ಕಾರವಾರ | ಸರಕಾರಿ ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆಯ ಆತ್ಮಹತ್ಯೆ ಯತ್ನ; ಆಸ್ಪತ್ರೆಗೆ ದಾಖಲು

Date:

ಕಾರವಾರ: ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ಸರಕಾರಿ ಬಾಲಕಿಯರ ಬಾಲಮಂದಿರದಲ್ಲಿ ಶನಿವಾರ ಮಧ್ಯಾಹ್ನ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

- Advertisement -

ತೀವ್ರವಾಗಿ ಅಸ್ವಸ್ಥಗೊಂಡಿರುವ ಬಾಲಕಿಯನ್ನು ಕಾರವಾರದ ಕ್ರಿಮ್ಸ್ (KIMS) ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ (SICU) ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಶನಿವಾರ ಮಧ್ಯಾಹ್ನ ಸುಮಾರು 1 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಯಾರಿಗೂ ತಿಳಿಯದಂತೆ ಬಾಲಮಂದಿರದ ಮೇಲಿನ ಮಹಡಿಯ ಕೊಠಡಿಗೆ ತೆರಳಿದ ಬಾಲಕಿ ನೇಣು ಹಾಕಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಸಿಬ್ಬಂದಿಯ ಸಮಯೋಚಿತ ಗಮನದಿಂದಾಗಿ ಆಕೆಯನ್ನು ತಕ್ಷಣವೇ ಕೆಳಗಿಳಿಸಿ ರಕ್ಷಣೆ ಮಾಡಲಾಗಿದ್ದು, ವಿಳಂಬ ಮಾಡದೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಈ ಬಾಲಕಿಯು ನಗರದ ಸರಕಾರಿ ಪ್ರೌಢಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಕಳೆದ ಆಗಸ್ಟ್ ತಿಂಗಳಲ್ಲಿ ನಡೆದ ಪೋಕ್ಸೋ ಪ್ರಕರಣವೊಂದರಲ್ಲಿ ಈಕೆ ಸಂತ್ರಸ್ತೆಯಾಗಿದ್ದಳು ಎಂದು ತಿಳಿದುಬಂದಿದೆ.

ಸಂತ್ರಸ್ತೆಯಾದ ದಿನದಿಂದಲೂ ಮಾನಸಿಕವಾಗಿ ತೀವ್ರ ಕುಗ್ಗಿದ್ದ ಬಾಲಕಿ, ಕಳೆದ ಎರಡು ವಾರಗಳಿಂದ ಶಾಲೆಗೆ ಹಾಜರಾಗದೆ ಬಾಲಮಂದಿರದಲ್ಲಿಯೇ ಉಳಿದುಕೊಂಡಿದ್ದಳು. ಘಟನೆಯ ಹಿನ್ನೆಲೆಯನ್ನು ವಿವರಿಸಿದ ಅಧಿಕಾರಿಗಳು, ಬಾಲಕಿ ಆಗಾಗ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಾ ಮಾನಸಿಕ ಆಘಾತದಿಂದ ವರ್ತಿಸುತ್ತಿದ್ದಳು.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಸತೀಶ್ ಸೈಲ್‌ಗೆ ಮತ್ತೆ ವೈದ್ಯಕೀಯ ಜಾಮೀನು ಮಂಜೂರು: ಲಿವರ್ ಕಸಿ ಶಸ್ತ್ರಚಿಕಿತ್ಸೆಗೆ ಹೈಕೋರ್ಟ್ ಅನುಮತಿ

ಈ ಹಿನ್ನೆಲೆಯಲ್ಲಿ ಆಕೆಯನ್ನು ಇತ್ತೀಚೆಗೆ ಧಾರವಾಡದ ಮಾನಸಿಕ ಆರೋಗ್ಯ ಸಂಸ್ಥೆಗೆ (DIMHANS) ಕರೆದೊಯ್ದು ತಜ್ಞರಿಂದ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಕೂಡ ಬಾಲಕಿಯ ನಡವಳಿಕೆಯಲ್ಲಿ ಸುಧಾರಣೆ ಕಂಡುಬಂದಿರಲಿಲ್ಲ ಎಂದು ತಿಳಿಸಿದ್ದಾರೆ.

ಪ್ರಸ್ತುತ ಈ ಬಾಲಮಂದಿರದಲ್ಲಿ ವಿವಿಧ ಪ್ರಕರಣಗಳಲ್ಲಿ ಸಂತ್ರಸ್ತರಾದ ಸುಮಾರು 20 ಬಾಲಕಿಯರು ಆಶ್ರಯ ಪಡೆದಿದ್ದು, ಅವರ ರಕ್ಷಣೆಗಾಗಿ 10 ಮಂದಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಷ್ಟೊಂದು ಸಂಖ್ಯೆಯ ಸಿಬ್ಬಂದಿ ಇದ್ದರೂ ಇಂತಹ ಘಟನೆ ನಡೆದಿರುವುದು ಬಾಲಮಂದಿರದ ಮೇಲ್ವಿಚಾರಣೆ ಹಾಗೂ ಅಲ್ಲಿನ ಮಾನಸಿಕ ಆರೋಗ್ಯ ಆರೈಕೆಯ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗೆ ಕಾರಣವಾಗಿದೆ.

ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...