ಕಾರವಾರ | ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ರಹಿತ ₹1 ಕೋಟಿ ಹಣ ಪತ್ತೆ; ಇಬ್ಬರು ಪೊಲೀಸರ ವಶಕ್ಕೆ

Date:

ಕಾರವಾರ: ಗೋವಾ-ಕರ್ನಾಟಕ ಗಡಿಭಾಗದ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ತಡರಾತ್ರಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ದಾಖಲೆರಹಿತ ಬರೋಬ್ಬರಿ ಒಂದು ಕೋಟಿ ರೂ. ನಗದು ಪತ್ತೆಯಾಗಿದೆ. ಗೋವಾದಿಂದ ತಮಿಳುನಾಡಿಗೆ ಸಾಗಿಸಲಾಗುತ್ತಿದ್ದ ಈ ಬೃಹತ್ ಮೊತ್ತವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಪ್ರಕರಣದ ಹಿನ್ನೆಲೆ: ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳಾದ ಪಿ.ಎಸ್.ಐ ಪರಶುರಾಮ ಮಿರ್ಜಿಗಿ ತಂಡವು ರಾತ್ರಿ ವೇಳೆ ಎಂದಿನಂತೆ ಖಾಸಗಿ ಬಸ್ಸುಗಳ ತಪಾಸಣೆ ನಡೆಸುತ್ತಿತ್ತು. ಈ ವೇಳೆ, ತಮಿಳುನಾಡು ಕಡೆಗೆ ಹೊರಟಿದ್ದ ಬಸ್ಸೊಂದರ ಪ್ರಯಾಣಿಕರ ಬ್ಯಾಗ್‌ಗಳನ್ನು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ತಪಾಸಣೆ ನಡೆಸುವಾಗ, ಬೆಂಗಳೂರು ಮೂಲದ ಕಲ್ಪೇಶ್ ಕುಮಾರ್ ಮತ್ತು ರಾಜಸ್ಥಾನ ಮೂಲದ ಬಮರ ರಾಮ್ ಎಂಬ ಇಬ್ಬರು ಪ್ರಯಾಣಿಕರಿಗೆ ಸೇರಿದ ಬ್ಯಾಗ್‌ನಲ್ಲಿ ಐನೂರು ರೂ. ಮುಖಬೆಲೆಯ ನೋಟುಗಳ ಬೃಹತ್ ಬಂಡಲ್‌ಗಳು ಪತ್ತೆಯಾಗಿವೆ. ಕೂಡಲೇ ಅವರಿಗೆ, ಹಣದ ಮೂಲ ಮತ್ತು ದಾಖಲೆಗಳನ್ನು ಕೇಳಿದಾಗ ಅವರು ಯಾವುದೇ ಸೂಕ್ತ ಮಾಹಿತಿ ಅಥವಾ ದಾಖಲೆಗಳನ್ನು ನೀಡಲು ವಿಫಲರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಪ್ರಾಥಮಿಕ ವಿಚಾರಣೆ ವೇಳೆ, ಈ ಹಣವನ್ನು ಗೋವಾದಿಂದ ತಮಿಳುನಾಡಿನ ಹೊಸೂರಿಗೆ ವ್ಯಾಪಾರ ವ್ಯವಹಾರಕ್ಕಾಗಿ ಸಾಗಿಸಲಾಗುತ್ತಿತ್ತು ಎಂದು ಆರೋಪಿಗಳು ಹೇಳಿದ್ದಾರೆ ಎನ್ನಲಾಗಿದೆ. ಆದರೆ, ಈ ಹಣದ ಮೂಲಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಪೊಲೀಸರಿಗೆ ನೀಡದ ಕಾರಣ, ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಿತ್ತಾಕುಲ ಪೊಲೀಸರು ಹಣವನ್ನು ವಶಪಡಿಸಿಕೊಂಡು, ಕಲ್ಪೇಶ್ ಕುಮಾರ್ ಮತ್ತು ಬಮರ ರಾಮ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಣವು ಇತರ ಯಾವುದೇ ಅಕ್ರಮ ಸಾಗಾಟಕ್ಕೆ ಸಂಬಂಧಿಸಿದೆಯೇ ಎಂಬ ನಿಟ್ಟಿನಲ್ಲಿ ತನಿಖೆಯನ್ನು ತೀವ್ರಗೊಳಿಸಲಾಗಿದೆ. ಘಟನೆಯ ನಂತರ, ಮಾಜಾಳಿ ಅಂತರರಾಜ್ಯ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಂಕೋಲಾ | ಪುರಸಭೆ ಸದಸ್ಯರಿಂದ ಸಾಮೂಹಿಕ ರಾಜೀನಾಮೆ! ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಕೆ.

ಉತ್ತರಕನ್ನಡ ಪೊಲೀಸ್ ಅಧೀಕ್ಷಕರಾದ ದೀಪನ್ ಎಂ.ಎನ್. ಐ.ಪಿ.ಎಸ್ ಹಾಗೂ ಕೃಷ್ಣಮೂರ್ತಿ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಜಗದೀಶ ಎಂ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಎಸ್ ವಿ ಗಿರೀಶ್, ಡಿ.ವೈ.ಎಸ್.ಪಿ. ಕಾರವಾರ ಉಪ ವಿಭಾಗ, ಸಿಪಿಐ ಪ್ರಭಾಕರ ಧರ್ಮಟ್ಠಿ ಮಾರ್ಗದರ್ಶನದಲ್ಲಿ ಚಿತ್ತಾಕುಲ ಠಾಣೆಯ ಪಿ.ಎಸ್.ಐ ಪರಶುರಾಮ ನೇತೃತ್ವದಲ್ಲಿ ಚೆಕ್‌ಪೊಸ್ಟ್ ಸಿಬ್ಬಂದಿ ಥಾಮಸ್ ,ಗಣೇಶ ,ಗೌತಮ ರಾಜ್,ಪ್ರದೀಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...