ಕಾರವಾರ | 61ನೇ ಫೆಮಿನಾ ಮಿಸ್ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ!

Date:

ಕಾರವಾರ: ಜಿಲ್ಲೆಯ ಪ್ರತಿಷ್ಠಿತ ರಾಜಕೀಯ ಕುಟುಂಬದ ಕುಡಿಯೊಂದು ಈಗ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಲು ಸಜ್ಜಾಗಿದೆ. ಕಾರವಾರದ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸೈಲ್ ಅವರು ಪ್ರತಿಷ್ಠಿತ ’61ನೇ ಫೆಮಿನಾ ಮಿಸ್ ಇಂಡಿಯಾ’ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ.

- Advertisement -

KIIT ವತಿಯಿಂದ ಆಯೋಜಿಸಲಾದ ಈ ಸ್ಪರ್ಧೆಯ ಅಂತಿಮ ಹಂತದ ಆಡಿಷನ್‌ಗಳು ಮುಗಿದಿದ್ದು, ದೇಶಾದ್ಯಂತ ಕೇವಲ 23 ಫೈನಲಿಸ್ಟ್‌ಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಈ ಟಾಪ್ 23ರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಸಾಧ್ವಿ ಸೈಲ್ ಅವರು ಗೋವಾ ರಾಜ್ಯದ ಪ್ರತಿನಿಧಿಯಾಗಿ ಸ್ಪರ್ಧಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವಿದ್ಯಾಭ್ಯಾಸದ ಜೊತೆ ಸಮಾಜಸೇವೆ: ಕೇವಲ ಮಾಡಲಿಂಗ್ ಮಾತ್ರವಲ್ಲದೆ, ಸಾಧ್ವಿ ಅವರು ಸಮಾಜಸೇವೆಯಲ್ಲೂ ಸಕ್ರಿಯರಾಗಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಅವರು ‘ಸ್ಮೈಲ್ ಫೌಂಡೇಶನ್’ ಜೊತೆಗೂಡಿ ಕೆಲಸ ಮಾಡುತ್ತಿದ್ದಾರೆ.

ತಮ್ಮ ತಂದೆ ಸತೀಶ್ ಸೈಲ್ ಅವರು ಶಾಸಕರಾಗಿ ಸಮಾಜದ ಸೇವೆ ಮಾಡುತ್ತಿರುವುದು ತಮಗೆ ಸ್ಪೂರ್ತಿ ಎಂದು ಅವರು ಹೇಳಿಕೊಂಡಿದ್ದಾರೆ. ಸಾಧ್ವಿ ಸೈಲ್ ಅವರು ಕೇವಲ ಸೌಂದರ್ಯ ಸ್ಪರ್ಧೆಯಲ್ಲಿ ಮಾತ್ರವಲ್ಲದೆ, ಶೈಕ್ಷಣಿಕ ಮತ್ತು ಇತರ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಬಡ ರೋಗಿಗಳಿಂದ ಹಣ ವಸೂಲಿ ಆರೋಪ: ವೈದ್ಯರಿಗೆ ಶಾಸಕ ಆರ್.ವಿ. ದೇಶಪಾಂಡೆ ಖಡಕ್ ಸೂಚನೆ

ಅವರು ರಾಜ್ಯ ಮಟ್ಟದ ಅಬಾಕಸ್ ಚಾಂಪಿಯನ್ ಆಗಿರುವುದಲ್ಲದೆ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಈಗಾಗಲೇ ಹಲವು ಪ್ರತಿಷ್ಠಿತ ಫ್ಯಾಷನ್ ಶೋಗಳಲ್ಲಿ ರ್ಯಾಂಪ್ ವಾಕ್ ಮಾಡಿರುವ ಅವರು, ಈಗ ದೇಶದ ಅತ್ಯುನ್ನತ ಸೌಂದರ್ಯ ಕಿರೀಟವನ್ನು ಮುಡಿಗೇರಿಸಿಕೊಳ್ಳುವ ಛಲ ಹೊಂದಿದ್ದಾರೆ.

ತಮ್ಮ ಮಗಳ ಈ ಸಾಧನೆಗೆ ಶಾಸಕ ಸತೀಶ್ ಸೈಲ್ ಹಾಗೂ ಕುಟುಂಬಸ್ಥರು ಮತ್ತು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದು, ಫೈನಲ್ ಸುತ್ತಿನಲ್ಲಿ ಜಯ ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...