ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

Date:

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಹಗಲಿರುಳು ಎನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಅವರ ಸೇವೆ ಶ್ಲಾಘನೀಯ ಎಂದು ನಗರಸಭೆ ಪೌರಾಯುಕ್ತ ಜಗದೀಶ್ ಹುಲಗಜ್ಜೆ ಹೇಳಿದರು.

- Advertisement -

ಬುಧವಾರ ನಗರಸಭೆ ವತಿಯಿಂದ ಕಾರವಾರದ ಮಕ್ಕಳ ಉದ್ಯಾನದಲ್ಲಿರುವ ಸ್ವಚ್ಛ ಕಲಿಕಾ ಕೇಂದ್ರದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಗಣೇಶ ಮೂರ್ತಿ ವಿಸರ್ಜನೆ, ಎಸ್‌ಐಆರ್‌, ಜಾತಿ ಗಣತಿ, ಪಡಿತರ ಚೀಟಿ ಸಮೀಕ್ಷೆ ಸೇರಿದಂತೆ ವಿವಿಧ ಸರ್ಕಾರಿ ಕಾರ್ಯಗಳ ಒತ್ತಡದ ನಡುವೆಯೂ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೌರಕಾರ್ಮಿಕರಿಗೆ ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಗೃಹಭಾಗ್ಯ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ಮಳೆಗಾಲದ ಬಳಿಕ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೌಜನ್ಯ ಪ್ರಕರಣದಲ್ಲಿ ಪ್ರಭಾವಿಗಳ ಜೊತೆಗೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಚಳವಳಿ ನಿಗ್ರಹಕ್ಕೆ ತೋರುವ ಶೌರ್ಯ ರಕ್ಷಣೆಯಲ್ಲೇಕಿಲ್ಲ? ಅಮಿತ್ ಶಾ...

ಯಾವುದೇ ಒಂದು ಆಡಳಿತದ ನಿಜವಾದ ಮಾನದಂಡ ಇರುವುದು ರಾಜಕೀಯ ಭಾಷಣಗಳಲ್ಲಲ್ಲ, ಬದಲಿಗೆ ಆ ಆಡಳಿತದಲ್ಲಿ ಸಾಮಾನ್ಯ ನಾಗರಿಕರು, ವಿಶೇಷವಾಗಿ ಮಹಿಳೆಯರು, ಪಡೆಯುವ ಭದ್ರತೆಯಲ್ಲಿ. ರಾಜಧಾನಿಯಲ್ಲಿ ಸಾಲು ಸಾಲಾಗಿ ಹರಿದ ರಕ್ತ ಮತ್ತು ಈ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಎಸ್‌ಐಆರ್‌: ಸೆಪ್ಟೆಂಬರ್ ಅಂತ್ಯದೊಳಗೆ ಬಾಕಿ ಪ್ರಕರಣಗಳ ವಿಚಾರಣೆ ಪೂರ್ಣ — ಡಿಸಿ ಕೆ. ಲಕ್ಷ್ಮೀಪ್ರಿಯಾ

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಎಸ್. ಮಾತನಾಡಿ, ‘ಆಡು ಮುಟ್ಟದ ಸೊಪ್ಪಿಲ್ಲ, ಮುನ್ಸಿಪಾಲಿಟಿ ಮಾಡದ ಕೆಲಸವಿಲ್ಲ’ ಎಂಬಂತಾಗಿದೆ ನಗರಸಭೆ ಸಿಬ್ಬಂದಿಯ ಕಾರ್ಯವ್ಯಾಪ್ತಿ. ಕಚೇರಿ ಕೆಲಸದ ಜೊತೆಗೆ ಜನಗಣತಿ, ಗೃಹಭಾಗ್ಯ, ಎಸ್‌ಐಆರ್‌, ಗೃಹಲಕ್ಷ್ಮಿ ಸೇರಿದಂತೆ ವಿವಿಧ ಸರ್ಕಾರಿ ಕಾರ್ಯಗಳಲ್ಲಿಯೂ ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ ಎಂದರು.

ಕಾರವಾರ ನಗರಸಭೆ ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಶಂಕರ ಚೆಲುವಾ ಶಿರ್ಸಿಕರ ಮಾತನಾಡಿ, ಪೌರಕಾರ್ಮಿಕರ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಕ್ಕಾಗಿ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿದರು. ಗೃಹಯೋಜನೆಯಡಿ ಪೌರಕಾರ್ಮಿಕರಿಗೆ ನೀಡಲಾಗುತ್ತಿರುವ ವಸತಿ ಯೋಜನೆಯಡಿ ಈ ವರ್ಷದ ಅಂತ್ಯದೊಳಗೆ ಮನೆಗಳ ನಿರ್ಮಾಣ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಆರೋಗ್ಯ ತಪಾಸಣೆ, ಸಾಂಸ್ಕೃತಿಕ ಹಾಗೂ ರಸಮಂಜರಿ ಕಾರ್ಯಕ್ರಮಗಳು ನಡೆದವು. ಆರೋಗ್ಯ ಇಲಾಖೆಯ ಡಾ. ಶಾಗುಪಾ ಸೈಯದ್, ನಗರಸಭೆ ಕಂದಾಯ ಅಧಿಕಾರಿ ರವಿ ನಾಯ್ಕ, ಹಿರಿಯ ಆರೋಗ್ಯ ಅಧಿಕಾರಿ ಸುನೀಲ ಗಾವಡೆ, ವ್ಯವಸ್ಥಾಪಕಿ ಮೋಸಿನಾ ಫಿರಜಾದೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್,

ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ರಾದ ಕೆ.ಎಸ್. ಕಮ್ಮಾರ, ಭಾಸ್ಕರ್ ಗೌಡ ಸೇರಿದಂತೆ ನಗರಸಭೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ಪೌರಕಾರ್ಮಿಕರು ಉಪಸ್ಥಿತರಿದ್ದರು. ಸಹಾಯಕ ಕಾರ್ಯಪಾಲಕ ಅಭಿಯಂತರ ನಾರಾಯಣ ನಾಯ್ಕ ಸ್ವಾಗತಿಸಿದರು. ನಗರಸಭೆಯ ಮಂಜುನಾಥ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನರಸಾಪುರದಲ್ಲಿ ಸೆ.26ರಂದು ಪ್ರಜಾ ಸೇವೆ ಆಂದೋಲನ

ಒಂದೇ ಸೂರಿನಡಿ ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ...

ಕೆಜಿಎಫ್ | ಯುವಜನರ ಧ್ವನಿಗೆ ವೇದಿಕೆಯಾದ ಕೆಜಿಎಫ್‌ನ ಯುವಜನ ಮನ ಸಂಭ್ರಮೋತ್ಸವ

ಯುವಜನರಲ್ಲಿ ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸುವುದು, ಸಂವಿಧಾನಿಕ ಮೌಲ್ಯಗಳನ್ನು ಬೆಳೆಸುವುದು...

ಬಾಗೇಪಲ್ಲಿ | ಸೆ.26ರಿಂದ ಪಟ್ಟಣದಲ್ಲಿ ಡಿವೈಎಫ್‍ಐ 13ನೇ ರಾಜ್ಯ ಯುವಜನ ಸಮ್ಮೇಳನ

ಬಾಗೇಪಲ್ಲಿ ಪಟ್ಟಣದಲ್ಲಿ ರಾಜ್ಯಮಟ್ಟದ 13 ನೇ ಯುವಜನ ಸಮ್ಮೇಳನ ತಾಲ್ಲೂಕು ಪಂಚಾಯತಿ...