ಕಾರವಾರ | ಕರಾವಳಿ ಉತ್ಸವದಲ್ಲಿ ಸೋನು ನಿಗಮ್ ಭಾವುಕ: ಹಳೆಯ ವಿವಾದಕ್ಕೆ ಪರೋಕ್ಷವಾಗಿ ಕ್ಷಮೆ ಕೋರಿದ ಗಾಯಕ

Date:

ಕಾರವಾರ: ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ತಮ್ಮ ಗಾಯನ ಮತ್ತು ಮಾತಿನ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ.

- Advertisement -

ಈ ಹಿಂದೆ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ನಡೆದಿದ್ದ ಘಟನೆಯನ್ನು ಪೆಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಕ್ಕೆ ಗುರಿಯಾಗಿದ್ದ ಸೋನು ನಿಗಮ್, ಈಗ ಉತ್ತರ ಕನ್ನಡ ಜಿಲ್ಲೆಯ ಮಣ್ಣಿನಲ್ಲಿ ಕನ್ನಡ ಹಾಡುಗಳನ್ನು ಹಾಡುವ ಮೂಲಕವೇ ಆ ಕಹಿ ಘಟನೆಯನ್ನು ಮರೆಸಿ ಅಭಿಮಾನಿಗಳ ಪ್ರೀತಿಯನ್ನು ಮತ್ತೆ ಸಂಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೀಡಿದ್ದ ಹೇಳಿಕೆಯಿಂದ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಸೋನು ನಿಗಮ್, ಈಗ ಉತ್ತರ ಕನ್ನಡದ ಮಣ್ಣಿನಲ್ಲಿ ಪರೋಕ್ಷವಾಗಿ ಕ್ಷಮೆ ಕೋರುವ ಮೂಲಕ ವಿವಾದಕ್ಕೆ ಪೂರ್ಣವಿರಾಮ ಇಟ್ಟಿದ್ದಾರೆ.

1000397241

ವೇದಿಕೆಯಲ್ಲಿ ಮಾತನಾಡಿದ ಅವರು, “ನಾನು ಹಿಂದಿ ಭಾಷಿಕನಾದರೂ, ಈ ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ ಅನಿಸುತ್ತದೆ. ಅದಕ್ಕೇ ಕನ್ನಡ ಸಾಹಿತ್ಯಕ್ಕೆ ತಕ್ಕಂತೆ ಭಾವನೆಯೂ ಮೂಡುತ್ತದೆ. ಕಳೆದ 30 ವರ್ಷಗಳಿಂದ ನಾನು ಕನ್ನಡ ಹಾಡುಗಳನ್ನು ಹಾಡುತ್ತಿದ್ದೇನೆ” ಎಂದು ಭಾವುಕರಾಗಿ ಹೇಳಿದರು.

ಈ ಮೂಲಕ ಕನ್ನಡದ ಮೇಲಿನ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ಈ ಮಾತುಗಳು ಇತ್ತೀಚಿನ ಕೆಲವು ವಿವಾದಗಳಿಗೆ ಪರೋಕ್ಷವಾಗಿ ಕ್ಷಮೆ ಕೋರಿದಂತಿತ್ತು ಮತ್ತು ನೆರೆದಿದ್ದ ಜನರು ಈ ಮಾತುಗಳನ್ನು ಕೇಳುತ್ತಿದ್ದಂತೆ ಜೋರಾಗಿ ಚಪ್ಪಾಳೆ ತಟ್ಟಿದರು.

ಈ ಸುದ್ದಿ ಓದಿದ್ದೀರಾ? ಭಟ್ಕಳ | ಕರ್ತವ್ಯ ಲೋಪ ಆರೋಪ: ಗ್ರಾಮೀಣ ಠಾಣೆಯ ಸಿಪಿಐ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಮಾನತು!

ಕೇವಲ ಮಾತಿಗಷ್ಟೇ ಸೀಮಿತವಾಗದ ಸೋನು ನಿಗಮ್, ವೇದಿಕೆಯ ಮೇಲೆ ಸತತ ಒಂದು ಗಂಟೆಗೂ ಹೆಚ್ಚು ಕಾಲ ಕೇವಲ ಕನ್ನಡ ಹಾಡುಗಳನ್ನೇ ಹಾಡಿದರು. ಸುಮಾರು 10ಕ್ಕೂ ಹೆಚ್ಚು ಜನಪ್ರಿಯ ಕನ್ನಡ ಗೀತೆಗಳನ್ನು ನಿರಂತರವಾಗಿ ಹಾಡುವ ಮೂಲಕ ಸಂಗೀತ ಪ್ರೇಮಿಗಳನ್ನು ರಂಜಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...