ಕಾರವಾರ | ಕಾಳಿ ನದಿ ತೀರದಲ್ಲಿ ಅಶಕ್ತಗೊಂಡ ‘ಹಸಿರು ಆಮೆ’ ರಕ್ಷಣೆ: ಮರೈನ್ ಅರಣ್ಯ ಇಲಾಖೆಯ ತ್ವರಿತ ಕಾರ್ಯಾಚರಣೆ

Date:

ಕಾರವಾರ: ಇಲ್ಲಿನ ಸಂತೋಷಿ ಮಾತಾ ದೇವಸ್ಥಾನದ ಸಮೀಪದ ಕಾಳಿ ನದಿ ತೀರದಲ್ಲಿ ಅಶಕ್ತಗೊಂಡು ಬಿದ್ದಿದ್ದ ಸುಮಾರು 60 ವರ್ಷ ಪ್ರಾಯದ, 100 ಕೆಜಿಗೂ ಅಧಿಕ ತೂಕದ ಅಪರೂಪದ ‘ಗ್ರೀನ್ ಸೀ ಟರ್ಟಲ್’ (ಹಸಿರು ಕಡಲಾಮೆ) ಅನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ.

- Advertisement -

ನದಿ ದಡದಲ್ಲಿ ಬೃಹತ್ ಗಾತ್ರದ ಆಮೆಯೊಂದು ತೀವ್ರ ನಿತ್ರಾಣಗೊಂಡು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಕಾರವಾರದ ಮರೈನ್ ಅರಣ್ಯ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಅತೀ ಹೆಚ್ಚು ತೂಕ ಹೊಂದಿದ್ದ ಈ ಬೃಹತ್ ಜೀವಿಯನ್ನು ಸುರಕ್ಷಿತವಾಗಿ ದಡಕ್ಕೆ ತಂದು ಚಿಕಿತ್ಸೆ ಕೊಡಿಸಲು ಸಿಬ್ಬಂದಿ ಸಾಕಷ್ಟು ಹರಸಾಹಸ ಪಡಬೇಕಾಯಿತು.

1000539690

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅತ್ಯಂತ ಸಂರಕ್ಷಿತ ಪ್ರಭೇದವೆಂದು ಗುರುತಿಸಲ್ಪಡುವ ಈ ಗ್ರೀನ್ ಸೀ ಟರ್ಟಲ್, ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಅಥವಾ ನೀರಿನ ಉಪ್ಪಿನಾಂಶದ ವ್ಯತ್ಯಯದಿಂದ ದಾರಿ ತಪ್ಪಿ ನದಿಯ ಮುಖಾಂತರ ದಡ ಸೇರಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ ? ಅಂಕೋಲಾ | ಭೀಕರ ಸರಣಿ ಅಪಘಾತ: 12 ವಿದೇಶಿಗರು ಸೇರಿ 28 ಮಂದಿಗೆ ಗಾಯ, ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಸದ್ಯ ಈ ಅಪರೂಪದ ಜೀವಿಗೆ ಪಶುವೈದ್ಯರಿಂದ ತುರ್ತು ಚಿಕಿತ್ಸೆ ಕೊಡಿಸಲಾಗಿದ್ದು, ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ನಿಗಾದಲ್ಲಿದೆ.”ಆಮೆಯು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದೆ. ಇದು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ಸಮುದ್ರದ ಆಳ ಪ್ರದೇಶಕ್ಕೆ ಕೊಂಡೊಯ್ದು ಸುರಕ್ಷಿತವಾಗಿ ಬಿಡಲಾಗುವುದು” ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತೀವ್ರ ನಿತ್ರಾಣಗೊಂಡಿದ್ದ ಜೀವಿಯನ್ನು ರಕ್ಷಿಸುವಲ್ಲಿ ಮರೈನ್ ಅರಣ್ಯ ವಿಭಾಗ ತೋರಿಸಿದ ತ್ವರಿತ ಕಾಳಜಿಗೆ ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...