ಕಾರವಾರ | ಒತ್ತಡದ ಬದುಕಿಗೆ ಸಂಗೀತ, ಕ್ರೀಡೆ ಮದ್ದು: ಆರ್.ವಿ. ದೇಶಪಾಂಡೆ

Date:

ಕಾರವಾರ: ದಿನನಿತ್ಯದ ಉದ್ಯೋಗದ ಒತ್ತಡದಲ್ಲಿ ಕೇವಲ ಜೀವನ ಸಾಗಿಸುವುದಕ್ಕಿಂತ, ಪ್ರತಿ ದಿನ ಸಂಗೀತ ಕೇಳುವುದರಿಂದ ಮನಸ್ಸಿಗೆ ಶಾಂತಿ ದೊರೆಯುತ್ತದೆ. ಆರೋಗ್ಯದ ಸಮಸ್ಯೆಗಳನ್ನು ಎದುರಿಸಲು ಮತ್ತು ದಣಿವನ್ನು ಮರೆಸಲು ಸಂಗೀತದಿಂದ ಸಾಧ್ಯ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ. ದೇಶಪಾಂಡೆ ಅವರು ಹೇಳಿದರು.

- Advertisement -

ಶುಕ್ರವಾರ ಕಾರವಾರದ ರವೀಂದ್ರನಾಥ್ ಠಾಗೋರ್ ಕಡಲತೀರದ ಮಯೂರ ವರ್ಮ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ‘ಕರಾವಳಿ ಉತ್ಸವ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾವು ಕೂಡ ಪ್ರತಿದಿನ ಸಂಜೆ ಸಂಗೀತ ಕೇಳುವ ಹವ್ಯಾಸ ಹೊಂದಿರುವುದಾಗಿ ಈ ಸಂದರ್ಭದಲ್ಲಿ ಅವರು ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಸಂಗೀತದಷ್ಟೇ ಕ್ರೀಡೆಯೂ ಮುಖ್ಯ ಎಂದ ಅವರು, ಜೀವನವು ಸ್ಪರ್ಧಾತ್ಮಕವಾಗಿದ್ದು ಸೋಲು-ಗೆಲುವು ಸಹಜ. ಆದರೆ ಯಾವುದೇ ಕಾರಣಕ್ಕೂ ಜೀವನದಲ್ಲಿ ಗುರಿಯನ್ನು ಬಿಡಬಾರದು. ಮಾನವನಾಗಿ ಹುಟ್ಟಿದ ಮೇಲೆ ಮಾನವೀಯತೆಯಿಂದ ಬಾಳಬೇಕು. ಪ್ರತಿಯೊಬ್ಬರಿಗೂ ಕ್ರೀಡೆ, ಸಂಗೀತ ಮತ್ತು ಮನರಂಜನೆಯಲ್ಲಿ ಅಭಿರುಚಿ ಇರಬೇಕು.

1000402192

ಆಧುನಿಕ ಕಾಲದಲ್ಲಿ ಜನರ ನಡುವೆ ಪ್ರೀತಿ, ವಿಶ್ವಾಸ ಮತ್ತು ನೆಮ್ಮದಿ ಕಡಿಮೆಯಾಗುತ್ತಿದ್ದು, ಇದನ್ನು ಸರಿದೂಗಿಸಲು ಇಂತಹ ಸಾಂಸ್ಕೃತಿಕ ಹವ್ಯಾಸಗಳು ಪೂರಕವಾಗಿವೆ ಎಂದು ತಿಳಿಸಿದರು. ಇದೇ ವೇಳೆ ಉತ್ಸವದ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟದ ಸ್ಪರ್ಧಾಳುಗಳಿಗೆ ಅವರು ಅಭಿನಂದನೆ ಸಲ್ಲಿಸಿದರು.

ಜಿಲ್ಲೆಯಲ್ಲಿ ಕರಾವಳಿ ಉತ್ಸವದ ಇತಿಹಾಸವನ್ನು ಸ್ಮರಿಸಿದ ಅವರು, 1992 ರಲ್ಲಿ ಮೊದಲ ಬಾರಿಗೆ ಈ ಉತ್ಸವ ಆರಂಭವಾಯಿತು. ಲಕ್ಷಾಂತರ ಜನರು ಭಾಗವಹಿಸುವ ಈ ಸಂಭ್ರಮವು ಮಧ್ಯದಲ್ಲಿ ಕೆಲವು ಕಾಲ ಸ್ಥಗಿತಗೊಂಡಿತ್ತು. ಆದರೆ ಈ ವರ್ಷ 18ನೇ ಕರಾವಳಿ ಉತ್ಸವವು ಸಚಿವರು, ಶಾಸಕರು, ಜಿಲ್ಲಾಡಳಿತದ ಅಧಿಕಾರಿಗಳು, ಕಲಾವಿದರು ಮತ್ತು ಸಾರ್ವಜನಿಕರ ಸಹಕಾರದಿಂದ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ-ಹಳಿಯಾಳದ ಮದ್ಯ-ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ; ಪಾಳಾ ಭಾಗದ ಮಟ್ಕಾ ದಂಧೆಗೆ ಬೀಳುತ್ತಾ ಬ್ರೇಕ್?

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹಾಗೂ ತರಬೇತಿ ನಿರತ ಐಎಎಸ್ ಅಧಿಕಾರಿ ಝೂಪಿಷನ್ ಹಕ್ ಉಪಸ್ಥಿತರಿದ್ದರು. ಅಲ್ಲದೆ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ. ಎನ್. ವಾಸರೆ, ತಾಲೂಕು ಅಧ್ಯಕ್ಷ ರಾಮ ನಾಯ್ಕ ಸೇರಿದಂತೆ ಜಿಲ್ಲೆಯ ಸಾಹಿತಿಗಳು ಮತ್ತು ಕಲಾವಿದರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...