ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

Date:

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ ಅಡಿಪಾಯ ಹಾಕಿದ್ದರು. ಅವರ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಚಿಂತನೆಗಳಿಂದ ಪ್ರೇರಣೆ ಪಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ದೇಶದಲ್ಲಿ ಎಲ್ಲರೂ ಸಮಾನತೆ ಮತ್ತು ಸಹಬಾಳ್ವೆಯಿಂದ ಬದುಕಲು ಸಾಧ್ಯವಾಗಿದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ–2026ರ ಅಂಗವಾಗಿ ‘ಪ್ರಜಾಪ್ರಭುತ್ವದಲ್ಲಿ ಯುವ ಸಂಸತ್ತು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಜನರಿಗೆ, ವಿಶೇಷವಾಗಿ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವ ಮೂಲಕ ಬಸವಣ್ಣನವರು ಮಹತ್ವದ ಸಾಮಾಜಿಕ ಹಾಗೂ ಪ್ರಜಾಪ್ರಭುತ್ವದ ಸಂದೇಶ ಸಾರಿದ್ದರು. ಅದರ ಪ್ರೇರಣೆಯಿಂದ ಇಂದು ಮಹಿಳೆಯರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಸಾಧ್ಯವಾಗಿದೆ ಎಂದರು. ರಾಜ್ಯದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದ್ದು, ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವದ ತಳಹದಿಯಲ್ಲಿ ಆಡಳಿತ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ₹26 ಲಕ್ಷ ಪಾವತಿಸಿದರೂ ಬಡ್ಡಿ ಕಿರುಕುಳ: ಗುಂಡಿಕ್ಕುವುದಾಗಿ ಬೆದರಿಕೆ, ಮೂವರ ವಿರುದ್ಧ FIR

ದೇಶ ಕಟ್ಟುವ ಯುವಜನರಲ್ಲಿ ಪ್ರಜಾಪ್ರಭುತ್ವದ ಕುರಿತು ಅರಿವು ಮೂಡಿಸುವುದು ಅಗತ್ಯ. ಶಾಲಾ–ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪರಿಚಯಿಸಬೇಕು. ಶಾಂತಿ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರಬೇಕು ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣದ ಮೂಲಕ ಅಧಿಕಾರ ಹಾಗೂ ಅವಕಾಶಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಅಧಿಕಾರ ಎಲ್ಲರ ಕೈಯಲ್ಲಿದ್ದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ದೊರೆಯುತ್ತದೆ ಎಂದರು. ಶಾಸಕ ಸತೀಶ್ ಕೆ. ಸೈಲ್ ಮಾತನಾಡಿ, ಜನರಿಂದ, ಜನರಿಗಾಗಿ ಇರುವ ವ್ಯವಸ್ಥೆಯೇ ಪ್ರಜಾಪ್ರಭುತ್ವ. ಸಂವಿಧಾನದ ಆಶಯಗಳನ್ನು ಅನುಸರಿಸಿ ಆಡಳಿತ ನಡೆಸಬೇಕು. ಯುವಜನರಿಗೆ ಅಗತ್ಯವಾದ ಅವಕಾಶಗಳನ್ನು ಕಲ್ಪಿಸಬೇಕು. ಕರಾವಳಿ ಭಾಗದ ಅಭಿವೃದ್ಧಿಗೆ ಅಗತ್ಯ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಜನರ ಕಷ್ಟಗಳಿಗೆ ಸ್ಪಂದಿಸಿದಾಗ ಮಾತ್ರ ಪ್ರಜಾಪ್ರಭುತ್ವ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದರು. ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನದ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನವು ಎಲ್ಲರಿಗೂ ಹಲವು ಹಕ್ಕುಗಳು ಮತ್ತು ಅವಕಾಶಗಳನ್ನು ನೀಡಿದೆ. ದೊರೆತ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು. ಪ್ರಜಾಪ್ರಭುತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಒಂದು ತಿಂಗಳ ಕಾಲ ಯುವ ಸಂವಾದ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಈ ಸಭೆಗಳಲ್ಲಿ ವಿವಿಧ ಇಲಾಖೆಗಳ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಯುವಜನರಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಂಕೋಲಾದ ಗೋಖಲೆ ಸೆಂಟಿನರಿ ಕಾಲೇಜಿನ ಪ್ರಾಚಾರ್ಯ ಹಾಗೂ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಡಾ. ಸಿದ್ದಲಿಂಗಸ್ವಾಮಿ ವಿ. ವಸ್ತ್ರದ ಅವರು ‘ಯುವ ಸಂಪತ್ತು’ ಕುರಿತು ವಿಶೇಷ ಉಪನ್ಯಾಸ ನೀಡಿದರು.

ವಿಧಾನ ಪರಿಷತ್ ಶಾಸಕ ಗಣಪತಿ ಡಿ. ಉಳ್ವೇಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಾಲಚಂದ್ರ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ್ ವೈ.ಕೆ., ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಅಧ್ಯಕ್ಷರು, ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...