ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

Date:

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ–2026 ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯಿತು.

- Advertisement -

ಪರೀಕ್ಷೆಯು ಎರಡು ಅವಧಿಗಳಲ್ಲಿ ನಡೆದಿದ್ದು, ಬೆಳಗಿನ ಅವಧಿಯಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಪರೀಕ್ಷೆ ನಡೆಯಿತು. ಈ ಅವಧಿಗೆ 8,222 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 5,847 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. 2,375 ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಮಧ್ಯಾಹ್ನದ ಅವಧಿಯಲ್ಲಿ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಪರೀಕ್ಷೆ ನಡೆದಿದ್ದು, 5,824 ಅಭ್ಯರ್ಥಿಗಳು ಹಾಜರಾಗಿದ್ದಾರೆ. 2,399 ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ.

ಪರೀಕ್ಷೆಯ ವೇಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದ್ದ ಮಾರ್ಗಸೂಚಿಗಳು, ಗೌಪ್ಯತಾ ನಿಯಮಗಳು ಹಾಗೂ ಪರೀಕ್ಷಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.

ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಬಂದೋಬಸ್ತ್, ವೈದ್ಯಕೀಯ ಸೌಲಭ್ಯ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗಿತ್ತು. ಜಿಲ್ಲಾ ಆಡಳಿತದ ಸಮನ್ವಯದಲ್ಲಿ ಪೊಲೀಸ್, ಶಿಕ್ಷಣ, ಆರೋಗ್ಯ, ಹೆಸ್ಕಾಂ, ಸಾರಿಗೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯ ನಿರ್ವಹಿಸುವ ಮೂಲಕ ಪರೀಕ್ಷೆ ಸುಗಮವಾಗಿ ನಡೆಯಲು ಸಹಕರಿಸಿದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಅವರು ಅಂಕೋಲಾ ಹಾಗೂ ಕುಮಟಾದಲ್ಲಿನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಪರೀಕ್ಷೆಯ ಸುಗಮ ನಿರ್ವಹಣೆಗಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಉಪಮುಖ್ಯ ಅಧೀಕ್ಷಕರು ಹಾಗೂ ವೀಕ್ಷಕರನ್ನು ನಿಯೋಜಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...