ಕಾರವಾರ | ಕೈಗಾ ರಸ್ತೆಯಲ್ಲಿ ಭಾರಿ ವಾಹನಗಳಿಗೆ ಕಡಿವಾಣ; ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

Date:

ಕಾರವಾರ: ಕೈಗಾ ರಸ್ತೆಯು ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಸತೀಶ ಸೈಲ್ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ಅಗತ್ಯ ಸೇವೆಗಳ ವಾಹನಗಳನ್ನು ಹೊರತುಪಡಿಸಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಸೈಲ್ ತಿಳಿಸಿದರು.

- Advertisement -

ಮಂಗಳವಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪರಿಶೀಲನೆಯಲ್ಲಿ ತಹಸೀಲ್ದಾರ್, ಡಿಎಸ್ಪಿ, ಪಿಡಬ್ಲ್ಯುಡಿ ಅಧಿಕಾರಿಗಳು, ಮೆಗಾ ಎಂಜಿನಿಯರಿಂಗ್ ಪ್ರತಿನಿಧಿಗಳು ಹಾಗೂ ಕೈಗಾ ಭಾಗದ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು. ಕೈಗಾ ರಸ್ತೆಯ ಹಲವು ಕಡೆಗಳಲ್ಲಿ ಸುಮಾರು 5ರಿಂದ 6 ಅಡಿ ಆಳದ ಗುಂಡಿಗಳು ನಿರ್ಮಾಣವಾಗಿವೆ. ಕೆಲವು ಗುಂಡಿಗಳಲ್ಲಿ ಬಸ್‌ಗಳೇ ಸಿಲುಕುವ ಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಕಾರವಾರ | ಅಕ್ರಮ ಹಣ ವರ್ಗಾವಣೆ ಆರೋಪ: ಸಿದ್ದಿಕ್ ಖಾನ್‌ಗೆ ಸೇರಿದ ನಾಲ್ಕು ಮನೆಗಳ ಮೇಲೆ ಇಡಿ ದಾಳಿ

ಬಸ್‌ಗಳು ಸಂಚರಿಸಲು ಸಾಧ್ಯವಾಗದ ಕಾರಣ ಶಾಲಾ ಮಕ್ಕಳು ಹಾಗೂ ಉದ್ಯೋಗಕ್ಕೆ ತೆರಳುವ ಕಾರ್ಮಿಕರು ಕೆಸರು ರಸ್ತೆಯಲ್ಲಿ ನಡೆದುಕೊಂಡು ಹೋಗಿ ಬೇರೆ ಸ್ಥಳದಲ್ಲಿ ಬಸ್ ಹತ್ತುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೂ ಇದರಿಂದ ಸಮಸ್ಯೆಯಾಗಿದೆ. ಈ ರಸ್ತೆಯ ಸಾಮರ್ಥ್ಯ ಸುಮಾರು 30 ಟನ್‌ಗಳಷ್ಟಿದ್ದರೂ, 70 ಟನ್‌ವರೆಗೆ ತೂಕದ ಭಾರಿ ವಾಹನಗಳು ನಿರಂತರವಾಗಿ ಸಂಚರಿಸುತ್ತಿರುವುದು ರಸ್ತೆ ಹಾಳಾಗಲು ಪ್ರಮುಖ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಕೈಗಾ ನೌಕರರ ಬಸ್‌ಗಳು, ಎಲ್‌ಪಿಜಿ ವಾಹನಗಳು, ಆಹಾರ ಸಾಮಗ್ರಿ ಸಾಗಿಸುವ ವಾಹನಗಳು, ಆಟೋ ಹಾಗೂ ಆಂಬ್ಯುಲೆನ್ಸ್‌ಗಳಿಗೆ ವಿನಾಯಿತಿ ನೀಡಿ, ಇತರ ಭಾರಿ ವಾಹನಗಳ ಸಂಚಾರ ನಿಯಂತ್ರಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಎರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಯಿದೆ. ಹಾಗೂ ಸದ್ಯ ಸಂಚಾರಕ್ಕೆ ತೊಂದರೆಯಾಗದಂತೆ ತುರ್ತು ಆಧಾರದ ಮೇಲೆ ಎರಡು ದಿನಗಳಲ್ಲಿ ರಸ್ತೆಗೆ ಪ್ಯಾಚ್‌ವರ್ಕ್ ನಡೆಸುವುದಾಗಿ ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ.

ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೊಸ ಸೇತುವೆ ನಿರ್ಮಾಣದ ಪ್ರಸ್ತಾವನೆಯನ್ನೂ ಪರಿಶೀಲಿಸಲಾಗುತ್ತಿದೆ. ಎಲ್‌ & ಟಿ ಸಂಸ್ಥೆಗೆ ಸೇರಿದ ಜಾಗ ಹಾಗೂ ಸ್ಥಳೀಯರಾದ ದಿಲೀಪ್ ಅರ್ಜುನ್ ನಾಯಕ ಅವರ ಕುಟುಂಬ ನೀಡಿರುವ ಜಮೀನನ್ನು ಬಳಸಿಕೊಂಡು ಹೊಸ ಬ್ರಿಡ್ಜ್ ನಿರ್ಮಿಸುವ ಸಾಧ್ಯತೆ ಕುರಿತು ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಹಿಂದೆ ಮಂಜೂರಾಗಿದ್ದ ಕೆರವಡಿ ಸೇತುವೆ ಯೋಜನೆ ಸ್ಥಗಿತಗೊಂಡಿರುವುದರಿಂದ ಈ ಭಾಗದ ಸಂಪರ್ಕ ವ್ಯವಸ್ಥೆಗೆ ತೊಂದರೆಯಾಗಿದೆ. ಒಟ್ಟಾರೆಯಾಗಿ ಇನ್ನೂ 2ರಿಂದ 3 ಸೇತುವೆಗಳ ಅಗತ್ಯವಿದೆ ಎಂದು ಶಾಸಕರು ತಿಳಿಸಿದ್ದಾರೆ.

ಈ ಎಲ್ಲಾ ವಿಷಯಗಳ ಕುರಿತು ಮುಂದಿನ 3ರಿಂದ 4 ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ನಡೆಸಿ, ಶಾಶ್ವತ ಪರಿಹಾರದ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಸಕ ಸತೀಶ ಸೈಲ್ ಹೇಳಿದರು.

ಹೆಚ್ಚಿನ ಅನುದಾನಕ್ಕೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಕೈಗಾ ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಈಗಾಗಲೇ ₹25 ಕೋಟಿ ಅನುದಾನ ನೀಡಿದೆ. ಆದರೆ ರಸ್ತೆ ಬಹುತೇಕ ಸಂಪೂರ್ಣವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಮೊತ್ತಕ್ಕಿಂತ ಹೆಚ್ಚಿನ ಅನುದಾನದ ಅಗತ್ಯವಿದೆ. ಆದ್ದರಿಂದ ಕಾಮಗಾರಿಯ ಸ್ವರೂಪವನ್ನು ಬದಲಿಸಿ ಸಮಗ್ರವಾಗಿ ರಸ್ತೆ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಅವರೊಂದಿಗೆ ಶೀಘ್ರದಲ್ಲೇ ಚರ್ಚಿಸಲಾಗುವುದು ಎಂದು ಸೈಲ್ ತಿಳಿಸಿದರು. ಇದೇ ವೇಳೆ, ಕೈಗಾ ಭಾಗದಲ್ಲಿ ₹15 ಸಾವಿರ ಕೋಟಿಯಿಂದ ₹25 ಸಾವಿರ ಕೋಟಿವರೆಗೆ ವಿವಿಧ ಬೃಹತ್ ಯೋಜನೆಗಳನ್ನು ಕೈಗೊಂಡಿರುವ ಮೆಗಾ ಎಂಜಿನಿಯರಿಂಗ್ ಸೇರಿದಂತೆ 2ರಿಂದ 3 ಪ್ರಮುಖ ಸಂಸ್ಥೆಗಳು ತಮ್ಮ ಸಿಎಸ್‌ಆರ್ ನಿಧಿಯ ಮೂಲಕ ಕನಿಷ್ಠ 10 ಕಿ.ಮೀ. ರಸ್ತೆಯನ್ನಾದರೂ ಅಭಿವೃದ್ಧಿಪಡಿಸಲು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ. ಕಂಪನಿಗಳಿಂದ ದೊರೆಯುವ ಪ್ರತಿಕ್ರಿಯೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...