ಕಾರವಾರ | ‘ಆಪರೇಷನ್ ಕ್ಲೀನ್’ ದಾಳಿ: ಫುಟ್‌ಪಾತ್ ಅತಿಕ್ರಮಣಕಾರರಿಗೆ ಮಂಜಾನೆ ಶಾಕ್

Date:

ಕಾರವಾರ: ನಗರದ ಸೌಂದರ್ಯಕ್ಕೆ ಮುಳುವಾಗಿದ್ದ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆ ಅತಿಕ್ರಮಣಗಳ ವಿರುದ್ಧ ಕಾರವಾರ ನಗರಸಭೆ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ‘ಯುದ್ಧ’ ಸಾರಿದ್ದಾರೆ.

- Advertisement -

‘ಆಪರೇಷನ್ ಕ್ಲೀನ್ ಕಾರವಾರ’ ಹೆಸರಿನಡಿ ಅನಿರೀಕ್ಷಿತ ದಾಳಿ ನಡೆಸಿದ ತಂಡ, ಪಾದಚಾರಿ ಮಾರ್ಗಗಳನ್ನು ಆಕ್ರಮಿಸಿಕೊಂಡಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿ ಜನಸಾಮಾನ್ಯರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ. ನಗರದ ಹೃದಯಭಾಗದಂತಿರುವ ಎಂ.ಜಿ. ರಸ್ತೆ ಹಾಗೂ ಪಿಕಳೆ ರಸ್ತೆಗಳಲ್ಲಿ ಈ ಕಾರ್ಯಾಚರಣೆ ತೀವ್ರವಾಗಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಈ ಪ್ರದೇಶಗಳಲ್ಲಿ ಫುಟ್‌ಪಾತ್ ಹಾಗೂ ಪಾರ್ಕಿಂಗ್ ಸ್ಥಳಗಳನ್ನು ಅಕ್ರಮವಾಗಿ ಬಳಸಿಕೊಂಡು ವ್ಯಾಪಾರ ನಡೆಸಲಾಗುತ್ತಿತ್ತು. ಇದರಿಂದಾಗಿ ಪಾದಚಾರಿಗಳು ರಸ್ತೆಯಲ್ಲೇ ನಡೆಯುವಂತಾಗಿ, ವಾಹನ ಸವಾರರು ಸಂಚಾರ ದಟ್ಟಣೆಯಿಂದ ಹೈರಾಣಾಗಿದ್ದರು. ಸಾರ್ವಜನಿಕರಿಂದ ಕೇಳಿಬಂದ ಸಾಲು ಸಾಲು ದೂರುಗಳಿಗೆ ಸ್ಪಂದಿಸಿದ ನಗರಸಭೆ, ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಕಾರ್ಯಾಚರಣೆಯ ವೇಳೆ ಅತಿಕ್ರಮಣಕಾರರಿಗೆ ಯಾವುದೇ ಅವಕಾಶ ನೀಡದ ಅಧಿಕಾರಿಗಳು, ಜೆಸಿಬಿ ಯಂತ್ರಗಳ ಮೂಲಕ ರಸ್ತೆ ಬದಿಯ ಗೂಡಂಗಡಿಗಳನ್ನು ನೆಲಸಮಗೊಳಿಸಿದರು. ರಸ್ತೆ ಆಕ್ರಮಿಸಿ ಇರಿಸಲಾಗಿದ್ದ ಫ್ರಿಡ್ಜ್‌ಗಳು ಹಾಗೂ ಇತರೆ ವ್ಯಾಪಾರೀ ಸಾಮಗ್ರಿಗಳನ್ನು ವಶಪಡಿಸಿಕೊಂಡು ನಗರಸಭೆಯ ವಾಹನಗಳಲ್ಲಿ ಸಾಗಿಸಲಾಯಿತು.

ಈ ಸುದ್ದಿ ಓದಿದ್ದೀರಾ ? ಕಾರವಾರ | ನೌಕಾಬಲಕ್ಕೆ ಆನೆಬಲ: ಕಲ್ವರಿ ಸಬ್‌ಮೆರಿನ್ ನಿರ್ವಹಣಾ ಕೇಂದ್ರ ಲೋಕಾರ್ಪಣೆ

ವ್ಯಾಪಾರಿಗಳಿಂದ ಎದುರಾಗಬಹುದಾದ ಪ್ರತಿರೋಧ ಅಥವಾ ಗಲಾಟೆಯನ್ನು ತಪ್ಪಿಸಲು ಅಧಿಕಾರಿಗಳು ಸೂರ್ಯ ಹುಟ್ಟುವ ಮೊದಲೇ ಕಾರ್ಯಾಚರಣೆ ಆರಂಭಿಸಿದ್ದರು. ಬಿಗಿ ಬಂದೋಬಸ್ತ್ ನಡುವೆ ನಡೆದ ಈ ದಿಢೀರ್ ಕ್ರಮದಿಂದಾಗಿ ಅತಿಕ್ರಮಣಕಾರರು ಕಂಗಾಲಾದರು.

ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ನಗರಸಭೆ ಸಿಬ್ಬಂದಿ ಯಶಸ್ವಿಯಾಗಿ ಕಾರ್ಯಾಚರಣೆ ಮುಗಿಸಿ, ರಸ್ತೆಗಳನ್ನು ಅತಿಕ್ರಮಣ ಮುಕ್ತಗೊಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...