ಕಾರವಾರ | ಸರ್ಕಾರಿ ಪಿಯು ಕಾಲೇಜಿನಲ್ಲಿ ಸಿಇಟಿ, ನೀಟ್, ಜೆಇಇಗೆ ಉಚಿತ ತರಬೇತಿ

Date:

ಕಾರವಾರ: ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅನುಕೂಲವಾಗುವಂತೆ ಸರ್ಕಾರವು ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ. ಸೈಲ್ ಹೇಳಿದರು.

- Advertisement -

ಕಾರವಾರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪ್ರಥಮ ಬಾರಿಗೆ ಆರಂಭಿಸಲಾದ ಆಫ್‌ಲೈನ್ ಇಂಟಿಗ್ರೇಟೆಡ್ ಸಿಇಟಿ ಕೋಚಿಂಗ್ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಕಾರವಾರದ ಸರ್ಕಾರಿ ಪದವಿಪೂರ್ವ ಕಾಲೇಜು ರಾಜ್ಯದಲ್ಲಿಯೇ ಮಾದರಿ ಕಾಲೇಜಾಗಿ ಗುರುತಿಸಿಕೊಂಡಿದ್ದು, ಇಲ್ಲಿ 1,258 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಕಾಲೇಜನ್ನು ಸಿಇಟಿ ತರಬೇತಿ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಅತಿಕ್ರಮಣ ಮನೆ ನಂಬರ್ ರದ್ದು ಆದೇಶ ಹಿಂಪಡೆಯಲು ಮನವಿ: ಸಚಿವ ಖಂಡ್ರೆ ಭೇಟಿ ಮಾಡಿದ ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ್

ಕಾಲೇಜಿನ ಉಪನ್ಯಾಸಕರು ಉತ್ತಮ ಬೋಧನೆಯ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದರು. ಅತಿಥಿ ಉಪನ್ಯಾಸಕರ ವೇತನ ಹೆಚ್ಚಳದ ಕುರಿತು ಮುಖ್ಯಮಂತ್ರಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಚಿವರ ಗಮನಕ್ಕೆ ತಂದು ವೇತನ ಹೆಚ್ಚಳಕ್ಕೆ ಪ್ರಯತ್ನಿಸಲಾಗುವುದು ಎಂದು ಸೈಲ್ ತಿಳಿಸಿದರು.

ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ ಹಾಗೂ ಚಾಟ್‌ಜಿಪಿಟಿಯನ್ನು ದುರ್ಬಳಕೆ ಮಾಡಿಕೊಳ್ಳದೆ, ಸ್ವಂತ ಜ್ಞಾನ ಮತ್ತು ಚಿಂತನಾ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಪಿಯುಸಿ ಶಿಕ್ಷಣವು ಮುಂದಿನ ಉನ್ನತ ಶಿಕ್ಷಣಕ್ಕೆ ಬುನಾದಿಯಾಗಿರುವುದರಿಂದ ಪಾಲಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವುದಷ್ಟೇ ಮುಖ್ಯವಲ್ಲ. ಸಂವಹನ ಕಲೆ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳನ್ನು ಬೆಳೆಸಿಕೊಳ್ಳಬೇಕು. ವೇದಿಕೆ ಭಯ ಹೋಗಲಾಡಿಸಲು ಸಂಗೀತ, ಸಾಹಿತ್ಯ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ರಮೇಶ್ ಎಸ್. ಪತ್ರೇಕರ್ ಮಾತನಾಡಿ, ಸರ್ಕಾರ ಜಾರಿಗೊಳಿಸಿದ್ದ ಆನ್‌ಲೈನ್ ತರಬೇತಿಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ, ಇದೀಗ ಆಯಾ ಕಾಲೇಜುಗಳಲ್ಲಿಯೇ ಉಪನ್ಯಾಸಕರ ಮೂಲಕ ಸಿಇಟಿ, ನೀಟ್ ಹಾಗೂ ಜೆಇಇ ತರಬೇತಿ ನೀಡುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಪ್ರಥಮ ಪಿಯುಸಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಕಲ್ಪನೆ ಹಾಗೂ ಸೂಕ್ತ ಮಾರ್ಗದರ್ಶನ ದೊರೆಯುವುದರಿಂದ ಇದು ಅವರ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದರು.

ಪ್ರತಿ ಅಧ್ಯಾಯ ಪೂರ್ಣಗೊಂಡ ಬಳಿಕ ಯುನಿಟ್ ಪರೀಕ್ಷೆ ನಡೆಸಿ, ವಿದ್ಯಾರ್ಥಿಗಳ ಪ್ರಗತಿ ವರದಿಯನ್ನು ಪೋಷಕರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಉಪನ್ಯಾಸಕರ ಜತೆಗೆ ಪೋಷಕರೂ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜಿ.ಪಿ. ನಾಯ್ಕ, ಹಿರಿಯ ಉಪನ್ಯಾಸಕರಾದ ಸತೀಶ ಜಿ. ಬಿಳ್ಕೋಡಿ, ವಿದ್ಯಾ ಕೌರೆ, ಉಪನ್ಯಾಸಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿಮೆಂಟ್ ಕಂಪನಿಯಲ್ಲಿ ಡೀಸೆಲ್ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಚಿಂಚೋಳಿ ತಾಲೂಕಿನ ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮೆಂಟ್ ಕಂಪನಿಯ ಆವರಣದಲ್ಲಿ...

ಕಾನೂನುಬಾಹಿರವಾಗಿ ವಾಹನ ತಡೆದರೆ 10 ವರ್ಷ ಜೈಲು ಶಿಕ್ಷೆ: ಪೊಲೀಸ್ ಆಯುಕ್ತ ಎಚ್ಚರಿಕೆ

ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟವನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ...

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...