ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

Date:

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್ ಸಮರ್ಥಕ್ ಅನ್ನು ಅಕ್ಟೋಬರ್ 16ರಂದು ಕಾರವಾರದ ನೌಕಾನೆಲೆಯಲ್ಲಿ ಅಧಿಕೃತವಾಗಿ ನೌಕಾಪಡೆಗೆ ಸೇರ್ಪಡೆಗೊಳಿಸಲಾಗುತ್ತದೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಸೇರಿದಂತೆ ಹಿರಿಯ ನೌಕಾಪಡೆ ಮತ್ತು ರಕ್ಷಣಾ ಇಲಾಖೆಯ ಅಧಿಕಾರಿಗಳು, ಗಣ್ಯರು ಹಾಗೂ ಎಲ್‌ ಆ್ಯಂಡ್‌ ಟಿ ಕಂಪನಿಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

- Advertisement -

ಮೇಕ್ ಇನ್ ಇಂಡಿಯಾ ಯೋಜನೆಯಡಿ ನಿರ್ಮಾಣ: ಕೇಂದ್ರ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮದಡಿ ತಮಿಳುನಾಡಿನ ಕಟ್ಟುಪಳ್ಳಿಯಲ್ಲಿರುವ ಲಾರ್ಸನ್ ಅಂಡ್ ಟೂಬ್ರೊ (ಎಲ್‌ ಆ್ಯಂಡ್‌ ಟಿ) ಸಂಸ್ಥೆ ಈ ನೌಕೆಯನ್ನು ನಿರ್ಮಿಸಿದೆ. ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಲಿರುವ ನಾಲ್ಕು ಬಹು ಉದ್ದೇಶದ ನೌಕೆಗಳ ಪೈಕಿ ಐಎನ್‌ಎಸ್ ಸಮರ್ಥಕ್ ಮೊದಲನೆಯದಾಗಿದೆ. ಇದರ ಸೇರ್ಪಡೆಯು ದೇಶದ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ಪ್ರಯತ್ನಕ್ಕೆ ಮತ್ತಷ್ಟು ಬಲ ನೀಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಮುದ್ರ ಕಣ್ಗಾವಲು ಮತ್ತು ಗಸ್ತು ಕಾರ್ಯಾಚರಣೆಗಳಿಗಾಗಿ ವಿನ್ಯಾಸಗೊಳಿಸಲಾದ ಈ ನೌಕೆಯು ಕಡಿಮೆ ತೀವ್ರತೆಯ ಸಮುದ್ರ ಕಾರ್ಯಾಚರಣೆ, ಗುರಿ ನಿಯೋಜನೆ, ವಿವಿಧ ವ್ಯವಸ್ಥೆಗಳ ಪರೀಕ್ಷೆ ಹಾಗೂ ಮಾನವರಹಿತ ಮತ್ತು ಸ್ವಾಯತ್ತ ವ್ಯವಸ್ಥೆಗಳಿಗೆ ತಾಯಿ ನೌಕೆಯಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಇದರ ಜೊತೆಗೆ ಮಾನವೀಯ ನೆರವು, ವಿಪತ್ತು ಪರಿಹಾರ, ರಕ್ಷಣಾ ಕಾರ್ಯಾಚರಣೆ, ಮುಳುಗಿದ ವಸ್ತುಗಳ ಪತ್ತೆ ಮತ್ತು ರಕ್ಷಣೆ ಹಾಗೂ ಆಸ್ಪತ್ರೆ ನೌಕೆಯಾಗಿ ಸೇವೆ ಸಲ್ಲಿಸುವ ಸಾಮರ್ಥ್ಯವನ್ನೂ ಹೊಂದಿದೆ. ಸಮುದ್ರದಲ್ಲಿ ಸವಾಲಿನ ಪರಿಸ್ಥಿತಿಗಳನ್ನು ಎದುರಿಸಲು ಅನುಕೂಲವಾಗುವಂತೆ ಸ್ವದೇಶಿ ಸಂವೇದಕಗಳು, ಶಸ್ತ್ರಾಸ್ತ್ರಗಳು ಮತ್ತು ಎಲೆಕ್ಟ್ರಾನಿಕ್ ವ್ಯವಸ್ಥೆಗಳನ್ನು ಇದರಲ್ಲಿ ಅಳವಡಿಸಲಾಗಿದೆ.

5,000 ಟನ್ ತೂಕ, 7,200 ನಾಟಿಕಲ್ ಮೈಲುಗಳ ಸಾಮರ್ಥ್ಯ100 ಮೀಟರ್‌ಗಿಂತ ಹೆಚ್ಚು ಉದ್ದವಿರುವ ಐಎನ್‌ಎಸ್ ಸಮರ್ಥಕ್ ಸುಮಾರು 5,000 ಟನ್ ತೂಕ ಹೊಂದಿದೆ. ಈ ನೌಕೆಯು 7,200 ನಾಟಿಕಲ್ ಮೈಲುಗಳಿಗಿಂತಲೂ ಅಧಿಕ ದೂರ ಕ್ರಮಿಸುವ ಸಾಮರ್ಥ್ಯ ಹೊಂದಿದ್ದು, ಭಾರತೀಯ ನೌಕಾಪಡೆಯ ಕಾರ್ಯಾಚರಣಾ ಸಾಮರ್ಥ್ಯವನ್ನು ಹೆಚ್ಚಿಸಲಿದೆ.

ಬಹು ಉದ್ದೇಶದ ಈ ನೌಕೆಯ ಸೇರ್ಪಡೆಯಿಂದ ವಿಧ್ವಂಸಕ ನೌಕೆಗಳು, ಯುದ್ಧನೌಕೆಗಳು ಮತ್ತು ವಿಮಾನವಾಹಕ ನೌಕೆಗಳಂತಹ ಪ್ರಮುಖ ಸಮರ ನೌಕೆಗಳನ್ನು ಅವುಗಳ ಮುಖ್ಯ ಕಾರ್ಯಾಚರಣೆಗಳಿಗೆ ಬಳಸಲು ಹೆಚ್ಚಿನ ಅವಕಾಶ ದೊರೆಯಲಿದೆ. ಗುರಿ ನಿಯೋಜನೆ, ಸಿಬ್ಬಂದಿ ತರಬೇತಿ, ಸಮುದ್ರ ಕಣ್ಗಾವಲು, ಸರಕು ಸಾಗಣೆ ಮತ್ತು ಅಗತ್ಯ ನೆರವು ಒದಗಿಸುವ ಕಾರ್ಯಗಳಲ್ಲಿಯೂ ಐಎನ್‌ಎಸ್ ಸಮರ್ಥಕ್ ಪ್ರಮುಖ ಪಾತ್ರ ವಹಿಸಲಿದೆ.

ಲಾಂಛನದಲ್ಲಿ ಭಾರತೀಯ ಆನೆ ಐಎನ್‌ಎಸ್ ಸಮರ್ಥಕ್‌ನ ಲಾಂಛನದಲ್ಲಿ ಆಕ್ರಮಣಕಾರಿ ಭಂಗಿಯಲ್ಲಿರುವ ಭಾರತೀಯ ಆನೆಯ ಚಿತ್ರವಿದ್ದು, ಇದು ಶಕ್ತಿ, ಬುದ್ಧಿವಂತಿಕೆ ಮತ್ತು ಧೈರ್ಯವನ್ನು ಪ್ರತಿನಿಧಿಸುತ್ತದೆ. ಈ ನೌಕೆಯ ಸಿಬ್ಬಂದಿಯನ್ನು ‘ಪ್ರಚಂಡ ಪುಂಡರೀಕರು’ ಎಂದು ಕರೆಯಲಾಗುತ್ತದೆ. ಪುರಾಣಗಳಲ್ಲಿ ಉಲ್ಲೇಖವಾಗಿರುವ ಅಷ್ಟದಿಗ್ಗಜಗಳಲ್ಲಿ ಪುಂಡರೀಕನೂ ಒಬ್ಬನಾಗಿದ್ದು, ದಕ್ಷಿಣ-ಪೂರ್ವ ದಿಕ್ಕಿನ ರಕ್ಷಕನೆಂದು ಪರಿಗಣಿಸಲಾಗಿದೆ.

ಯಾವುದೇ ಕಾರ್ಯವನ್ನು ಯಾವುದೇ ಸಮಯದಲ್ಲಿ ನಿರ್ವಹಿಸಲು ಸಿದ್ಧವಾಗಿರುವುದು ಹಾಗೂ ತುರ್ತು ಸಂದರ್ಭಗಳಲ್ಲಿ ತಕ್ಷಣ ಸ್ಪಂದಿಸುವ ಸಾಮರ್ಥ್ಯ ಹೊಂದಿರುವುದು ಐಎನ್‌ಎಸ್ ಸಮರ್ಥಕ್‌ನ ಪ್ರಮುಖ ವೈಶಿಷ್ಟ್ಯಗಳಾಗಿವೆ ಎಂದು ನೌಕಾಪಡೆಯ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...