಕಾರ್ಯಾಚರಣೆ ನಡೆಸಿ ಬೋಟ್‌ನಲ್ಲಿದ್ದ ಎಲ್ಲಾ 25 ಮಂದಿಯನ್ನು ಸುರಕ್ಷಿತವಾಗಿ ಬೇರೆ ಬೋಟ್‌ಗಳಿಗೆ ಸ್ಥಳಾಂತರಿಸಲಾಗಿದೆ. ಬಳಿಕ ಮುಳುಗುತ್ತಿದ್ದ ‘ಶ್ರೀ ಮಾತಾ’ ಬೋಟ್‌ನ್ನು ಹಗ್ಗದ ನೆರವಿನಿಂದ ಮೇಲಕ್ಕೆ ಎಳೆದು ರಕ್ಷಿಸುವ ಪ್ರಯತ್ನವೂ ನಡೆಸಲಾಯಿತು. ಆದರೆ ಬೋಟ್‌ಗೆ ಹಾಗೂ ಅದರಲ್ಲಿದ್ದ ಮೀನುಗಾರಿಕಾ ಉಪಕರಣಗಳಿಗೆ ಭಾರೀ ಹಾನಿಯಾಗಿದ್ದು, ಸುಮಾರು ₹70 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ ಬೋಟ್‌ ಮುಳುಗಲು ನಿಖರವಾಗಿ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ನೀಲಕಂಠ ಖಾರ್ವಿ ಅವರ ಕುಟುಂಬಕ್ಕೆ ಈ ಘಟನೆ ಮತ್ತೊಂದು ದೊಡ್ಡ ಆರ್ಥಿಕ ಹೊಡೆತವಾಗಿದೆ. ಈ ಹಿಂದೆ ಅವರ ಎರಡು ಬೋಟ್‌ಗಳು ಕೂಡ ವಿವಿಧ ಅವಘಡಗಳಿಂದ ಹಾನಿಗೊಳಗಾಗಿದ್ದವು ಎನ್ನಲಾಗಿದೆ. ಆರ್ಥಿಕ ಸಂಕಷ್ಟದಿಂದ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಬೋಟ್‌ ನಷ್ಟವಾಗಿರುವುದು ಕುಟುಂಬಕ್ಕೆ ತೀವ್ರ ತೊಂದರೆ ಉಂಟುಮಾಡಿದೆ.

ಸಮುದ್ರದಲ್ಲಿ ಪದೇಪದೇ ಸಂಭವಿಸುತ್ತಿರುವ ಇಂತಹ ಅವಘಡಗಳಿಂದ ಮೀನುಗಾರರು ಹಾಗೂ ಅವರ ಕುಟುಂಬಗಳು ಭಾರೀ ಆರ್ಥಿಕ ನಷ್ಟ ಎದುರಿಸುತ್ತಿವೆ. ಪ್ರಕೃತಿ ವಿಕೋಪ ಸೇರಿದಂತೆ ವಿವಿಧ ಕಾರಣಗಳಿಂದ ಬೋಟ್‌ಗಳಿಗೆ ಹಾನಿಯಾದ ಸಂದರ್ಭಗಳಲ್ಲಿ ಮೀನುಗಾರರಿಗೆ ಸರ್ಕಾರದಿಂದ ಸೂಕ್ತ ನೆರವು ಮತ್ತು ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯ ಮೀನುಗಾರರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...