ಕಾರವಾರ | ಚಿತ್ತಾಕುಲದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸುರಕ್ಷಿತವಾಗಿ ಸೆರೆ

Date:

ಕಾರವಾರ: ಗೋಪಶಿಟ್ಟಾ ವಲಯದ ಚಿತ್ತಾಕುಲ ಶಹರ ಶಾಖೆಯ ಹಳೇಭಾಗ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಪದೇ ಪದೇ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟುಮಾಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಅಕ್ಟೋಬರ್ 4 ರಂದು ರಾತ್ರಿ 10.30 ರ ಸುಮಾರಿಗೆ ಕಾರವಾರ ವಿಭಾಗದ ಮಾನ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಕಾರವಾರ ಉಪವಿಭಾಗದ ಮಾನ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಗೋಪಶಿಟ್ಟಾ ವಲಯದ ಮಾನ್ಯ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ನಿರಂತರ ನಿಗಾವಹಿಸುವಿಕೆ ಹಾಗೂ ಸೂಕ್ತ ಕಾರ್ಯತಂತ್ರದ ಫಲವಾಗಿ ಚಿರತೆಯನ್ನು ಬೋನಿನಲ್ಲಿ ಸುರಕ್ಷಿತವಾಗಿ ಸೆರೆಹಿಡಿಯಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸುದ್ದಿ ಓದಿದ್ದೀರಾ? ಕುಮಟಾ | ಖೋ-ಖೋದಲ್ಲಿ ಸತತ 5ನೇ ಬಾರಿ ವಿಭಾಗ ಮಟ್ಟಕ್ಕೆ ಆಯ್ಕೆ; 3 ಕಿ.ಮೀ. ನಡಿಗೆಯಲ್ಲಿ ವಿನುತಾ ರಾಜ್ಯ ಮಟ್ಟಕ್ಕೆ

​ಬಳಿಕ, ಸೆರೆಹಿಡಿದ ಚಿರತೆಯು ಸಂಪೂರ್ಣವಾಗಿ ಆರೋಗ್ಯಕರವಾಗಿರುವುದನ್ನು ಖಚಿತಪಡಿಸಿಕೊಂಡು, ತಕ್ಷಣವೇ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ರವಾನಿಸಲಾಯಿತು.

​ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಗೋಪಶಿಟ್ಟಾ ವಲಯ ಅರಣ್ಯಾಧಿಕಾರಿಗಳು ಸ್ಥಳೀಯ ಗ್ರಾಮಸ್ಥರಿಗೆ ವನ್ಯಜೀವಿಗಳೊಂದಿಗೆ ಸಹಬಾಳ್ವೆ, ಚಿರತೆಗಳ ಸಂರಕ್ಷಣೆ ಹಾಗೂ ವನ್ಯಜೀವಿಗಳು ಜನವಸತಿ ಪ್ರದೇಶಗಳಲ್ಲಿ ಕಾಣಿಸಿಕೊಂಡಾಗ ಸಾರ್ವಜನಿಕರು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸಿದರು.

ಸ್ಥಳೀಯ ಗ್ರಾಮಸ್ಥರ ಸಕರಾತ್ಮಕ ಸಹಕಾರದಿಂದ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಯಿತು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದು, ಚಿರತೆ ಸೆರೆಯಿಂದಾಗಿ ಸಾರ್ವಜನಿಕರ ಆತಂಕ ಸಂಪೂರ್ಣವಾಗಿ ನಿವಾರಣೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...

ವಿಜಯಪುರ | ರಾಮಾನಂದ ತೀರ್ಥರ ಜನ್ಮದಿನ ಸರ್ಕಾರಿ ಜಯಂತಿಯಾಗಲಿ: ವಿನೋದ ಖೇಡ

ಹೈದ್ರಾಬಾದ್ ವಿಮೋಚನಾ ಚಳವಳಿಗೆ ನೇತೃತ್ವ ವಹಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಮೋಘ...

ಉಡುಪಿ | ಶ್ರೀಕೃಷ್ಣ ಮಠದ ವಸತಿಗೃಹದಲ್ಲಿ ಮುಸ್ಲಿಂ ಯುವತಿಗೆ ವಸತಿ ನಿರಾಕರಣೆ: ಸಿಪಿಐ(ಎಂ) ಖಂಡನೆ

ಹಿಂದೂ ಕುಟುಂಬದ ಸ್ನೇಹಿತೆಯೊಂದಿಗೆ ಪ್ರವಾಸಕ್ಕಾಗಿ ಉಡುಪಿಗೆ ಬಂದಿದ್ದ ಬಳ್ಳಾರಿಯ ಯುವತಿಯೊಬ್ಬರಿಗೆ ಮುಸ್ಲಿಂ...

ಮೈಸೂರು | ‘SIR’ ಫಾರಂ-7 ದುರ್ಬಳಕೆ: ಬಿಜೆಪಿ ಪದಾಧಿಕಾರಿ ಸೇರಿ ಮೂವರ ವಿರುದ್ಧ FIR!

ಮೈಸೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ 'ಫಾರಂ-7'...