ಕಾರವಾರ | ಭಾರತೀಯ ಸೇನೆ ಸೇರಲು ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ

Date:

ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್‌ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಕಾರವಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

- Advertisement -

ಕಾರವಾರ ತಾಲೂಕಿನ ಮಾಜಾಳಿ ವೀರ ಬಹದ್ದೂರ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ಮಾತ್ರ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಅಕ್ಟೋಬರ್ 3ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ- ಪ್ರವರ್ಗ-1ಕ್ಕೆ ₹2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ಗಳಿಗೆ ₹1 ಲಕ್ಷಗಳ ಒಳಗಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲೂ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45ರಷ್ಟು ಅಂಕಗಳನ್ನು ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು 10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ 2025ರ ಅಕ್ಟೋಬರ್ 3ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯೋಮಿತಿಯನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 2005ರ ಅಕ್ಟೋಬರ್ 3ರಿಂದ 2008ರ ಅಕ್ಟೋಬರ್‌ 3ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. 

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ʼಕೊಂದವರು ಯಾರು?ʼ ಆಂದೋಲನದಿಂದ ಸೋನಿಯಾ ಗಾಂಧಿಗೆ ಪತ್ರ

ಅರ್ಜಿ ನಮೂನೆಯನ್ನು ಜಿಲ್ಲೆ ಅಥವಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226588ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...