ಕಾರವಾರ | ಶಿರವಾಡ ಡಂಪಿಂಗ್ ಯಾರ್ಡ್‌ನಲ್ಲಿ ಭಾರಿ ಬೆಂಕಿ – ಆತಂಕದಲ್ಲಿ ಸ್ಥಳೀಯ ನಿವಾಸಿಗಳು

Date:

ಕಾರವಾರ: ನಗರದ ಹೊರವಲಯದ ಶಿರವಾಡದಲ್ಲಿರುವ ಕಾರವಾರ ನಗರಸಭೆಯ (ಸಿಎಂಸಿ) ತ್ಯಾಜ್ಯ ವಿಲೇವಾರಿ ಯಾರ್ಡ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯ ಭಸ್ಮವಾಗಿದೆ.

- Advertisement -

ಬೆಂಕಿಯ ಜ್ವಾಲೆ ಹಾಗೂ ದಟ್ಟವಾದ ಹೊಗೆಯಿಂದಾಗಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ಭೀತಿಗೊಳಗಾದ ಘಟನೆ ನಡೆದಿದೆ. ಶುಕ್ರವಾರ ಬೆಳಗಿನ ಜಾವ ಸುಮಾರು 3 ಗಂಟೆಯ ಹೊತ್ತಿಗೆ ಡಂಪಿಂಗ್ ಯಾರ್ಡ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿ ಸಂಗ್ರಹವಾಗಿದ್ದ ಒಣ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಬೆಂಕಿ ತಗುಲಿದ ಪರಿಣಾಮ, ಅದು ಕ್ಷಣಾರ್ಧದಲ್ಲಿ ಇಡೀ ಆವರಣಕ್ಕೆ ವ್ಯಾಪಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್ ಭವಿಷ್ಯಕ್ಕೆ...

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಹಲವು ಕಿಲೋಮೀಟರ್ ದೂರದವರೆಗೆ ದಟ್ಟವಾದ ಕಪ್ಪು ಹೊಗೆ ಆವರಿಸಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದರು.

ಬೆಂಕಿ ನಿಯಂತ್ರಣಕ್ಕೆ ಬಾರದ ಕಾರಣ ಅಂಕೋಲಾ ಹಾಗೂ ಗ್ರಾಸಿಮ್ ಇಂಡಸ್ಟ್ರೀಸ್‌ನಿಂದ ಹೆಚ್ಚುವರಿ ಅಗ್ನಿಶಾಮಕ ವಾಹನಗಳನ್ನು ಕರೆಸಿಕೊಳ್ಳಲಾಯಿತು. ನಗರಸಭೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟು ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು.

ಈ ಕುರಿತು ಮಾಹಿತಿ ನೀಡಿರುವ ಸಿಎಂಸಿ ಆಯುಕ್ತ ಜಗದೀಶ್ ಹುಲಿಗಜ್ಜಿ ಅವರು, ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಿದ್ದರಿಂದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಸದ್ಯ ಬೆಂಕಿಯನ್ನು ಬಹುತೇಕ ಹತೋಟಿಗೆ ತರಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಕೊಲೆ ಯತ್ನ ಹಾಗೂ ಕೊಲೆ ಪ್ರಕರಣ: ಆರು ಆರೋಪಿಗಳಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ಅಥವಾ ಯಾರೋ ಹಚ್ಚಿದ ಸಣ್ಣ ಬೆಂಕಿ ಇಷ್ಟೊಂದು ದೊಡ್ಡ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಶಿರವಾಡದ ಈ ಡಂಪಿಂಗ್ ಯಾರ್ಡ್ ಮೊದಲಿನಿಂದಲೂ ವಿವಾದದ ಕೇಂದ್ರವಾಗಿದ್ದು, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗ ಸಂಭವಿಸಿರುವ ಬೆಂಕಿ ಅವಘಡವು ಜನರ ಆತಂಕವನ್ನು ಇಮ್ಮಡಿಗೊಳಿಸಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹ ಕೇಳಿಬರುತ್ತಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ನಾಳೆ ಮುಂಡಗೋಡ ಬಂದ್‌ಗೆ ಹಿಂದೂ ಪರ ಸಂಘಟನೆಗಳ ಕರೆ

ಮುಂಡಗೋಡ: ತಾಲ್ಲೂಕಿನಲ್ಲಿ 12 ವರ್ಷದ ಬಾಲಕಿ ಮೇಲೆ ಚಾಕು ತೋರಿಸಿ ಲೈಂಗಿಕ...

ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ...

ರಾಯಚೂರು | ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಡಾ. ರಜಾಕ್ ಉಸ್ತಾದ್ ನಾಮನಿರ್ದೇಶನ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ರಾಯಚೂರಿನ ಡಾ. ರಜಾಕ್ ಉಸ್ನಾದ್...

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...