ಕಾರವಾರ | ಬಳಕೆಯಾಗದೆ ಪಾಳುಬೀಳುತ್ತಿದೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯ

Date:

ಕಾರವಾರ ತಾಲೂಕಿನ ಶೇಜವಾಡದಲ್ಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣವಾಗಿ ವರ್ಷಗಳು ಉರುಳುತ್ತಿದ್ದರೂ ಈವರೆಗೆ ಕಟ್ಟಡವನ್ನು ಬಳಕೆಗೆ ನೀಡದೆ ಪಾಳುಬಿಳುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

- Advertisement -

ಸುಮಾರು 2 ಕೋಟಿ ವೆಚ್ಚದಲ್ಲಿ 2018ರಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ನಗರದ ಬಾಡಿಗೆ ಕಟ್ಟಡವೊಂದರಲ್ಲಿ ಬಾಲಕರ ನಿಲಯ ನಡೆಸುತ್ತಿದ್ದು ವಾರ್ಷಿಕವಾಗಿ ಲಕ್ಷಾಂತರ ರೂ. ಬಾಡಿಗೆಯನ್ನು ಕಟ್ಟಲಾಗುತ್ತಿದೆ. ಕೋಟ್ಯಂತರ ವೆಚ್ಚದಲ್ಲಿ ಕಟ್ಟಡ ನಿರ್ಮಿಸಿದರೂ ಈ ಸೌಲಭ್ಯ ಉಪಯೋಗಕ್ಕೆ ಇಲ್ಲದಂತಾಗಿದೆ. ಬಳಕೆಯಾಗದೆ, ಕಟ್ಟಡದ ಆವರಣದಲ್ಲಿ ಆಳೆತ್ತರದವರೆಗೆ ಗಿಡಗಂಟಿಗಳು ಬೆಳೆದು ನಿಂತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಿರವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಜವಾಡದಲ್ಲಿನ ಗಜನಿ ಭೂಮಿಯಲ್ಲಿ ಕಟ್ಟಡ ನಿರ್ಮಿಸಿರುವುದಕ್ಕೆ ಆರಂಭದಿಂದಲೂ ಆಕ್ಷೇಪ ವ್ಯಕ್ತವಾಗಿತ್ತು. ಮಳೆಗಾಲದಲ್ಲಿ ಈ ಪ್ರದೇಶ ಜಲಾವೃತಗೊಳ್ಳುವ ಸಮಸ್ಯೆ ಎದುರಿಸುತ್ತಿದೆ. ಅಲ್ಲದೆ ಜನವಸತಿಯಿಂದ ದೂರವಿರುವ ಜಾಗದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಿರುವುದಕ್ಕೂ ಜನರ ವಿರೋಧವಿದೆ.

ಕಟ್ಟಡ ಪೂರ್ಣಗೊಂಡರೂ ವಿದ್ಯುತ್ ಸಂಪರ್ಕ, ರಸ್ತೆ ಸೌಕರ್ಯ ಇರಲಿಲ್ಲ. ಇತ್ತೀಚೆಗೆ ವಿದ್ಯುತ್ ಸಂಪರ್ಕ, ಕಟ್ಟಡದ ದುರಸ್ತಿಗೆ ಕೆಆರ್ಐಡಿಎಲ್‌‍ಗೆ ಕಾರ್ಯಾದೇಶ ನೀಡಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಎಫ್.ಯು.ಪೂಜಾರ ಮಾದ್ಯಮಗಳಿಗೆ ಉತ್ತರಿಸಿದ್ದು, ಮುಖ್ಯ ರಸ್ತೆಯಿಂದ ವಿದ್ಯಾರ್ಥಿ ನಿಲಯಕ್ಕೆ ರಸ್ತೆ ನಿರ್ಮಿಸಲು 47ಲಕ್ಷ ರೂ. ಪ್ರಸ್ತಾವ ಸಲ್ಲಿಸಲಾಗಿದೆ ಎಂದಿದ್ದಾರೆ.

ಕೋಟ್ಯಂತರ ರೂ. ಅನುದಾನ ಬಳಸಿ ಯೋಜನೆ ರೂಪಿಸುವ ಮೊದಲು ಮೂಲಸೌಕರ್ಯಗಳ ಬಗ್ಗೆ ಗಮನಹರಿಸಿಲ್ಲ. ರಸ್ತೆಯೇ ಇಲ್ಲದ ಜಾಗದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ನಿರ್ಜನವಾಗಿರುವ ಮತ್ತು ಗಜನಿ ಭೂಮಿಯಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಿರುವುದು ಸರಿಯಲ್ಲ. ಕಟ್ಟಡ ನಿರ್ಮಿಸಿ ನಾಲ್ಕು ವರ್ಷ ಕಳೆದರೂ ಅಗತ್ಯ ವ್ಯವಸ್ಥೆ ಕಲ್ಪಿಸದೇ ಖಾಸಗಿ ಕಟ್ಟಡದಲ್ಲಿ ವಿದ್ಯಾರ್ಥಿ ನಿಲಯ ನಡೆಸುತ್ತಿದ್ದು ಸರ್ಕಾರದ ಹಣ ಪೋಲು ಮಾಡಲಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...